ಡೆಂಘೀ ತಡೆಗೆ ಜನತೆಯ ಸಹಕಾರ ಅಗತ್ಯ

KannadaprabhaNewsNetwork | Published : Jul 20, 2024 12:48 AM

ಸಾರಾಂಶ

ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪುರಸಭೆ ಪ್ರತಿ ವಾರ್ಡಿನಲ್ಲಿ ವಿಶೇಷ ಸ್ವಚ್ಛತಾ ಅಭಿಯಾನವನ್ನ ಹಮ್ಮಿಕೊಂಡಿದೆ. ಈ ಅಭಿಯಾನಕ್ಕೆ ಸಾರ್ವಜನಿಕರು ಸಹಕರಿಸಬೇಕು

ಕನ್ನಡಪ್ರಭ ವಾರ್ತೆ ಮಾಲೂರು

ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಚಿಕೂನ್ ಗುನ್ಯಾ, ಡೆಂಘೀ, ಮಲೇರಿಯಾ ಮತ್ತಿತರ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವ ಸಲುವಾಗಿ ನಾಗರಿಕರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪುರಸಭೆಯೊಂದಿಗೆ ಕೈಜೋಡಿಸುವಂತೆ ತಹಸೀಲ್ದಾರ್ ಕೆ ರಮೇಶ್ ಮನವಿ ಮಾಡಿದರು.ಡೆಂಘೀ ನಿಯಂತ್ರಣಕ್ಕಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪುರಸಭೆ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.

ನೀರು ನಿಲ್ಲದಂತೆ ಜಾಗೃತಿ ವಹಿಸಿ

ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪುರಸಭೆ ಪ್ರತಿ ವಾರ್ಡಿನಲ್ಲಿ ವಿಶೇಷ ಸ್ವಚ್ಛತಾ ಅಭಿಯಾನವನ್ನ ಹಮ್ಮಿಕೊಂಡಿದೆ. ಈ ಅಭಿಯಾನಕ್ಕೆ ಸಾರ್ವಜನಿಕರು ಸಹಕರಿಸಬೇಕು. ನೀರು ಸಂಗ್ರಹಿಸುವ ಸೀಮೆಂಟ್ ತೊಟ್ಟಿ, ಬ್ಯಾರಲ್, ಡ್ರಮ್, ಬಕೆಟ್, ಏರ್ ಕೂಲರ್, ಕೊಡಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಒಣಗಿಸಿ ಮತ್ತೆ ಭರ್ತಿ ಮಾಡಿ ಸಂಪೂರ್ಣವಾಗಿ ಮುಚ್ಚಿಡಬೇಕು. ಮನೆಯ ಸುತ್ತಮುತ್ತಲಿನ ಅಂಗಳವನ್ನು ನಿಂತ ನೀರಿನಿಂದ ಮುಕ್ತವಾಗಿರಿಸಿಕೊಳ್ಳಬೇಕು ಎಂದರು.

ಮುನ್ನೆಚ್ಚರಿಕೆ ವಹಿಸಿ:

ಪುರಸಭೆ ಮುಖ್ಯಧಿಕಾರಿ ಎ ಬಿ ಪ್ರದೀಪ್ ಮಾತನಾಡಿ ಡೆಂಘೀ ನಿಯಂತ್ರಣಕ್ಕೆ ಪುರಸಭೆಯಿಂದ ಈಗಾಗಲೇ ಪ್ರತಿನಿತ್ಯ ಸಮರ್ಪಕ ಘನತ್ಯಾಜ್ಯ ವಿಲೇವಾರಿ ಚರಂಡಿ ಸ್ವಚ್ಛತೆ ಕೊಳಚೆ ಪ್ರದೇಶಗಳಲ್ಲಿ ಹೆಚ್ಚಿನ ಗಮನ ಆರಿಸಿ, ಕೀಟನಾಶಕಗಳ ಸಿಂಪಡಣೆ ಕಾಲಕಾಲಕ್ಕೆ ಭೂಮಿಕರಣ ಕಾರ್ಯವನ್ನು ನಿರಂತರವಾಗಿ ಕೈಗೊಳ್ಳಲಾಗಿದೆ. ಅಂತಹ ಸಾಂಕ್ರಾಮಿಕ ರೋಗಗಳ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಹಿರಿಯ ಅರೋಗ್ಯ ನಿರೀಕ್ಷಿಕ ಬಾನು ಪ್ರತಾಪ್ ವರ್ಮಾ, ಶುಶ್ರಕಿ ವನಜಾಕ್ಷಿ, ಪರಿಸರ ಅಭಿಯಂತರ ಶಾಲಿನಿ, ಆರೋಗ್ಯ ನಿರೀಕ್ಷಕರಾದ ಶ್ರೀನಿವಾಸ್, ರಾಜಣ್ಣ, ವೆಂಕಟೇಶ್, ಇನ್ನಿತರರು ಹಾಜರಿದ್ದರು.

Share this article