ಪಂಚ ಗ್ಯಾರಂಟಿ ಮೂಲಕ ಜನರ ಆರ್ಥಿಕ ಶಕ್ತಿ ಹೆಚ್ಚಾಗಿದೆ: ಎಂ.ಸಿ. ಶಿವಾನಂದಸ್ವಾಮಿ

KannadaprabhaNewsNetwork |  
Published : Sep 19, 2025, 01:00 AM IST
ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ರಾಜ್ಯದಲ್ಲೇ ಪ್ರಥಮ ಸ್ಥಾನ | Kannada Prabha

ಸಾರಾಂಶ

ತರೀಕೆರೆ, ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜನರ ಆರ್ಥಿಕ ಶಕ್ತಿ ಹೆಚ್ಚಾಗಿದೆ ಎಂದು ಚಿಕ್ಕಮಗಳೂರು ಜಿಲ್ಲೆ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ ಹೇಳಿದ್ದಾರೆ.

-ಪಂಚ ಗ್ಯಾರಂಟಿ ಯೋಜನೆ ಅನುಷ್ಟಾನದಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ರಾಜ್ಯದಲ್ಲೇ ಪ್ರಥಮ ಸ್ಥಾನ

ಕನ್ನಡಪ್ರಭ ವಾರ್ತೆ, ತರೀಕೆರೆ

ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜನರ ಆರ್ಥಿಕ ಶಕ್ತಿ ಹೆಚ್ಚಾಗಿದೆ ಎಂದು ಚಿಕ್ಕಮಗಳೂರು ಜಿಲ್ಲೆ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ ಹೇಳಿದ್ದಾರೆ.ಗುರುವಾರ ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆ ಅನುಷ್ಟಾನ ತಾಲೂಕು ಸಮಿತಿ ಸಭೆ ನಂತರ ಪಂಚ ಗ್ರಾರಂಟಿ ಯೋಜನೆ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ತರೀಕೆರೆ ತಾಲೂಕಿನಲ್ಲಿ ಪಂಚ ಗ್ಯಾರಂಟಿ ಯೋಜನೆಯನ್ನು ಯಶಸ್ವಿಯಾಗಿ ತಲುಪಿಸಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ 35,962 ಯಜಮಾನಿಯರಿಗೆ 21 ಕಂತುಗಳ ಮೂಲಕ ₹138 ಕೋಟಿ ಗಳನ್ನು ಸರ್ಕಾರ ನೀಡಿದೆ. ಉಳಿದ ಮೂರು ಕಂತುಗಳನ್ನು ನವರಾತ್ರಿ ಅಥವಾ ದೀಪಾವಳಿ ಒಳಗೆ ಪಾವತಿಸಲಾಗುವುದು. ಗೃಹಜ್ಯೋತಿ ಯೋಜನೆಯಡಿ 45, 986 ಮನೆಗಳಿಗೆ ಅಂದರೆ ಒಂದು ವರೆ ಲಕ್ಷ ಜನರಿಗೆ ಉಚಿತ ವಿದ್ಯುತ್ ಒದಗಿಸಲಾಗುತ್ತಿದೆ.ಇದಕ್ಕಾಗಿ ತಾಲೂಕಿಗೆ ಸರ್ಕಾರ ₹32 ಕೋಟಿ ನೀಡಿದೆ ಎಂದು ಹೇಳಿದರು.ಶಕ್ತಿ ಯೋಜನೆ, ಅನ್ನಭಾಗ್ಯ ಯುವನಿಧಿ, ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಯಡಿ ತಾಲೂಕಿಗೆ ಇದುವರೆಗೆ ₹250 ಕೋಟಿ ಸಂದಾಯವಾಗಿದೆ. ಜಿಲ್ಲೆಯಲ್ಲಿ 10 ಲಕ್ಷ ಜನರಿಗೆ ಪಂಚ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ. ಒಟ್ಟಾರೆ ಜಿಲ್ಲೆಯಲ್ಲಿ ₹2000 ಕೋಟಿ ಹಣ ಭರಿಸಲಾಗಿದೆ. ತಾಲೂಕಿನಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅರ್ಜಿಗಳು ಸಮರ್ಪಕವಾಗಿ

ವಿಲೇವಾರಿ ಯಾಗುತ್ತಿದ್ದು, ಜಿಲ್ಲೆಯಲ್ಲಿ ಶೇ.98ರಷ್ಟು ಪ್ರಗತಿ ಸಾಧಿಸಿದೆ. ಪಂಚ ಗ್ಯಾರಂಟಿ ಯೋಜನೆ ಅನುಷ್ಟಾನದಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ರಾಜ್ಯದಲ್ಲೇ ಪ್ರಥಮ ಸ್ಥಾನ ದೊರಕಿದೆ ಎಂದು ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿರುವುದು ತಮಗೆ ಸಂತೋಷ ತಂದಿದೆ ಎಂದರು.ಪಂಚ ಗ್ಯಾರಂಟಿ ಯೋಜನೆ ಅನುಷ್ಟಾನ ಪ್ರಾಧಿಕಾರದ ಜಿಲ್ಲಾ ಉಪಾಧ್ಯಕ್ಷ ಸಮೀವುಲ್ಲಾ ಷರೀಪ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ.ಆರ್. ದೇವೇಂದ್ರಪ್ಪ ಉಪಸ್ಥಿತರಿದ್ದರು.

-

18ಕೆಟಿಆರ್.ಕೆ.3ಃ

ತರೀಕೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಚಿಕ್ಕಮಗಳೂರು ಜಿಲ್ಲೆ ಗ್ಯಾರಂಟಿ ಯೋಜನೆ ಅನುಷ್ಟಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ ಮಾತನಾಡಿದರು. ಪಂಚ ಗ್ಯಾರಂಟಿ ಯೋಜನೆ ಅನುಷ್ಟಾನ ಪ್ರಾಧಿಕಾರದ ಜಿಲ್ಲಾ ಉಪಾಧ್ಯಕ್ಷ ಸಮೀವುಲ್ಲಾ ಷರೀಪ್, ತಾಪಂ ಕಾರ್ಯನಿರ್ವಹಣಾಧಿಕಾರಿ ಡಾ.ಆರ್.ದೇವೇಂದ್ರಪ್ಪ ಇದ್ದರು.

PREV

Recommended Stories

ಸಹಕಾರಿ ತತ್ವದಿಂದ ಕಟ್ಟಕಡೆ ವ್ಯಕ್ತಿಗೂ ಸಹಾಯ
ವೀರಶೈವ ಲಿಂಗಾಯತರಲ್ಲಿ ಸಮಾಜ ಒಗ್ಗಟ್ಟು ಮುಖ್ಯ