ಕನ್ನಡಪ್ರಭ ವಾರ್ತೆ, ಯಳಂದೂರುಗ್ಯಾರಂಟಿ ಯೋಜನೆಗಳಿಂದ ಬಡವರು ಹಾಗೂ ಗ್ರಾಮೀಣರ ಬದುಕು ಹಸನಾಗಿದೆ. ಜನರು ನೆಮ್ಮದಿಯಿಂದ ಬದುಕು ಸಾಗಿಸುವಂತಾಗಿದೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಕಿನಕಹಳ್ಳಿ ಪ್ರಭುಪ್ರಸಾದ್ ಮಾಹಿತಿ ನೀಡಿದರು.ತಾಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಬಡವರು ಸಂಚರಿಸಲು ತಮ್ಮ ನಿತ್ಯ ವ್ಯವಹಾರವನ್ನು ಮಾಡಲು ಅನುಕೂಲವಾಗಿದೆ. ಮಹಿಳೆಯರು ಸಬಲರಾಗಲು ಜೀವನ ಮಟ್ಟವನ್ನು ಸುಧಾರಿಸಿಕೊಳ್ಳಲು, ತಮ್ಮ ಕುಟುಂಬದ ಆದಾಯವನ್ನು ಹೆಚ್ಚಿಸಿಕೊಳ್ಳಲು ಈ ಯೋಜನೆಗಳು ಹೆಚ್ಚು ಪ್ರಯೋಜನಕಾರಿಯಾಗಿದೆ. ಸರ್ಕಾರಕ್ಕೆ ಇದರಿಂದ ಯಾವುದೇ ತೊಂದರೆಯಾಗಿಲ್ಲ. ನಮ್ಮ ಸರ್ಕಾರ ನೀಡಿದ್ದ ಆಶ್ವಾಸನೆಯನ್ನು ಈಡೇರಿಸಿದ್ದು ಇದರೊಂದಿಗೆ ಅಭಿವೃದ್ಧಿಪರವಾದ ಕೆಲಸಗಳನ್ನು ಮಾಡುತ್ತಿದೆ. ಇದರಲ್ಲೂ ವಿಶೇಷವಾಗಿ ಗ್ರಾಮೀಣರಿಗೆ ಇದರಿಂದ ಹೆಚ್ಚು ಅನುಕೂಲವಾಗಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಈ ಪಂಚಾಯಿತಿ ವ್ಯಾಪ್ತಿಯ ಮಹಿಳೆಯರು ಸಾರ್ವಜನಿಕರೊಂದಿಗೆ ಸಂವಾದ ನಡೆಯಿತು. ಗ್ರಾಮಕ್ಕೆ ಕೆಎಸ್ಸಾರ್ಟಿಸಿ ಬಸ್ ಸೌಲಭ್ಯವನ್ನು ಹೆಚ್ಚಿಸಬೇಕು ಇಲ್ಲಿಂದ ಸಂಚರಿಸು ಅನುಕೂಲ ಮಾಡಿಕೊಡಬೇಕೆಂದು ಮಹಿಳೆಯರು ಆಗ್ರಹಿಸಿದರು. ಇದಕ್ಕೆ ಇಲಾಖೆಯ ಕುಮಾರ್‌ನಾಯಕ್ ಯಳಂದೂರು ಮಾರ್ಗವಾಗಿ ಮೈಸೂರಿಗೆ ತೆರಳುವ ಬಸ್ ಯರಗಂಬಳ್ಳಿ, ಗಂಗವಾಡಿ ಮಾರ್ಗವಾಗಿ ಸಂಚರಿಸಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ಮಾದೇಶ್, ಉಪಾಧ್ಯಕ್ಷೆ ಶಾಂತಮ್ಮ ಜಿಪಂ ಮಾಜಿ ಉಪಾಧ್ಯಕ್ಷ ಜೆ. ಯೋಗೇಶ್, ಪಿಡಿಒ ಮಂಜುನಾಥ್, ಸಮಿತಿ ಸದಸ್ಯರಾದ ಭಾಗ್ಯನಂಜಯ್ಯ, ಅನಿತಾ ನಿರಂಜನ್, ಪ್ರಭುಶಂಕರ್, ವಿಶ್ವ, ಶಿವರಾಜು, ಯರಗಂಬಳ್ಳಿ ಮಂಜು, ಸಚಿನ್, ವಿರೂಪಾಕ್ಷ, ಮಹೇಶ್, ನಂಜುಂಡಸ್ವಾಮಿ ಎಪಿಎಂಸಿ ನಿರ್ದೇಶಕ ಮಹೇಶ್, ಸೋಮಣ್ಣ ಆಹಾರ ನಿರೀಕ್ಷಕ ಬಿಸಲಯ್ಯ, ಸಿಡಿಪಿಒ ಜಯಶೀಲ, ಎಡಿ ರವೀಂದ್ರನಾಥ್ ಸೇರಿದಂತೆ ಅನೇಕರು ಇದ್ದರು.