ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಚುನಾವಣಾ ಆಯೋಗ, ಜಿಲ್ಲಾ ಸ್ವೀಪ್ ಸಮಿತಿ, ತಾಲೂಕು ಸ್ವೀಪ್ ಸಮಿತಿ ವತಿಯಿಂದ ನಡೆದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮುಕ್ತ, ನ್ಯಾಯ ಸಮ್ಮತ ಚುನಾವಣೆಗಾಗಿ ಮತದಾನದ ಪ್ರಮಾಣ ಹೆಚ್ಚಾಗಬೇಕಿದೆ. ಕಳೆದ ಬಾರಿಗಿಂತ ಮತದಾನದ ಪ್ರಮಾಣ ಈ ಬಾರಿ ಹೆಚ್ಚಾಗಬೇಕಿದ್ದು, ಶೇ.100ರಷ್ಟು ಮತದಾನವಾಗಬೇಕಿದೆ. ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಸ್ವೀಪ್ ಸಮಿತಿಯಿಂದ ಜಾಗೃತಿ ಜಾಥಾ, ರಂಗೋಲಿ ಸ್ಪರ್ಧೆ ಮತ್ತಿತರೆ ಕಾರ್ಯಕ್ರಮ ರೂಪಿಸಲಾಗಿದೆ ಎಂದು ತಿಳಿಸಿದರು.ಮತದಾನ ಕರ್ತವ್ಯವಾಗಲಿ:
ಮತದಾನ ಜಾಗೃತಿ ಮೂಡಿಸುವ ವಿವಿಧ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಯಿತು. ನಗರದ ವಿವಿಧ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಂದ ಭಗತ್ ಸಿಂಗ್ ಕ್ರೀಡಾಂಗಣದವರೆಗೆ ಜಾಥಾ ನಡೆಸಲಾಯಿತು.
ಜಿಪಂ ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸ್, ಯೋಜನಾಧಿಕಾರಿ ರಾಮಕೃಷ್ಣಯ್ಯ, ಯೋಜನಾ ನಿರ್ದೇಶಕ ವಿಠ್ಠಲ್ ಕಾವಳೆ, ನಗರಸಭೆ ಪೌರಾಯುಕ್ತ ಕೆ.ಪರಮೇಶ್, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಕುಮಾರ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಎಂ.ಶ್ರೀಕಾಂತ್ ಇದ್ದರು.