ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮಗಳಿಗೆ ಶತಮಾನಗಳ ಇತಿಹಾಸವಿದೆ. ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಸರ್.ಎಂ.ವಿಶ್ವೇಶ್ವರಯ್ಯನವರ ದೂರ ದೃಷ್ಟಿಯಿಂದ ಏಷ್ಯಾ ಖಂಡದಲ್ಲಿ ಪ್ರಥಮ ವಿದ್ಯುತ್ ಉತ್ಪಾದನಾ ಕೇಂದ್ರವನ್ನು ಶಿವನಸಮುದ್ರ ಹಾಗೂ ಶಿಂಷಾ ಜಲ ವಿದ್ಯುತ್ ಯೋಜನೆ ಕಾರ್ಯಗತ ಮಾಡಿ ನಾಡನ್ನು ಬೆಳಗಿಸಿದರು.
ಕನ್ನಡಪ್ರಭ ವಾರ್ತೆ ಮದ್ದೂರು
ಕರ್ನಾಟಕ ವಿದ್ಯುತ್ ಸರಬರಾಜು ನಿಗಮ ಮಂಡಳಿಯನ್ನು ಖಾಸಗೀಕರಣಕ್ಕೆ ಮುಂದಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕ್ರಮ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ನಗರದ ತಾಲೂಕು ಕಚೇರಿಗೆ ಆಗಮಿಸಿದ ವೇದಿಕೆ ಕಾರ್ಯಕರ್ತರು ವಿದ್ಯುತ್ ಖಾಸಗೀಕರಣದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ವೇದಿಕೆ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ ಮಾತನಾಡಿ, ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮಗಳಿಗೆ ಶತಮಾನಗಳ ಇತಿಹಾಸವಿದೆ. ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಸರ್.ಎಂ.ವಿಶ್ವೇಶ್ವರಯ್ಯನವರ ದೂರ ದೃಷ್ಟಿಯಿಂದ ಏಷ್ಯಾ ಖಂಡದಲ್ಲಿ ಪ್ರಥಮ ವಿದ್ಯುತ್ ಉತ್ಪಾದನಾ ಕೇಂದ್ರವನ್ನು ಶಿವನಸಮುದ್ರ ಹಾಗೂ ಶಿಂಷಾ ಜಲ ವಿದ್ಯುತ್ ಯೋಜನೆ ಕಾರ್ಯಗತ ಮಾಡಿ ನಾಡನ್ನು ಬೆಳಗಿಸಿದರು ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕರ್ನಾಟಕ ವಿದ್ಯುತ್ ಸರಬರಾಜು ಮಂಡಳಿ ಐದು ವಿಭಾಗಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಸರ್ಕಾರಗಳು ಖಾಸಗೀಕರಣಗೊಳಿಸುವ ಉದ್ದೇಶವಾದರೂ ಏನು ಎಂದು ಪ್ರಶ್ನಿಸಿದರು.
ವಿದ್ಯುತ್ ಖಾಸಗೀಕರಣಗೊಂಡರೆ ಬಿಹಾರ, ಉತ್ತರಪ್ರದೇಶ, ಮಧ್ಯ ಪ್ರದೇಶ, ಅಸ್ಸಾಂ ಇನ್ನಿತರೆ ರಾಜ್ಯಗಳಿಂದ ಅನ್ಯ ಭಾಷಿಕರಿಗೆ ಉದ್ಯೋಗ ಕಲ್ಪಿಸಿ ಕನ್ನಡದ ಮಕ್ಕಳಿಗೆ ಉದ್ಯೋಗ ನೀಡಲು ಸಾಧ್ಯವಾಗುವುದಿಲ್ಲ ಎಂದರು.
ಸರ್ಕಾರಗಳು ರೈತರ ಕೃಷಿ ಪಂಪ್ ಸೆಟ್, ಗೃಹಜೋತಿ, ಕೈಗಾರಿಕಾ ಕೇಂದ್ರಗಳಿಗೆ ಹಾಗೂ ಪ್ರತಿ ಗ್ರಾಮ ಮತ್ತು ಪಟ್ಟಣಗಳಿಗೆ ನೀಡುತ್ತಿರುವ ವಿದ್ಯುತ್ ಸಂಪರ್ಕಕ್ಕೆ ಖಾಸಗಿ ಕಂಪನಿಗಳ ಅಧಿಕಾರ ನೀಡಿದರೆ. ದರ ನಿಗದಿ ಇನ್ನಿತರ ಎಲ್ಲಾ ಸೌಲಭ್ಯಗಳನ್ನು ಕಸಿದುಕೊಳ್ಳುತ್ತಾರೆ. ಸರ್ಕಾರಗಳು ಈ ಬಗ್ಗೆ ಗಂಭೀರವಾಗಿ ಚಿಂತಿಸಿ ವಿದ್ಯುತ್ ಖಾಸಗೀಕರಣ ಕ್ರಮ ಕೈಬಿಡಬೇಕೆಂದು ಒತ್ತಾಯಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ವೇದಿಕೆ ತಾಲೂಕು ಅಧ್ಯಕ್ಷ ತಿಪ್ಪೂರು ರಾಜೇಶ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಸಿ.ಲಿಂಗರಾಜು, ಮಹಿಳಾಧ್ಯಕ್ಷೆ ಸೆಲ್ವಿ ಮುರುಗೇಶ್, ಪ್ರಧಾನ ಕಾರ್ಯದರ್ಶಿ ಸೋಂಪುರ ಉಮೇಶ್, ಯುವ ಘಟಕ ಅಧ್ಯಕ್ಷ ವಿ.ಪಿ.ವಿಶ್ವಾಸ್, ಗೌರವಾಧ್ಯಕ್ಷರಾದ ವಿ.ಎಚ್.ಶಿವಲಿಂಗಯ್ಯ, ಪಟೇಲ್ ಹರೀಶ್, ಆಲೂರು ಚೆನ್ನಪ್ಪ, ಕೊಪ್ಪ ಹೋಬಳಿ ಅಧ್ಯಕ್ಷ ಮಹೇಂದ್ರ, ಸಂಘಟನಾ ಕಾರ್ಯದರ್ಶಿಗಳಾದ ಅಜ್ಜಹಳ್ಳಿ ಕರಿಗೌಡ, ಎಸ್.ಎಲ್.ಉಮೇಶ್, ಚೇತನ್ ಚಾಮನಹಳ್ಳಿ, ಉಪಾಧ್ಯಕ್ಷರಾದ ನಾರಾಯಣ, ಶೇಖರಪ್ಪ, ಸಂಘಟನೆ ಮುಖಂಡರಾದ ಬೋರಾಪುರ ಸಿದ್ದರಾಮ, ವಿ.ಪಿ.ವರದರಾಜು, ವಿ.ಎಂ.ಶಿವರಾಜು, ವಿ.ಬಿ.ಸದಾನಂದ ಹಲವರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.