ಜನರ ಸೇವೆ ಜನಮಾನಸದಲ್ಲಿ: ಡಾ. ದತ್ತಾತ್ತೇಯ

KannadaprabhaNewsNetwork |  
Published : Aug 09, 2024, 12:31 AM IST
8ಶಿರಾ1: ಶಿರಾ ನಗರದ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಅನಂತರಾಜು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ. ತಾ.ಪಂ. ನೌಕರರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳಿಂದ ಬೀಳ್ಕೊಡುಗೆ ನೀಡಲಾಯಿತು. | Kannada Prabha

ಸಾರಾಂಶ

ಸರ್ಕಾರಿ ನೌಕರರಿಗೆ ವರ್ಗಾವಣೆ ಅನಿವಾರ್ಯ ಆದರೆ ನಾವು ಕರ್ತವ್ಯ ನಿರ್ವಹಿಸುವ ಕಚೇರಿಗಳಲ್ಲಿ ಸಾರ್ವಜನಿಕರಿಗೆ ನೀಡಿದ ಸೇವೆ ಜನಮಾನಸದಲ್ಲಿ ಉಳಿಯುತ್ತದೆ.

ಕನ್ನಡಪ್ರಭ ವಾರ್ತೆ ಶಿರಾ ಸರ್ಕಾರಿ ನೌಕರರಿಗೆ ವರ್ಗಾವಣೆ ಅನಿವಾರ್ಯ ಆದರೆ ನಾವು ಕರ್ತವ್ಯ ನಿರ್ವಹಿಸುವ ಕಚೇರಿಗಳಲ್ಲಿ ಸಾರ್ವಜನಿಕರಿಗೆ ನೀಡಿದ ಸೇವೆ ಜನಮಾನಸದಲ್ಲಿ ಉಳಿಯುತ್ತದೆ. ಅಂತಹ ಸೇವೆಯನ್ನು ತಾ.ಪಂ. ಇಓ ಅನಂತರಾಜು ಅವರು ನೀಡಿದ್ದಾರೆ. ಅವರ ಸೇವೆ ಸ್ಮರಣೀಯ ಎಂದು ತಹಶೀಲ್ದಾರ್ ಡಾ.ದತ್ತಾತ್ರೆಯ ಗಾದಾ ಹೇಳಿದರು. ಅವರು ನಗರದ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಅನಂತರಾಜು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ. ತಾಪಂ. ನೌಕರರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ತಾಪಂ ಕಾರ್ಯನಿರ್ವಹಣಾಧಿಕಾರಿ ಅನಂತರಾಜು ಅವರು ಉತ್ಸಾಹದಿಂದ ತಮ್ಮ ಕಾರ್ಯವನ್ನು ನಡೆಸುತ್ತಿದ್ದರು. ಇವರ ಕಾರ್ಯವೈಖರಿ ಇಂದಿನ ಯುವ ಅಧಿಕಾರಿ ನೌಕರರಿಗೆ ಮಾದರಿಯಾಗಿತ್ತು ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅನಂತರಾಜು, ಶಿರಾ ತಾಲೂಕಿನಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಯಾಗಿ ಯಶಸ್ವಿಯಾಗಿ ಕೆಲಸ ನಿರ್ವಹಿಸಲು ಎಲ್ಲಾ ಅಧಿಕಾರಿ ಸಿಬ್ಬಂದಿಗಳು, ಪಿಡಿಓಗಳು ಉತ್ತಮ ಸಹಕಾರ ನೀಡಿದ್ದರು. ಅವರ ಸಹಕಾರವನ್ನು ನಾನು ಮರೆಯಲು ಸಾಧ್ಯವಿಲ್ಲ. ಮುಂದೆಯೂ ಬರುವ ಅಧಿಕಾರಿಗಳಿಗೆ ಉತ್ತಮ ಸಹಕಾರ ನೀಡಿ ಸಾರ್ವಜನಿಕರ ಸೇವೆ ಮಾಡಿ ಎಂದರು. ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ರುದ್ರೇಶ್, ತಾಲೂಕು ವೈದ್ಯಾಧಿಕಾರಿ ಡಾ. ಸಿದ್ದೇಶ್ವರ್, ಸಹಾಯ ಕೃಷಿ ನಿರ್ದೇಶಕ ಎಚ್.ನಾಗರಾಜ್, ತಾಲೂಕು ಪಶು ಅಧಿಕಾರಿ ಡಾ.ರಮೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ರಾಜಾನಾಯ್ಕ, ನೂತನವಾಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಹರೀಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ತಾ.ಪಂ. ಸಿಬ್ಬಂದಿ ಸೇರಿದಂತೆ ಹಲವರು ಹಾಜರಿದ್ದರು.

PREV

Latest Stories

ನಗರದಲ್ಲಿ ಶೀಘ್ರ ಟೋಯಿಂಗ್ ವ್ಯವಸ್ಥೆ ಮರು ಜಾರಿ:ಪರಂ
ದೇಶದಲ್ಲೇ ಫಸ್ಟ್‌ ಟೈಂ ಜನರ ಮನೆ ಬಾಗಿಲಿಗೆ ಪೊಲೀಸ್ : ಪರಂ
ನೀರುಗಾಲುವೆಗಳಲ್ಲಿ ಟೆಕ್‌ ಪಾರ್ಕ್‌ ನಿರ್ಮಾಣದಿಂದ ಪ್ರವಾಹ