ಜನರು ದೇವಸ್ಥಾನಗಳಿಗೆ ನಿತ್ಯ ಬರುವಂತಾಗಬೇಕು: ಕಾಣಿಯೂರು ಶ್ರೀ

KannadaprabhaNewsNetwork |  
Published : Mar 25, 2024, 12:53 AM IST
ಮಲ್ಪೆ24 | Kannada Prabha

ಸಾರಾಂಶ

ವಡಭಾಂಡೇಶ್ವರ ಶ್ರೀ ವಡಭಾಂಡ ಬಲರಾಮ ದೇವಸ್ಥಾನದ ಅಷ್ಟಬಂಧ ಪುನಃ ಪ್ರತಿಷ್ಠೆ, ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.

ಕನ್ನಡಪ್ರಭ ವಾರ್ತೆ ಮಲ್ಪೆ

ನಮ್ಮ ಯಾವುದೇ ಪ್ರಯತ್ನಗಳು ಫಲಿಸದಿದ್ದಾಗ, ಬದುಕಿನಲ್ಲಿ ಸಮಸ್ಯೆಗಳು ಎದುರಾದಾಗ ಮಾತ್ರ ನಮಗೆ ದೇವರ ನೆನಪಾಗುತ್ತದೆ, ಆದರೆ ಹಾಗಾಗ ಕೂಡದು. ಜನರು ದೇವಸ್ಥಾನಗಳಿಗೆ ನಿತ್ಯ ಬರುವಂತಾಗಬೇಕು ಎಂದು ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಹೇಳಿದರು.

ಅವರು ಇಲ್ಲಿನ ವಡಭಾಂಡೇಶ್ವರ ಶ್ರೀ ವಡಭಾಂಡ ಬಲರಾಮ ದೇವಸ್ಥಾನದ ಅಷ್ಟಬಂಧ ಪುನಃ ಪ್ರತಿಷ್ಠೆ, ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಶನಿವಾರ ಆಶೀರ್ವಚನ ನೀಡಿದರು.

ಯಾವ ದೇವಸ್ಥಾನದಲ್ಲಿ ಪೂಜೆ ಪುನಸ್ಕಾರಗಳು ಸರಿಯಾಗಿ ನಡೆಯುತ್ತಿದೆಯೋ ಆ ಊರಿನಲ್ಲಿ ನೆಮ್ಮದಿ ಇರುತ್ತದೆ ಎಂದರು.* ಕರ್ಮದ ಫಲ ಜಾಸ್ತಿ

ಸಾನ್ನಿಧ್ಯ ವಹಿಸಿದ್ದ ಭೀಮನಕಟ್ಟೆ ಮಠದ ಶ್ರೀ ರಘುವರೇಂದ್ರತೀರ್ಥ ಶ್ರೀಪಾದರು ಆಶೀರ್ವಚನ ನೀಡಿ, ನಾವು ಬಯಸಿದ್ದು ನಮಗೆ ಸುಲಭದಲ್ಲಿ ಸಿಗುತ್ತಿದ್ದರೆ, ನಮ್ಮ ಇಚ್ಛೆಯ ಪ್ರಕಾರವೇ ಎಲ್ಲವೂ ನಡೆದರೆ ದೇವರ ಎಚ್ಚರ ನಮಗೆ ಬರುವುದಿಲ್ಲ. ಕರ್ಮದ ಫಲ ದೇವರ ಕೈಯಲ್ಲಿದೆ. ನಾವು ದೇವರ ನಂಬಿಕೆಯಲ್ಲಿ ಸಾಗಿದಾಗ ಕರ್ಮದ ಫಲ ಜಾಸ್ತಿ ಸಿಗುತ್ತದೆ ಎಂದರು.

ವಿದ್ವಾಂಸ ಪಂಜ ಭಾಸ್ಕರ ಭಟ್ ಧಾರ್ಮಿಕ ಪ್ರವಚನ ನೀಡಿದರು. ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಾಧು ಸಾಲ್ಯಾನ್, ಜ್ಯೋತಿಷಿ ಹಯವದನ ಭಟ್, ಧರ್ಮಸ್ಥಳ ಎಸ್.ಕೆ.ಆರ್.ಡಿ.ಪಿ. ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ಮಲ್ಪೆ ಪರ್ಸೀನ್ ಮೀನುಗಾರರ ಸಂಘದ ಅಧ್ಯಕ್ಷ ನಾಗರಾಜ್ ಸುವರ್ಣ, ಉಡುಪಿ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತ ಪ್ರಶಾಂತ ಕುಮಾರ್ ಶೆಟ್ಟಿ, ಮಣಿಪಾಲ ಎಂ.ಐ.ಟಿ. ಪ್ರಾಧ್ಯಾಪಕ ಡಾ.ಉದಯ ಕುಮಾರ್ ಶೆಟ್ಟಿ, ಕೊಡವೂರು ಗ್ರಾಪಂ ಆಡಳಿತಾಧಿಕಾರಿ ಕಾರ್ತಿಕೇಯ ಭಟ್, ನಗರಸಭಾ ಸದಸ್ಯ ಶ್ರೀಶ ಭಟ್ ಕೊಡವೂರು, ಕೊಲ್ಲೂರು ದೇವಳ ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯೆ ಸಂಧ್ಯಾ ರಮೇಶ್, ದೇವಳದ ಅಭಿವೃದ್ಧಿ ಸಮಿತಿ ಅಧ್ಯಕ್ಷ ನಾಗರಾಜ ಮೂಲಿಗಾರ್, ಗೌರವಾಧ್ಯಕ್ಷ ಶ್ರೀಶ ಭಟ್ ಕಡೆಕಾರು ಮೊದಲಾದವರು ಉಪಸ್ಥಿತರಿದ್ದರು.

ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಜಿ. ಕೊಡವೂರು ಸ್ವಾಗತಿಸಿದರು. ಪೂರ್ಣಿಮಾ ಜನಾರ್ದನ್ ನಿರೂಪಿಸಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ