ಕನ್ನಡಪ್ರಭ ವಾರ್ತೆ ಯಾದಗಿರಿ
ರಾಯಚೂರು ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಮುಂಡರಗಿ ತಾಂಡಾದಲ್ಲಿ ಮನೆ ಮನೆಗೆ ಭೇಟಿ ನೀಡಿ ಗ್ಯಾರಂಟಿ ಕಾರ್ಡ್ ಹಂಚುವ ಮೂಲಕ ಪಕ್ಷದ ಅಭ್ಯರ್ಥಿ ಜಿ. ಕುಮಾರನಾಯಕ ಪರವಾಗಿ ಮತಯಾಚಿಸಿ ಮಾತನಾಡಿದ ಅವರು, ಕೇಂದ್ರದಲ್ಲಿ 10 ವರ್ಷ ಆಡಳಿತ ನಡೆಸುತ್ತಿದ್ದರೂ ಜನರಿಗೆ ಅಗತ್ಯವಾದ ಸೌಲಭ್ಯ ಕಲ್ಪಿಸಿಲ್ಲ. ಬಿಜೆಪಿಗೆ ಈ ಬಾರಿ ಮತದಾರರು ತಕ್ಕಪಾಠ ಕಲಿಸಲಿದ್ದಾರೆ ಎಂದರು.
ಸಿಎಂ ಸಿದ್ದರಾಮಯ್ಯನವರು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದ್ದಾರೆ. ನುಡಿದಂತೆ ನಡೆಯುತ್ತಿರುವ ಸರಕಾರದ ಪರವಾಗಿ ಮತದಾರರು ಕಾಂಗ್ರೆಸ್ ಕಡೆ ಒಲವು ಹೊಂದಿದ್ದಾರೆ.ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ನಾಯಕರು ಫಲಾನುಭವಿಗಳ ಬಗ್ಗೆ ಕೀಳಾಗಿ ಮಾತನಾಡುತ್ತಿದ್ದಾರೆ. ನಿಜಕ್ಕೂ ಇದು ನಾಚಿಗೇಡು ಸಂಗತಿ. ಬಿಜೆಪಿಯಿಂದ ಸಾಧ್ಯವಾಗದಿರುವುದನ್ನು ಕಾಂಗ್ರೆಸ್ ಸರಕಾರ ಮಾಡಿ ತೋರಿಸಿದೆ. ಗ್ಯಾರಂಟಿಗಳು ಆರ್ಥಿಕ ಸದೃಢತೆಗೆ ಬುನಾದಿ ಆಗಿವೆ ಎಂದರು. ಈ ವೇಳೆ ಯಾದಗಿರಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುದರ್ಶನ ನಾಯಕ್, ರಾಘವೇಂದ್ರ ಮಾನಸಗಲ್ ಸೇರಿದಂತೆ ಇನ್ನಿತರರಿದ್ದರು.