ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಬೆಂಬಲಿಸಿದ ಜನ

KannadaprabhaNewsNetwork |  
Published : Jun 05, 2024, 12:30 AM IST
ಗೆಲುವು | Kannada Prabha

ಸಾರಾಂಶ

ದೇಶದ ಮತದಾರ ಪ್ರಭು ಪ್ರಧಾನಿ ನರೇಂದ್ರ ಮೋದಿ ನಾಯಕತ್ವವನ್ನು ಮೆಚ್ಚಿ ದೇಶದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಬಹುಮತ ನೀಡಿದ್ದು, ಜಿಲ್ಲೆಯ ಜನರು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣರನ್ನು ಗೆಲ್ಲಿಸಿ ತುಮಕೂರು ಅಭಿವೃದ್ಧಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ

ಕನ್ನಡಪ್ರಭ ವಾರ್ತೆ ತುಮಕೂರುದೇಶದ ಮತದಾರ ಪ್ರಭು ಪ್ರಧಾನಿ ನರೇಂದ್ರ ಮೋದಿ ನಾಯಕತ್ವವನ್ನು ಮೆಚ್ಚಿ ದೇಶದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಬಹುಮತ ನೀಡಿದ್ದು, ಜಿಲ್ಲೆಯ ಜನರು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣರನ್ನು ಗೆಲ್ಲಿಸಿ ತುಮಕೂರು ಅಭಿವೃದ್ಧಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ ಎಂದು ಬಿಜೆಪಿ ತುಮಕೂರು ಜಿಲ್ಲಾ ಕೋಶಾಧಿಕಾರಿ ಡಾ.ಎಸ್.ಪರಮೇಶ್ ತಿಳಿಸಿದ್ದಾರೆ. ಇಡೀ ದೇಶದಲ್ಲಿ ನರೇಂದ್ರ ಮೋದಿ ಅಭಿವೃದ್ಧಿಯ ಅಲೆಗೆ ಇಂಡಿಯಾ ಮೈತ್ರಿಕೂಟ ನೆಲಕಚ್ಚಿದ್ದು, ಭಾರೀ ಪ್ರಚಾರ, ಹಿಂಬಾಗಿಲ ರಾಜಕೀಯದ ನಡುವೆಯೂ ಇಂಡಿಯಾಗೆ ಬಹುಮತ ಪಡೆಯಲು ಸಾಧ್ಯವಾಗಿಲ್ಲ. ಮತ್ತೊಮ್ಮೆ ನಾವು ದೇಶದ ಅಭಿವೃದ್ಧಿ ನರೇಂದ್ರ ಮೋದಿಯವರನ್ನು ಆಯ್ಕೆ ಮಾಡಿಕೊಂಡಿರುವುದಾಗಿ ಮತದಾರ ನೇರ ಸಂದೇಶ ನೀಡಿದ್ದು ಅಭಿವೃದ್ಧಿಗೆ ಆಶೀರ್ವಾದ ನೀಡಿದ್ದಾನೆ ಎಂದರು.ರಾಜ್ಯದ ಗ್ಯಾರೆಂಟಿಗಳನ್ನು ಗಾಳಿಗೆ ತೂರಿ, ಮೋದಿಯೇ ದೇಶಕ್ಕೆ ಗ್ಯಾರೆಂಟಿಯನ್ನುವ ನೇರ ಸಂದೇಶ ನೀಡಿದ್ದು ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಬರೋಬ್ಬರಿ 1 ಲಕ್ಷದ 75 ಸಾವಿರ ಮತಗಳ ಅಂತರದಿಂದ ಗೆಲ್ಲುವ ಮೂಲಕ ಐತಿಹಾಸಿಕ ವಿಜಯ ಸಾಧಿಸಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇನ್ನೂ 1 ವರ್ಷ ಸಲೀಂ ರಾಜ್ಯ ಪೊಲೀಸ್ ಬಾಸ್‌
ಸಂಪುಟ ಪುನಾರಚನೆ ಸರ್ಕಸ್; ಶಾಸಕರು- ಸುರ್ಜೇವಾಲ ಭೇಟಿ