ಅಜೀಜಅಹ್ಮದ ಬಳಗಾನೂರ
ತೋಟಗಾರಿಕೆ ಹಾಗೂ ಕೃಷಿ ಇಲಾಖೆ, ಜಿಲ್ಲಾಡಳಿತ, ಜಿಪಂ, ಹು-ಧಾ ಮಹಾನಗರ ಪಾಲಿಕೆ, ಮೀನುಗಾರಿಕೆ ಇಲಾಖೆ, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್, ಹಾಪ್ ಕಾಮ್ಸ್, ಸ್ವರ್ಣ ಟೆಕ್ನೋ ಕನಸ್ಟ್ರಕ್ಷನ್ ಪ್ರೈ.ಲಿ. ಹುಬ್ಬಳ್ಳಿ ಮತ್ತು ಉದ್ಯಾನ ಹಾಗೂ ಫಲಪುಷ್ಪ ಪ್ರದರ್ಶನ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರದಿಂದ ಸೋಮವಾರದ ವರೆಗೆ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನ ಹಾಗೂ ಸಿರಿಧಾನ್ಯ ಹಬ್ಬ ಹಮ್ಮಿಕೊಳ್ಳಲಾಗಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಶನಿವಾರ ಸಂಜೆ ಹಾಗೂ ಭಾನುವಾರ ಸಾವಿರಾರು ಜನರು ಇಂದಿರಾ ಗಾಜಿನ ಮನೆಗೆ ಭೇಟಿ ನೀಡಿ ಫಲಪುಷ್ಪ ಪ್ರದರ್ಶನದ ಕಣ್ಣುಂಬಿಕೊಂಡರು.ಸೇವಂತಿಗೆಯಲ್ಲಿ ಅರಳಿದ ನಂದಿ
ಗಮನ ಸೆಳೆಯ ಜೈ ಜವಾನ್ ಜೈ ಕಿಸಾನ್
ಇದರೊಂದಿಗೆ 3 ಸಾವಿರಕ್ಕೂ ಅಧಿಕ ಹೂವಿನ ಕುಂಡಗಳು ಪ್ರದರ್ಶನದ ಆಕರ್ಷಣೆಯಾಗಿವೆ. 25ಕ್ಕೂ ಅಧಿಕ ಬಗೆಯ ಗುಲಾಬಿ ಹೂ, ಸುಗಂಧ ರಾಜ ಸೇರಿದಂತೆ ಬಗೆಬಗೆಯ ಪುಷ್ಪಗಳು, ಹಲವು ಬಗೆಯ ಬೋನ್ಸಾಯ್ ಗಿಡಗಳ ಪ್ರದರ್ಶನ, ಜಿಲ್ಲೆಯ 8 ತಾಲೂಕುಗಳಿಂದ ರೈತರು ತಾವು ಬೆಳೆದ ತರಕಾರಿಗಳ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿರುವುದು ಪ್ರದರ್ಶನಕ್ಕೆ ಹೆಚ್ಚಿನ ಕಳೆ ತಂದಿದೆ.
ತರಕಾರಿಯಲ್ಲಿ ಅರಳಿದ ಕಲಾಕೃತಿಗಳು ಹೆಚ್ಚಿನ ಆಕರ್ಷಣೆಗೆ ಕಾರಣವಾದವು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ಸಾಹಿತ್ಯ ದಿಗ್ಗಜರು, ಸಂಗೀತಗಾರರು, ಕವಿಗಳು, ದೇವತೆಗಳು, ಹೋರಾಟಗಾರರು, ಪ್ರಮುಖ ಪ್ರಾಣಿ, ಪಕ್ಷಿಗಳನ್ನು ಕಲ್ಲಂಗಡಿ, ಸೌತೆಕಾಯಿ, ಕುಂಬಳಕಾಯಿ, ಬದನೆಕಾಯಿ, ಗಜ್ಜರಿ ಸೇರಿದಂತೆ ಬಗೆಬಗೆಯ ತರಕಾರಿಯಲ್ಲಿ ಅರಳಿ ನಿಂತಿವೆ.
ಹುಬ್ಬಳ್ಳಿಯಲ್ಲಿ ಪ್ರತಿವರ್ಷವೂ ಫಲಪುಷ್ಪ ಪ್ರದರ್ಶನವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗುತ್ತದೆ. ಜನರು ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಇದಕ್ಕೆ ಇನ್ನೂ ಹೆಚ್ಚಿನ ಪ್ರಚಾರದ ಅವಶ್ಯಕತೆಯಿದೆ.
ಸಂತೋಷ ಲಾಡ್, ಜಿಲ್ಲಾ ಉಸ್ತುವಾರಿ ಸಚಿವಹೆಚ್ಚಿನ ಜನ ವೀಕ್ಷಣೆಪ್ರತಿವರ್ಷವೂ ವಿಭಿನ್ನ ರೀತಿಯಲ್ಲಿ, ವಿಶೇಷವಾಗಿ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗುತ್ತಿದೆ. ಈ ಬಾರಿಯ ಪ್ರದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿದೆ.
ಯೋಗೀಶ ಕಿಲಾರಿ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ, ಧಾರವಾಡಚೆನ್ನಾಗಿ ಆಯೋಜನೆಪ್ರತಿವರ್ಷಕ್ಕಿಂತ ಈ ಬಾರಿ ಫಲಪುಷ್ಪ ಪ್ರದರ್ಶನ ತುಂಬಾ ಚೆನ್ನಾಗಿ ಆಯೋಜನೆ ಮಾಡಲಾಗಿದೆ. ಪ್ರದರ್ಶನದ ಕುರಿತು ಎಲ್ಲಡೆ ಹೆಚ್ಚಿನ ಪ್ರಚಾರ ಕೈಗೊಂಡಲ್ಲಿ ಹೆಚ್ಚಿನ ಜನರು ಆಗಮಿಸಿ ವೀಕ್ಷಿಸಬಹುದಾಗಿದೆ. ಇನ್ನೂ ಹೆಚ್ಚಿನ ಪ್ರಚಾರ ಮಾಡುವಂತಾಗಲಿ.
ರಾಜಶ್ರೀ, ಫಲಪುಷ್ಪ ಪ್ರದರ್ಶನಕ್ಕೆ ಆಗಮಿಸಿದ್ದ ಮಹಿಳೆ