ಸಿನಿಮಾ ರೀತಿ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಸುರೇಶ್‌

KannadaprabhaNewsNetwork |  
Published : Mar 29, 2024, 12:56 AM IST
28ಕೆಆರ್ ಎಂಎನ್ 8,9.ಜೆಪಿಜಿರಾಮನಗರದ ವಿಜಯನಗರದ ಬಳಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಕಾಲಿಗೆ ಬಿದ್ದು ಡಿ.ಕೆ.ಸುರೇಶ್ ಆಶೀರ್ವಾದ ಪಡೆದರು. | Kannada Prabha

ಸಾರಾಂಶ

ರಾಮನಗರ: ನನ್ನನ್ನು ಸೋಲಿಸಲು ನಿರ್ದೇಶಕ, ನಿರ್ಮಾಪಕ, ಚಿತ್ರಕತೆ ಬರೆಯುವವರು, ನಟ, ಬಂಡವಾಳ ಹೂಡಿಕೆ ಮಾಡುವವರು ಎಲ್ಲಾ ಒಂದಾಗಿದ್ದಾರಂತೆ. ಸಿನಿಮಾದಲ್ಲಿ ರೀಲ್ ಬಿಟ್ಟಂತೆ ಇಲ್ಲಿ ಬಿಟ್ಟರೇ ಜನ ಒಪ್ಪುವುದಿಲ್ಲ ಎಂದು ತಮ್ಮ ರಾಜಕೀಯ ಎದುರಾಳಿಗಳ ವಿರುದ್ಧ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದರು.

ರಾಮನಗರ: ನನ್ನನ್ನು ಸೋಲಿಸಲು ನಿರ್ದೇಶಕ, ನಿರ್ಮಾಪಕ, ಚಿತ್ರಕತೆ ಬರೆಯುವವರು, ನಟ, ಬಂಡವಾಳ ಹೂಡಿಕೆ ಮಾಡುವವರು ಎಲ್ಲಾ ಒಂದಾಗಿದ್ದಾರಂತೆ. ಸಿನಿಮಾದಲ್ಲಿ ರೀಲ್ ಬಿಟ್ಟಂತೆ ಇಲ್ಲಿ ಬಿಟ್ಟರೇ ಜನ ಒಪ್ಪುವುದಿಲ್ಲ ಎಂದು ತಮ್ಮ ರಾಜಕೀಯ ಎದುರಾಳಿಗಳ ವಿರುದ್ಧ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದರು. ಆ

ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ನಾಯಕರಿಗೆ ನಿಜ ಜೀವನಕ್ಕು, ಸಿನಿಮಾಗೂ ವ್ಯತ್ಯಾಸ ಗೊತ್ತಿಲ್ಲ. ನಿಜ ಜೀವನದಲ್ಲಿ ಸೋಲಿಸಬೇಕೆ ಹೊರತು, ಸಿನಿಮಾದಲ್ಲಿ ಅಲ್ಲ. ನೀವು ಬಿಟ್ಟಿರುವ ಎಲ್ಲಾ ರೀಲುಗಳು ಡಬ್ಬ ಸೇರಿಕೊಂಡಿವೆ ಎಂದು ರಾಜಕೀಯ ಎದುರಾಳಿ ಕುಮಾರಸ್ವಾಮಿ, ಮುನಿರತ್ನ ಹಾಗೂ ಯೋಗೇಶ್ವರ್‌ ವಿರುದ್ಧ ಕಿಡಿಕಾರಿದರು.

ಎಲ್ಲರು ಒಂದಾಗಿದ್ದಾರಂತೆ ಅದಕ್ಕೆ ನನ್ನನ್ನು ಸೋಲಿಸುತ್ತಾರಂತೆ. ಏತಕ್ಕೆ ನನ್ನ ಸೋಲಿಸುತ್ತೀರಾ. ಬಡವರ ಪರವಾಗಿ, ರೈತರ ಪರವಾಗಿ, ಕನ್ನಡಿಗರ ಪರವಾಗಿ ದನಿ ಎತ್ತಿದಕ್ಕಾ? ನಿಮ್ಮ ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದಕ್ಕೆ ನನ್ನನ್ನು ಸೋಲಿಸಲು ಹೊರಟ್ಟಿದ್ದೀರಾ ಎಂದು ಪ್ರಶ್ನಿಸಿದರು.

ಡಿ.ಕೆ.ಶಿವಕುಮಾರ್ ಕಾಲಿಗೆ ಬೀಳಲು ಬಂದಿದ್ದರೆಂದು ಯಾರೋ ಹೇಳುತ್ತಿದ್ದರು. ಇದೇ ಡಿ.ಕೆ.ಶಿವಕುಮಾರ್ ಅವರ ಕಾಲಿಗೆ ಬಿದ್ದು ಶಾಸಕರಾಗಲು, ಬಿಕ್ಷೆ ಬೇಡಿದವರು, ಆಸ್ತಿ ಉಳಿಸಿಕೊಂಡವರು ಯಾರು ಎಂದು ಈ ಕ್ಷೇತ್ರದ ಜನ ನೋಡಿದ್ದಾರೆ. ರಾಜಕೀಯ ಪ್ರವೇಶ ಮಾಡುವ ಹೊತ್ತಿನಲ್ಲಿ ಶಿವಕುಮಾರ್ ಅವರ ಮನೆ ಬಾಗಿಲನ್ನು ಬೆಳಗ್ಗೆಯಿಂದ ಸಂಜೆಯ ತನಕ ಕಾಯುತ್ತಿದ್ದರು. ಈ ವಿಚಾರ ಜನರಿಗೂ, ಮಾಧ್ಯಮದವರಿಗೂ ಗೊತ್ತಿದೆ ಎಂದರು.

ಕಣ್ಣೀರು ಹಾಕುವವರಿಗೆ ಈ ಚುನಾವಣೆ ಒಂದು ಕರ್ಮಭೂಮಿ, ಇನ್ನೊಂದು ಚುನಾವಣೆಗೆ ಮತ್ತೊಂದು ಕರ್ಮಭೂಮಿ. ಯಾವ, ಯಾವ ಕರ್ಮಭೂಮಿಯಲ್ಲಿ ಏನೇನು ಸುಳ್ಳು ಹೇಳಿದ್ದಾರೋ ಗೊತ್ತಿಲ್ಲ. ಸುಳ್ಳಿನ ಗ್ಯಾರಂಟಿಗಳನ್ನು ಹೊತ್ತುಕೊಂಡು ಬಿಜೆಪಿಯವರು ಮತ ಕೇಳಲು ಬರುತ್ತಿದ್ದಾರೆ. ಸುಳ್ಳು ಹೇಳುವವರ ಜೊತೆ ಕಣ್ಣೀರು ಹಾಕುವವರು ಸೇರಿಕೊಂಡಿದ್ದಾರೆ ಎಂದು ಬಿಜೆಪಿ- ಜೆಡಿಎಸ್ ಮೈತ್ರಿ ಕುರಿತು ವ್ಯಂಗ್ಯವಾಡಿದರು.

ನಾವು ಮುಂದಿನ 4 ವರ್ಷಗಳ ಕಾಲ ರಾಜ್ಯದ ಜನರ ಕಷ್ಟಗಳನ್ನು ಪರಿಹರಿಸಲು ಬದ್ಧರಾಗಿದ್ದೇವೆ. ಕಾಂಗ್ರೆಸ್ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಚುನಾವಣೆಗಳು, ಸರ್ಕಾರಗಳು ಬರುತ್ತವೆ ಹೋಗುತ್ತವೆ. ಆದರೆ ಯಾರು ಸುಳ್ಳು ಹೇಳುತ್ತಾರೆ, ಯಾರು ಸತ್ಯವನ್ನು ಹೇಳುತ್ತಾರೆ, ಸತ್ಯದಿಂದ ನಡೆದುಕೊಳ್ಳುತ್ತಾರೆ ಎನ್ನುವುದು ಈ ಚುನಾವಣೆಯ ಪ್ರಸ್ತುತ ವಿಚಾರ. ಈ ಚುನಾವಣೆ ಮಾಧ್ಯಮದವರಿಗೆ ಹೊಸದಾಗಿ ಕಾಣಿಸುತ್ತಿದೆ. ಆದರೆ, ನಮ್ಮ ರೈತರು, ಬಡವರು, ಹಿಂದುಳಿದವರಿಗೆ, ಮಹಿಳೆಯರಿಗೆ, ಯುವಕರಿಗೆ ಈ ಚುನಾವಣೆ ಹೊಸದಲ್ಲ ಎಂದು ಹೇಳಿದರು.

ಐದು ಗ್ಯಾರಂಟಿಗಳನ್ನು ರಾಜ್ಯದ ಎಲ್ಲಾ ಜನರಿಗೆ ನೀಡಿದ್ದೇವೆ. ಜೆಡಿಎಸ್, ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳಿಗೆ ಮತಹಾಕಿದ ಜನರಿಗೂ ನಮ್ಮ ಗ್ಯಾರಂಟಿಗಳು ತಲುಪುತ್ತಿವೆ. ಎಲ್ಲರ ಮನೆಯಲ್ಲಿ ವಿದ್ಯುತ್ ದೀಪ ಉರಿಯುತ್ತಿದೆ. ಗೃಹಲಕ್ಷ್ಮಿ ತಲುಪುತ್ತಿದೆ, ಅಕ್ಕಿ, ಹಣ, ಯುವನಿಧಿ ತಲುಪುತ್ತಿದೆ. ಇವು ಮೋದಿ ಗ್ಯಾರಂಟಿಯಿಂದಾಗಿಲ್ಲ, ಕಾಂಗ್ರೆಸ್ ಗ್ಯಾರಂಟಿಯಿಂದ ಆಗಿದೆ ಎಂದರು.

ಮೋದಿ ಗ್ಯಾರಂಟಿ ಎಂದರೆ ಕೇವಲ ಸುಳ್ಳು. ನಿರುದ್ಯೋಗಿ ಯುವಕರನ್ನು ಪಕೋಡ ಮಾರಲು, ನಮ್ಮ ತಾಯಂದಿರಿಗೆ ಗ್ಯಾಸ್ ಸಿಲೆಂಡರ್ ಅನ್ನು ಪೂಜೆ ಮಾಡಲು, ಜಿಎಸ್ಟಿ ತೆಗೆಯುತ್ತೇನೆ ಎಂದು ಹೇಳಿದ ಸುಳ್ಳು. ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿಗಳು ಸುಳ್ಳು ಎಂದು ಬಿಂಬಿಸಲು ಪ್ರಯತ್ನ ಮಾಡಿದರು. ನೀವು ಕಮಿಷನ್ ಪಡೆಯುವ ಹಣದಲ್ಲೇ ನಾವು ಗ್ಯಾರಂಟಿ ನೀಡಿ ತೋರಿಸಿದ್ದೇವೆ ಎಂದು ಡಿ.ಕೆ.ಸುರೇಶ್ ಹೇಳಿದರು.ಬಾಕ್ಸ್‌.............

ಅನ್ಯಾಯ ಪ್ರಶ್ನಿಸಿದ್ದಕ್ಕೆ ದೇಶದ್ರೋಹಿ ಪಟ್ಟ ಕಟ್ಟಿದರು:

ಕನ್ನಡಿಗರ ತೆರಿಗೆ ಹಣವನ್ನು ಉತ್ತರ ಭಾರತಕ್ಕೆ ನೀಡಿ ಲೂಟಿ ಮಾಡಲಾಗುತ್ತಿದೆ ಎಂದು ದನಿ ಎತ್ತಿದ ಕಾರಣಕ್ಕೆ ಬಿಜೆಪಿಯವರು ದೇಶದ್ರೋಹಿ ಪಟ್ಟ ಕಟ್ಟಿದರು. ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ನೀರು ನಮ್ಮ ಹಕ್ಕಿಗಾಗಿ ಹೋರಾಟ ಮಾಡುತ್ತಿದ್ದೇವೆ. 4.30 ಲಕ್ಷ ಕೋಟಿ ತೆರಿಗೆ ಹಣವನ್ನು ಕನ್ನಡಿಗರು ಕೇಂದ್ರಕ್ಕೆ ನೀಡಿದ್ದಾರೆ.

ರಾಜ್ಯದ ಬಜೆಟ್ 3.71 ಲಕ್ಷ ಕೋಟಿ, ಕಳೆದ ಹತ್ತು ವರ್ಷಗಳಲ್ಲಿ ರಾಜ್ಯದಿಂದ ಕೇಂದ್ರಕ್ಕೆ 24 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ನೀಡಿದ್ದೇವೆ. ಆದರೆ ಅವರು ನಮಗೆ ಮರಳಿ ಕೊಟ್ಟಿರುವುದು ಕೇವಲ 2.94 ಲಕ್ಷ ಕೋಟಿ ಮಾತ್ರ. ಬಿಜೆಪಿಯವರಿಗೆ ನಾಚಿಕೆಯಾಗಬೇಕು ಎಂದು ಟೀಕಿಸಿದರು.

ಕಳೆದ 10 ವರ್ಷಗಳಲ್ಲಿ ಕರ್ನಾಟಕ, ಬೆಂಗಳೂರು ಅಭಿವೃದ್ದಿಗೆ ಬಿಜೆಪಿ ಸರ್ಕಾರದ ಕೊಡುಗೆ ಏನು? ಬೆಂಗಳೂರಿನ ಟ್ರಾಫಿಕ್ , ನಿರುದ್ಯೋಗ ಹಾಗೂ ನೀರಿನ ಸಮಸ್ಯೆ ಪರಿಹಾರಕ್ಕೆ ಬಿಜೆಪಿಯವರ ಕೊಡುಗೆ ಏನು ಎಂದು ಕೇಳಿದರೆ, ನನಗೆ ದೇಶದ್ರೋಹಿ ಪಟ್ಟ ಕಟ್ಟುತ್ತಾರೆ. ಕನ್ನಡಿಗರ ದನಿಯಾಗಿ ನಾನು ಕೆಲಸ ಮಾಡುತ್ತಿದ್ದೇನೆ. ಈ ಹೋರಾಟ ನಿರಂತರ, ಯಾರ ಬೆದರಿಕೆಗೂ ಜಗ್ಗುವ ವ್ಯಕ್ತಿ ನಾನಲ್ಲ ಎಂದು ಡಿ.ಕೆ.ಸುರೇಶ್ ಹೇಳಿದರು.(ಟಿಂಟ್‌ ಬಾಕ್ಸ್‌)ಚುನಾವಣೆ ವೇಳೆ ಮೇಕೆದಾಟು ಜಪ ಮಾಡುವುದು ಸರಿಯೇ

ರಾಮನಗರ: ಮೇಕೆದಾಟು ಯೋಜನೆ ವಿಚಾರದಲ್ಲಿ ಇಷ್ಟು ದಿನ ಮೌನವಾಗಿದ್ದವರು ಈಗ ಮೇಕೆದಾಟು ಜಪ ಮಾಡುತ್ತಿದ್ದಾರೆ. ಇವರ ನಾಟಕ ಸರಿಯೇ ಎಂದು ರೈತರು, ಬೆಂಗಳೂರಿಗರು ತೀರ್ಮಾನ ಮಾಡಬೇಕು ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಹೇಳಿದರು.

ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಈಗ ಚುನಾವಣೆ ಸಮಯದಲ್ಲಿ ಮೇಕೆದಾಟು ಯೋಜನೆ ಬಗ್ಗೆ ಮಾತನಾಡುತ್ತಿದ್ದಾರೆ. ನಾವು ಮೇಕೆದಾಟು ಯೋಜನೆ ಆಗ್ರಹಿಸಿ ಮಾಡಿದ ಹೋರಾಟದ ವೇಳೆ ಒಂದೇ ಒಂದು ದನಿ ಎತ್ತಿದ್ದರೆ, ಯೋಜನೆಗೆ ಅನುಮತಿ ನೀಡಿ ಎಂದು ಪ್ರಧಾನಿಗಳ ಬಳಿ ಮನವಿ ಸಲ್ಲಿಸಿದ್ದರೆ ಅವರ ಬದ್ಧತೆಯನ್ನು ಒಪ್ಪುತ್ತಿದ್ದೆ ಎಂದರು.

ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರು ಮುಂದಿನ ಆರು ತಿಂಗಳಲ್ಲಿ ಸಂಪೂರ್ಣ ಬೆಂಗಳೂರಿಗೆ ಕುಡಿಯುವ ನೀರನ್ನು ನೀಡಲಿದ್ದಾರೆ. 6 ಟಿಎಂಸಿ ನೀರನ್ನು ಹೆಚ್ಚುವರಿಯಾಗಿ ನೀಡುತ್ತಿದ್ದಾರೆ. ಮೇಕೆದಾಟು ಯೋಜನೆಗೆ ಪಕ್ಷಾತೀತವಾಗಿ ಬೆಂಬಲ ಕೇಳಿದರು ನೀಡಲಿಲ್ಲ. ನಿಮ್ಮನ್ನು ಜನ ನೋಡಿದ್ದಾರೆ, ಅವರು ತೀರ್ಮಾನ ಮಾಡುತ್ತಾರೆ ಎಂದು ಸುರೇಶ್ ಹೇಳಿದರು.28ಕೆಆರ್ ಎಂಎನ್ 8,9.ಜೆಪಿಜಿ

ರಾಮನಗರದ ವಿಜಯನಗರದ ಬಳಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಲಿಗೆ ಬಿದ್ದು ಡಿ.ಕೆ.ಸುರೇಶ್ ಆಶೀರ್ವಾದ ಪಡೆದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಡಿಮೆಯಾಗಲಿದೆ ಬೆಂಗಳೂರು - ದಾವಣರೆ ಮಧ್ಯೆ ಅಂತರ : ಎರಡೂ ಗಂಟೆ ಪ್ರಯಾಣ ಸಮಯ ಉಳಿತಾಯ
ನೇಮಕಾತಿ ಪ್ರಕ್ರಿಯೆ ಇನ್ನು ಸುಗಮ-ಒಳಮೀಸಲು ಬಿಲ್‌ಗೆ ಕೊನೆಗೂ ಗೌರ್ನರ್‌ ಗೆಹಲೋತ್‌ ಅಂಕಿತ