ಕುಷ್ಠರೋಗಿಗಳು ಶಾಪಗ್ರಸ್ತರಲ್ಲ, ಗೌರವದಿಂದ ಕಾಣಿ: ಎಸ್.ಡಿ. ಬೆನ್ನೂರ

KannadaprabhaNewsNetwork |  
Published : Nov 09, 2026, 02:30 AM IST
ಕಾರ್ಯಕ್ರಮವನ್ನು ಉದ್ದೇಶಿಸಿ ಎಸ್.ಡಿ.ಬೆನ್ನೂರ ಮಾತನಾಡಿದರು | Kannada Prabha

ಸಾರಾಂಶ

ಕುಷ್ಠರೋಗವು ಯಾವುದೇ ಶಾಪ ಅಥವಾ ಕಳಂಕವಲ್ಲ, ಸಕಾಲಿಕ ಚಿಕಿತ್ಸೆಯಿಂದ ಇದನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿದ್ದು, ರೋಗಿಗಳನ್ನು ಸಮಾಜದಲ್ಲಿ ತಾರತಮ್ಯವಿಲ್ಲದೆ ಗೌರವದಿಂದ ಕಾಣಬೇಕು.

ಕನ್ನಡಪ್ರಭ ವಾರ್ತೆ ಗದಗ

ಕುಷ್ಠರೋಗವು ಯಾವುದೇ ಶಾಪ ಅಥವಾ ಕಳಂಕವಲ್ಲ, ಸಕಾಲಿಕ ಚಿಕಿತ್ಸೆಯಿಂದ ಇದನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿದ್ದು, ರೋಗಿಗಳನ್ನು ಸಮಾಜದಲ್ಲಿ ತಾರತಮ್ಯವಿಲ್ಲದೆ ಗೌರವದಿಂದ ಕಾಣಬೇಕು ಎಂದು ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ ವಿದ್ಯಾರ್ಥಿಗಳಿಗೆ ಹೇಳಿದರು.

ತಾಲೂಕಿನ ಹಿರೇಹಂದಿಗೋಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಐಇಸಿ ವಿಭಾಗ ಹಾಗೂ ಹುಲಕೋಟಿ ಆಯುಷ್ಮಾನ್ ಆರೋಗ್ಯ ಕೇಂದ್ರದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಕುಷ್ಠರೋಗ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕುಷ್ಠರೋಗದ ಲಕ್ಷಣಗಳ ಕುರಿತು ಮಾಹಿತಿ ನೀಡಿದ ಅವರು, ಇದು ಮೈಕ್ರೋ ಬ್ಯಾಕ್ಟೀರಿಯಂ ಲೆಪ್ರೆ ಎಂಬ ರೋಗಾಣುವಿನಿಂದ ಬರುವ ಚರ್ಮ ಮತ್ತು ನರಗಳಿಗೆ ಸಂಬಂಧಿಸಿದ ಕಾಯಿಲೆಯಾಗಿದೆ. ದೇಹದ ಮೇಲೆ ತುರಿಕೆಯಿಲ್ಲದ ತಿಳಿ-ಬಿಳಿ ಅಥವಾ ತಾಮ್ರ ವರ್ಣದ ಸ್ಪರ್ಶಜ್ಞಾನವಿಲ್ಲದ ಮಚ್ಚೆ, ಚರ್ಮ ದಪ್ಪವಾಗುವುದು, ಕಿವಿಯಾಲೆಗಳಲ್ಲಿ ಗಂಟು, ಕೈ ಕಾಲುಗಳಲ್ಲಿ ಮರಗಟ್ಟುವಿಕೆ ಅಥವಾ ಬಲಹೀನತೆ ಹಾಗೂ ವಾಸಿಯಾಗದ ಹುಣ್ಣುಗಳು ಇದರ ಪ್ರಮುಖ ಲಕ್ಷಣಗಳಾಗಿವೆ. ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಉಚಿತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಸ್.ಬಿ. ದೇವರವರ ಮಾತನಾಡಿ, ಎಲ್ಲರೂ ಒಗ್ಗೂಡಿ ಜಾಗೃತಿ ಮೂಡಿಸುವ ಮೂಲಕ ಭಾರತವನ್ನು ಕುಷ್ಠರೋಗ ಮುಕ್ತವಾಗಿಸಿ ಮಹಾತ್ಮ ಗಾಂಧೀಜಿ ಅವರ ಕನಸನ್ನು ನನಸು ಮಾಡಬೇಕೆಂದು ಕರೆ ನೀಡಿದರು.

ಇದೇ ವೇಳೆ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನದ ಕುರಿತು ಮಾಹಿತಿ ನೀಡಲಾಯಿತು. ಶಾಲೆಯ ಮುಖ್ಯ ಶಿಕ್ಷಕಿ ಎಸ್.ಎ. ತಡೋಲ, ಶಿಕ್ಷಕರಾದ ವಿ.ಎಚ್. ಗುಡ್ಲಾನೂರ, ವಿ.ಎಲ್. ಪೂಜಾರ, ಎಸ್.ಎಸ್. ಪಾಟೀಲ, ಆರ್.ಡಿ. ಜೋಶಿ, ಕೆ.ವಿ. ಚೂರಿ, ಯು.ವಿ. ಮಟ್ಟಿ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟನ್ ಕಬ್ಬಿಗೆ ₹1,000 ಹೆಚ್ಚುವರಿ ದರ ನಿಗದಿಗೆ ಪಟ್ಟು
ಸಾಯಿಪ್ರಿಯಾ ಸಕ್ಕರೆ ಕಾರ್ಖಾನೆ ತಕ್ಷಣ ಆರಂಭಿಸಿ