ಚನ್ನಪಟ್ಟಣ: ಕಳೆದ ಆರು ವರ್ಷಗಳ ಕಾಲ ಕ್ಷೇತ್ರದ ಶಾಸಕರಾಗಿದ್ದ ಕುಮಾರಸ್ವಾಮಿ ಅಭಿವೃದ್ಧಿ ಕುರಿತು ಚಿಂತಿಸಲಿಲ್ಲ. ಅವರ ಅವಧಿಯಲ್ಲಿ ತಾಲೂಕು ಅಧ್ವಾನವಾಗಿದ್ದು, ೧೦ವರ್ಷಗಳಷ್ಟು ಹಿಂದಕ್ಕೆ ಹೋಗಿದೆ. ಚನ್ನಪಟ್ಟಣ ಉಪಚುನಾವಣೆ ಧರ್ಮ ಅಧರ್ಮದ ನಡುವಿನ ಚುನಾವಣೆಯಾಗಿತ್ತು. ಅವರು ಏನೂ ಕೆಲಸ ಮಾಡದಿದ್ದಕ್ಕೆ ಜನ ನನ್ನನ್ನು ಗೆಲ್ಲಿಸಿದರು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ಮಾಡಿದರು.
ಕುಮಾರಸ್ವಾಮಿ ಅವಧಿಯಲ್ಲಿ ತಾಲೂಕಿನ ಮೇಲೆ ಯಾರ ಹಿಡಿತವೂ ಇರಲಿಲ್ಲ. ಅವರು ಒಂದು ದಿನವೂ ಹಳ್ಳಿಗಳಿಗೆ ಹೋಗಲಿಲ್ಲ. ಅವರಿಗೆ ಗ್ರಾಮಗಳ ಹೆಸರೇ ಗೊತ್ತಿಲ್ಲ. ಕುಮಾರಸ್ವಾಮಿ ಡವ್ ಗಿರಾಕಿ ಎಂದು ಜನರಿಗೆ ಗೊತ್ತು. ಚುನಾವಣೆ ಸಮಯದಲ್ಲಿ ಬರೀ ಭಾವನಾತ್ಮವಾಗಿ ಮಾತನಾಡುತ್ತಾರೆ. ಅದಕ್ಕೆ ಉಪಚುನಾವಣೆಯಲ್ಲಿ ಅವರು ಮನೆ-ಮನೆಗೆ ತಿರುಗಿದರೂ ಅವರನ್ನು ಜನ ತಿರಸ್ಕರಿಸಿದರು ಎಂದರು.
ಕುಮಾರಸ್ವಾಮಿ ವೇದಾಂತ ಹೇಳ್ತಾರೆ, ನಾಟಕ ಮಾಡ್ತಾರೆ. ಕಳೆದ 6 ವರ್ಷ ಶಾಸಕರಾಗಿದ್ದರೂ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ. ಜಲಜೀವನ್ ಮಿಷನ್ ಸಂಪೂರ್ಣ ವಿಫಲವಾಗಿದೆ. ಜನರಿಗೆ ಸರಿಯಾಗಿ ಕುಡಿಯುವ ನೀರು ಕೊಟ್ಟಿಲ್ಲ. ನಾನು ಹಳ್ಳಿಹಳ್ಳಿಗೆ ಹೋದಾಗ ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ತಿದ್ದಾರೆ. ಅವರ ಅವಧಿಯಲ್ಲಿ ತಾಲೂಕಿನ ಕೆರೆಗಳನ್ನು ತುಂಬಿಸಲು ಆಸಕ್ತಿ ತೋರಲಿಲ್ಲ. ಆದರೆ, ನಾನು ಶಾಸಕನಾದ ಕೂಡಲೇ ಕೆರೆಗಳಿಗೆ ನೀರು ತುಂಬಿಸಲು ಕ್ರಮ ಕೈಗೊಂಡಿದ್ದೇನೆ. ಕೆರೆಗಳಿಗೆ ಸಂಪರ್ಕ ಕಲ್ಪಿಸುವ ಕೆಲಸ ಮಾಡಲಾಗುತ್ತಿದೆ. ನಗರದ ಯುಜಿಡಿ ಸಮಸ್ಯೆ, ಕಸದ ಸಮಸ್ಯೆ, ಖಾಸಗಿ ಬಸ್ ನಿಲ್ದಾಣ ನಿರ್ಮಾಣ ಸೇರಿದಂತೆ ಹಲವು ಸಮಸ್ಯೆಗಳಿಳನ್ನು ಬಗೆಹರಿಸಲು ಕ್ರಮ ಕೈಗೊಂಡಿದ್ದೇನೆ ಎಂದು ಹೇಳಿದರು.ಆನೆ ಹಾವಳಿ ಸಮಸ್ಯೆಗೂ ಕ್ರಮ: ಪ್ರಸ್ತುತ ನಾನು ಅಧಿಕಾರಿಗಳನ್ನು ಕರೆದುಕೊಂಡು ಗ್ರಾಮಗಳಿಗೆ ಹೋಗಿ ಜನರ ಸಮಸ್ಯೆ ಆಲಿಸುತ್ತಿದ್ದೇನೆ. ಇದರಿಂದ ಸರ್ಕಾರ ಜೀವಂತವಾಗಿದೆ ಎಂದು ಜನರಿಗೆ ಗೊತ್ತಾಗುತ್ತಿದೆ. ಜಿಲ್ಲೆಯಲ್ಲಿ ಆನೆ ಹಾವಳಿ ತೀವ್ರವಾಗಿದ್ದು, ರೈತರು ಸಂಕಷ್ಟಕ್ಕೆ ಈಡಾಗಿದ್ದಾರೆ. ಈಗಾಗಲೇ ಎರಡು ಆನೆಗಳನ್ನು ಹಿಡಿಯಲಾಗಿದೆ. ನಮ್ಮ ಅವಧಿಯಲ್ಲಿ ಆನೆ ಸಮಸ್ಯೆಗೆ ಪರಿಹಾರ ಕಲ್ಪಿಸುತ್ತೇವೆ. ಚುನಾವಣಾ ಪೂರ್ವದಲ್ಲಿ ನೀಡಿದ್ದ ಎಲ್ಲ ಭರವಸೆ ಈಡೇರಿಸಲು ನಾವು ಬದ್ಧರಾಗಿದ್ದೇವೆ ಎಂದು ಹೇಳಿದರು.
ಕೋಟ್..........
-ಯೋಗೇಶ್ವರ್, ಶಾಸಕ, ಚನ್ನಪಟ್ಟಣ
ಬಾಕ್ಸ್೧೯ಕ್ಕೆ ಮತದಾರರಿಗೆ ಅಭಿನಂದನಾ ಸಮಾರಂಭ
ಪೊಟೋ೧೧ಸಿಪಿಟಿ೧: ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪೂರ್ವಭಾವಿ ಸಭೆಯನ್ನು ಶಾಸಕ ಸಿ.ಪಿ.ಯೋಗೇಶ್ವರ್, ಮಾಜಿ ಸಂಸದ ಡಿ.ಕೆ.ಸುರೇಶ್ ಉದ್ಘಾಟಿಸಿದರು.
ಪೊಟೋ೧೧ಸಿಪಿಟಿ೨:ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪೂರ್ವಭಾವಿ ಸಭೆಯಲ್ಲಿ ಶಾಸಕ ಸಿ.ಪಿ.ಯೋಗೇಶ್ವರ್, ಮಾಜಿ ಸಂಸದ ಡಿ.ಕೆ.ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.