ಕಾಳುಮೆಣಸು, ಏಲಕ್ಕಿ ಬೆಳೆಗಳ ತರಬೇತಿ ಕಾರ್ಯಕ್ರಮ

KannadaprabhaNewsNetwork |  
Published : Dec 13, 2025, 03:00 AM IST
ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಭಾರತೀಯ ಸಂಬಾರ ಮಂಡಳಿ ಮಡಿಕೇರಿ ಹಾಗೂ ಭಾರತೀಯ ಸಂಬಾರ ಬೆಳೆಗಳ ಸಂಶೋಧನಾ ಸಂಸ್ಥೆ ಅಪ್ಪಂಗಳ ಇವುಗಳ ಜಂಟಿ ಆಶ್ರಯದಲ್ಲಿ ಕಾಳುಮೆಣಸು ಹಾಗೂ ಏಲಕ್ಕಿ ಬೆಳೆಗಳ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಪಿ ಎಲ್ ಡಿ ಬ್ಯಾಂಕ್ ನ ನಿರ್ದೇಶಕರಾದ ಭುವನೇಶ್ವರ ಎನ್ ವಿ  ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.9-ಎನ್ ಪಿ ಕೆ-5.ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಭಾರತೀಯ ಸಂಬಾರ ಮಂಡಳಿ ಮಡಿಕೇರಿ ಹಾಗೂ ಭಾರತೀಯ ಸಂಬಾರ ಬೆಳೆಗಳ ಸಂಶೋಧನಾ ಸಂಸ್ಥೆ ಅಪ್ಪಂಗಳ ಇವುಗಳ ಜಂಟಿ ಆಶ್ರಯದಲ್ಲಿ ಕಾಳುಮೆಣಸು ಹಾಗೂ ಏಲಕ್ಕಿ ಬೆಳೆಗಳ ಬಗ್ಗೆ ತರಬೇತಿ ಕಾರ್ಯಕ್ರಮದಲ್ಲಿ ರೈತ ಸದಸ್ಯರು. | Kannada Prabha

ಸಾರಾಂಶ

ಕಾಳುಮೆಣಸು ಮತ್ತು ಏಲಕ್ಕಿ ಬೆಳೆಗಳ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಯಿತು. ಸಂಸ್ಥೆ ಅಧ್ಯಕ್ಷ ನಾಗೇಶ್‌ ಕುಂದಲ್ಪಾಡಿ ಅಧ್ಯಕ್ಷತೆ ವಹಿಸಿದ್ದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಭಾರತೀಯ ಸಂಬಾರ ಮಂಡಳಿ ಮಡಿಕೇರಿ ಹಾಗೂ ಭಾರತೀಯ ಸಂಬಾರ ಬೆಳೆಗಳ ಸಂಶೋಧನಾ ಸಂಸ್ಥೆ ಅಪ್ಪಂಗಳ ಜಂಟಿ ಆಶ್ರಯದಲ್ಲಿ ಕಾಳುಮೆಣಸು ಹಾಗೂ ಏಲಕ್ಕಿ ಬೆಳೆಗಳ ಬಗ್ಗೆ ತರಬೇತಿ ಕಾರ್ಯಕ್ರಮ ಏರ್ಪಡಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಸಂಸ್ಥೆಯ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿಯವರು ವಹಿಸಿ ಮಾತನಾಡಿ ಕೃಷಿಕರು ಆಗಿಂದಾಗ್ಗೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೃಷಿಯಲ್ಲಿ ಋಷಿಯಾಗಿ ಖುಷಿ ಕಂಡವರಿದ್ದಾರೆ. ಅಂದರೆ ಕೃಷಿಕರಿಗೆ ತಲ್ಲೀನತೆ ಅಗತ್ಯ ಎಂದರು. ಪಿ ಎಲ್ ಡಿ ಬ್ಯಾಂಕ್ ನ ನಿರ್ದೇಶಕರಾದ ಭುವನೇಶ್ವರ ಎನ್ ವಿ ರವರು ಕಾರ್ಯಕ್ರಮ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಕಲಾ ಬಾಲಚಂದ್ರ, ಉಪಾಧ್ಯಕ್ಷರಾದ ನಂಜಪ್ಪ, ನಿಟ್ಟಿಮಲೆ ಸಂಸ್ಥೆಯ ಉಪಾಧ್ಯಕ್ಷರಾದ ಅಶೋಕ ಪಿ ಎಂ, ಸಂಬಾರ ಮಂಡಳಿ ಅಧಿಕಾರಿಗಳಾದ ರಶ್ಮಿ ಯವರು ಹಾಗೂ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಲೋಕೇಶ್ ಹೊದ್ದೆಟ್ಟಿ ಉಪಸ್ಥಿತರಿದ್ದರು.

ಭಾರತೀಯ ಸಂಬಾರ ಬೆಳೆಗಳ ಸಂಶೋಧನಾ ಸಂಸ್ಥೆ ಅಪ್ಪಂಗಳದ ಹಿರಿಯ ವಿಜ್ಞಾನಿಗಳು ಹಾಗೂ ಮುಖ್ಯಸ್ಥರಾದ ಅಂಕೆ ಗೌಡರವರು ಏಲಕ್ಕಿ ಮತ್ತು ಕಾಳುಮೆಣಸು ವಿಚಾರವಾಗಿ ರೈತ ಸದಸ್ಯರಿಗೆ ಸುದೀರ್ಘವಾದ ಮಾಹಿತಿ ನೀಡಿದರು. ಕಾರ್ಯಕ್ರಮದ ಪ್ರಾರಂಭದಲ್ಲಿ ಸಂಸ್ಥೆಯ ಸಿಬ್ಬಂದಿಯವರಾದ ರವಿಪ್ರಕಾಶ್ ಸ್ವಾಗತಿಸಿದರು. ಸಹ ಭೋಜನದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೃತನ ಕಿರಿಯ ಸೋದರನಿಗೂಪರಿಹಾರದ ಹಕ್ಕಿದೆ: ಹೈಕೋರ್ಟ್
ಕಾರು ಓವರ್‌ ಟೇಕ್‌ ವಿಚಾರಕ್ಕೆ 5ಪುಂಡರಿಂದ ವ್ಯಕ್ತಿಯ ಮೇಲೆ ಹಲ್ಲೆ