ಶಿಕ್ಷಣದಿಂದ ಮಾತ್ರ ಪರಿಪೂರ್ಣತೆ ಸಾಧ್ಯ

KannadaprabhaNewsNetwork |  
Published : Oct 29, 2025, 11:30 PM IST
ರಾಜುಗೌಢ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಶಿಕ್ಷಣದಿಂದ ಮಾತ್ರ ಪರಿಪೂರ್ಣತೆ ಸಾಧಿಸಲು ಸಾಧ್ಯ. ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಯಾರೂ ವಂಚಿತರಾಗಬಾರದು. ಶಿಕ್ಷಣ ಕ್ಷೇತ್ರದಲ್ಲಿ ಅತಿ ಅಗತ್ಯವಿರುವ ಮೂಲಭೂತ ಸಮಸ್ಯೆಗಳನ್ನು ಶೀಘ್ರ ಬಗೆಹರಿಸಿ ಅಭಿವೃದ್ಧಿ ಕೆಲಸ ಮಾಡಲಾಗುವುದು ಎಂದು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಹೇಳಿದರು.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ಶಿಕ್ಷಣದಿಂದ ಮಾತ್ರ ಪರಿಪೂರ್ಣತೆ ಸಾಧಿಸಲು ಸಾಧ್ಯ. ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಯಾರೂ ವಂಚಿತರಾಗಬಾರದು. ಶಿಕ್ಷಣ ಕ್ಷೇತ್ರದಲ್ಲಿ ಅತಿ ಅಗತ್ಯವಿರುವ ಮೂಲಭೂತ ಸಮಸ್ಯೆಗಳನ್ನು ಶೀಘ್ರ ಬಗೆಹರಿಸಿ ಅಭಿವೃದ್ಧಿ ಕೆಲಸ ಮಾಡಲಾಗುವುದು ಎಂದು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಹೇಳಿದರು.

ತಾಲೂಕಿನ ಬಮ್ಮನಜೋಗಿ ಎಲ್.ಟಿ-01ರಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಪಂಚಾಯತಿ, ವಿಜಯಪುರದ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಸಿಂದಗಿ ಇವುಗಳ ಸಹಯೋಗದಲ್ಲಿ 2025-26ನೇ ಸಾಲಿನಿಂದ ಸರ್ಕಾರಿ ಪ್ರೌಢ ಶಾಲೆಯನ್ನಾಗಿ ಉನ್ನತಿಕರಿಸಿದ ನೂತನ ಸರ್ಕಾರಿ ಪ್ರೌಢಶಾಲೆಯ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಬಾರಿ ತಾಲೂಕಿಗೆ 3 ಸರ್ಕಾರಿ ಪ್ರೌಢಶಾಲೆಗಳು ಮಂಜೂರಾಗಿದ್ದು, ಶಾಸಕನಾದ ನಂತರ ಸರ್ಕಾರದ ಮಟ್ಟದಲ್ಲಿ ಸತತ ಪ್ರಯತ್ನದ ಫಲವಾಗಿ ಸರ್ಕಾರ ಪ್ರೌಢಶಾಲೆಯನ್ನು ಮಂಜೂರು ಮಾಡಿರುವುದು ಸಂತಸ ತಂದಿದೆ. ಕೆಲ ತಾಂತ್ರಿಕ ಅಡಚಣೆಯ ಪರಿಣಾಮ ಇದು ಸಾಧ್ಯವಾಗಿರಲಿಲ್ಲ ಇದಕ್ಕೆ ಇರುವ ಅಡಚಣೆಯನ್ನು ನಿವಾರಿಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಸಹಕಾರದಿಂದ ಈ ಪ್ರೌಢಶಾಲೆ ಆರಂಭಿಸಲಾಗಿದೆ. ಈ ನಿಟ್ಟಿನಲ್ಲಿ ಗ್ರಾಮದ ಜನರ ಬಹುದಿನಗಳ ಬೇಡಿಕೆ ಈಡೇರಿಸಿದಂತಾಗಿದೆ. ಗ್ರಾಮಸ್ಥರ ಬೇಡಿಕೆಯಂತೆ ಹೈಮಾಸ್ಕ್, ಸಿ.ಸಿ.ರಸ್ತೆ ಹಾಗೂ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುದಾನ ನೀಡಿದೆ. ದೇವರಹಿಪ್ಪರಗಿ ಪಟ್ಟಣದಲ್ಲಿ ಅಲ್ಪಸಂಖ್ಯಾತ ಮಕ್ಕಳಿಗಾಗಿ ಮೌಲಾನಾ ಆಝಾದ ವಸತಿ ಶಾಲೆ ಮಂಜೂರಾಗಿವೆ. ಇದು ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಇದು ಸಹಕಾರಿಯಾಗಲಿದೆ. ಜೊತೆಗೆ ಬರುವಂತ ದಿನಗಳಲ್ಲಿ ತಾಂಡಗಳ ಅಭಿವೃದ್ಧಿಗೆ ಹಂತ ಹಂತವಾಗಿ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.

ಪ್ರಾಸ್ತಾವಿಕವಾಗಿ ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿ ಮಾಹಾಂತೇಶ ಯಡ್ರಾಮಿ ಮಾತನಾಡಿ, ಪಾಲಕರು ಶಿಕ್ಷಣದ ಮಹತ್ವವನ್ನು ಅರಿತು ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಬೇಕು. ತಾತ್ಕಾಲಿಕ ಸಿಬ್ಬಂದಿಗಳನ್ನು ನೇಮಿಸಿ ಈ ವರ್ಷ ಪ್ರೌಢಶಾಲೆಯನ್ನು ಆರಂಭಿಸಲಾಗುವುದು, ಬರುವ ವರ್ಷದಿಂದ ಪೂರ್ಣ ಪ್ರಮಾಣದ ಸಿಬ್ಬಂದಿಯನ್ನು ಒದಗಿಸಲಾಗುವುದು ಎಂದು ಹೇಳಿದರು.ಸಾನಿಧ್ಯವನ್ನು ಕೆಸರಟ್ಟಿಯ ಸೋಮಲಿಂಗ ಸ್ವಾಮೀಜಿಗಳು ಆಶಿರ್ವಚನ ನೀಡಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಮಣೂರ ಗ್ರಾಪಂಯಿಂದ ಬೇರ್ಪಡಿಸಿ ಹೊಸ ಗ್ರಾಪಂ ಸೃಜಿಸಲು ಹಾಗೂ ದೇವರಹಿಪ್ಪರಗಿ ಪಟ್ಟಣದಲ್ಲಿ ಕನ್ನಡ ಮಾಧ್ಯಮ ಸರ್ಕಾರಿ ಪ್ರೌಢಶಾಲೆ ಆರಂಭಿಸಲು ಶಾಸಕರಿಗೆ ಕಸಾಪ ನಿಕಟಪೂರ್ವ ಅಧ್ಯಕ್ಷರಾದ ಜಿ.ಪಿ.ಬಿರಾದಾರ ಮನವಿ ಸಲ್ಲಿಸಿದರು.ಈ ವೇಳೆ ಪ್ರೌಢಶಾಲಾ ವಿದ್ಯಾರ್ಥಿಗಳು ಶಾಸಕರು ಉಚಿತ ಪಠ್ಯಪುಸ್ತಕ ಹಾಗೂ ಬಟ್ಟೆ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಅಶೋಕ ನಾಯಕ, ಉಪಾಧ್ಯಕ್ಷ ದಿಲೀಪ ಚವ್ಹಾಣ, ಇಸಿಒ ಎಸ್.ಎಂ.ಕಪನಿಂಬರಗಿ, ಸಿಆರ್‌ಸಿ ಬಾಬು ನಡುವಿನಕೇರಿ, ಕಂದಾಯ ನಿರೀಕ್ಷಕ ಸುಭಾಷ ಜಾದವ್, ಭೂದಾನಿ ದೇಸು ನಾಯಕ, ಗ್ರಾಪಂ ಸದಸ್ಯರಾದ ಶಾಂತು ರಾಠೋಡ, ಕಾಮಸಿಂಗ ಚವ್ಹಾಣ, ಭೀಮು ನಾಯಕ, ಬಸವರಾಜ ದೇವಣಗಾಂವ, ಮುಖ್ಯಗುರುಗಳಾದ ಬಿ.ಡಿ.ಪಾಟೀಲ ಸೇರಿದಂತೆ ಗ್ರಾಮದ ಮುಖಂಡರು ಉಪಸ್ಥಿತರಿದ್ದರು. ನಾಗೇಶ ನಾಗೂರ ನಿರೂಪಿಸಿದರು. ಶಿಕ್ಷಕಿ ವಿಜಯಲಕ್ಷ್ಮಿ ನವಲಿ ಸ್ವಾಗತಿಸಿ, ವಂದಿಸಿದರು.

PREV

Recommended Stories

ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ಹಣೆಯಲ್ಲಿ ಬರೆದಿದ್ದರೆ ಡಿಕೆಶಿ ಸಿಎಂ ಆಗ್ತಾರೆ ಇಲ್ದಿದ್ರೆ ಇಲ್ಲ : ಡಿಕೆಸು