ಕನ್ನಡಪ್ರಭ ವಾರ್ತೆ ಉಡುಪಿ
ಅವರು ಇಲ್ಲಿನ ಗುಜ್ಜಾಡಿಯ ನಾಯಕವಾಡಿಯ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ಸುವರ್ಣ ಸಂಗಮದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿದರು.
ಬೋಳಂಬಳ್ಳಿ ಶ್ರೀ ಪದ್ಮಾವತಿ ದೇವಸ್ಥಾನದ ಧರ್ಮದರ್ಶಿ ಧರ್ಮರಾಜ್ ಜೈನ್ ಉದ್ಘಾಟಿಸಿದರು. ಅಂತರ್ ಜಿಲ್ಲಾ ಮಟ್ಟದ ಕರೋಕೆ ಟ್ರ್ಯಾಕ್ ಗೀತ ಗಾಯನ ಸ್ಪರ್ಧೆ ಗಾನ ಸಂಭ್ರಮ 2025 ಪ್ರಶಸ್ತಿ ಫಲಕಗಳನ್ನು ಕುಂದಾಪುರದ ಆದರ್ಶ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಡಾ. ಆದರ್ಶ ಹೆಬ್ಬಾರ್ ಅನಾವರಣಗೊಳಿಸಿದರು.ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಶುಭ ಹಾರೈಸಿದರು. ಗಂಗೊಳ್ಳಿಯ ಬಿಲ್ಲವರ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಬಿಲ್ಲವ, ಜಾನಪದ ಕಲಾ ತರಬೇತುದಾರ ರಮೇಶ್ ಕಲ್ಮಾಡಿ, ಉದ್ಯಮಿಗಳಾದ ಪ್ರವೀಣ್ ಶೆಟ್ಟಿ, ಸುಭಾಷ್ ಶೆಟ್ಟಿ, ಯುವಕ ಮಂಡಲದ ಅಧ್ಯಕ್ಷ ಶ್ರೀಧರ ಎನ್. ಮೊದಲಾದವರು ಉಪಸ್ಥಿತರಿದ್ದರು. ಉಪಾಧ್ಯಕ್ಷರಾದ ರವಿ ಎನ್. ಜಿ. ಮೇಸ್ತ್ರಿ ಮತ್ತು ಉದಯ ಎನ್. ಕೆ. ಅತಿಥಿಗಳನ್ನು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ವಿವಿಧ ರಂಗಗಳ ಸಾಧಕರನ್ನು ಸನ್ಮಾನಿಸಲಾಯಿತು. ಸಂಗಮೇಶ್ವರ ದೇವಸ್ಥಾನದ ಗೌರವಾಧ್ಯಕ್ಷ ರಾಜು ಎನ್ಯ ಪ್ರಸ್ತಾವಿಕ ಮಾತುಗಳಾಡಿದರು. ಮನೋಜ್ ಸನ್ಮಾನಿತರನ್ನು ಪರಿಚಯಿಸಿದರು. ನರೇಂದ್ರ ಎಸ್. ಗಂಗೊಳ್ಳಿ ಮತ್ತು ಸತ್ಯನಾ ಕೊಡೇರಿ ಕಾರ್ಯಕ್ರಮವನ್ನು ನಿರೂಪಿಸಿದರು. ನಾಗರಾಜ ಎನ್. ಡಿ. ಧನ್ಯವಾದ ಸಮರ್ಪಿಸಿದರು.