ಧಾರವಾಡ:
ಇಲ್ಲಿಯ ಕೃಷಿ ವಿಶ್ವವಿದ್ಯಾಲಯದ ರೈತ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಮತ ಎಣಿಕೆ ಕಾರ್ಯದ ಮೇಲ್ವಿಚಾರಕರು ಹಾಗೂ ಎಣಿಕೆ ಸಹಾಯಕರು ಅವರಿಗೆ ಶನಿವಾರ ಆಯೋಜಿಸಿದ್ದ ಮತ ಎಣಿಕೆ ತರಬೇತಿಯಲ್ಲಿ ಮಾತನಾಡಿದ ಅವರು, ತರಬೇತಿಯಲ್ಲಿ ತಿಳಿಸುವ ಪ್ರತಿಯೊಂದು ಅಂಶವನ್ನೂ ಗಮನವಿಟ್ಟು ಆಲಿಸಿ, ಅಗತ್ಯವಿದ್ದಲ್ಲಿ ಪ್ರಶ್ನೆಗಳನ್ನು ಕೇಳಿ ಸ್ಪಷ್ಟತೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಮತ ಎಣಿಕೆ ಸಿಬ್ಬಂದಿ ತಮ್ಮನ್ನು ಕೇವಲ ಇಲಾಖೆಯ ನೌಕರರೆಂದು ಭಾವಿಸದೆ, ಚುನಾವಣಾಧಿಕಾರಿಯ ಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸಬೇಕು. ಚುನಾವಣಾಧಿಕಾರಿಯ ಜವಾಬ್ದಾರಿ ಅರಿತು, ಅತ್ಯಂತ ಎಚ್ಚರಿಕೆ ಮತ್ತು ಹೊಣೆಗಾರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು. ಚುನಾವಣಾ ಆಯೋಗದ ಮಾರ್ಗಸೂಚಿಗಳು, ನಿಯಮಗಳು ಹಾಗೂ ಕಾನೂನುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ಘನತೆಗೆ ಧಕ್ಕೆಯಾಗುವ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ ಎಂದು ತಿಳಿಸಿದರು.ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಳ್ಳುವ ವರೆಗೆ ಸಿಬ್ಬಂದಿ ತಮ್ಮ ಕರ್ತವ್ಯಕ್ಕೆ ಸಂಪೂರ್ಣ ಆದ್ಯತೆ ನೀಡಬೇಕು. ಎರಡು-ಮೂರು ದಿನಗಳ ಕಾಲ ಈ ಕಾರ್ಯಕ್ಕೆ ಅಗತ್ಯ ಸಮಯ ಮೀಸಲಿಟ್ಟು, ಯಾವುದೇ ಅನುಮಾನಗಳಿದ್ದರೂ ತಕ್ಷಣವೇ ಪರಿಹರಿಸಿಕೊಳ್ಳಬೇಕು. ಆತ್ಮವಿಶ್ವಾಸ ಅಗತ್ಯವಾದರೂ ಅತಿಯಾದ ಆತ್ಮವಿಶ್ವಾಸದಿಂದ ಸ್ವತಃ ನಿರ್ಧಾರ ತೆಗೆದುಕೊಳ್ಳಬಾರದು. ಪ್ರತಿಯೊಂದು ಕಾರ್ಯವನ್ನೂ ನಿಯಮಾನುಸಾರ ನಿರ್ವಹಿಸುವ ಜವಾಬ್ದಾರಿ ಸಿಬ್ಬಂದಿಯ ಮೇಲಿದೆ. ಮತ ಎಣಿಕೆ ಕೊಠಡಿಗೆ ಪ್ರವೇಶಿಸುವ ಮೊದಲು ಪ್ರಕ್ರಿಯೆಯ ಪ್ರತಿಯೊಂದು ಹಂತದ ಬಗ್ಗೆಯೂ ಸ್ಪಷ್ಟತೆ ಹೊಂದಿರಬೇಕು ಎಂದರು.
ಈ ವೇಳೆ ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್. ಆರ್, ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಹಾವೇರಿ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ, ನಾಲ್ಕು ಜಿಲ್ಲೆಯ ಅಪರ ಜಿಲ್ಲಾಧಿಕಾರಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ರುದ್ರೇಶ್ ಘಾಳಿ, ಧಾರವಾಡ ಜಿಲ್ಲೆಯ ತಹಸೀಲ್ದಾರ್‌ರು ಇದ್ದರು.