ಕರ್ತವ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಿ

KannadaprabhaNewsNetwork |  
Published : Nov 27, 2026, 01:15 AM IST
೨೬ಶಿರಾ೩: ಶಿರಾ ನಗರದಲ್ಲಿ ಸಂವಿಧಾನ ದಿನಾಚರಣೆ ಪ್ರಯುಕ್ತ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ತಹಸೀಲ್ದಾರ್ ಆನಂದ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ವಿ.ಕೆ.ಬಡಿಗೇರ ಸೇರಿದಂತೆ ಹಲವರು ಹಾಜರಿದ್ದರು. | Kannada Prabha

ಸಾರಾಂಶ

ಭಾರತೀಯರೆಲ್ಲರೂ ಸಂವಿಧಾನ ನೀಡಿರುವ ಹಕ್ಕುಗಳ ಬಗ್ಗೆ ತಿಳಿಯುವುದರ, ಜೊತೆಗೆ ಪ್ರತಿಯೊಬ್ಬರೂ ತಮ್ಮ ಕರ್ತವ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ತಹಸೀಲ್ದಾರ್ ಆನಂದ್ ಕುಮಾರ್ ತಿಳಿಸಿದರು

ಕನ್ನಡಪ್ರಭ ವಾರ್ತೆ ಶಿರಾ

ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಸಹೋದರತ್ವದ ಹಕ್ಕುಗಳನ್ನು ಕಲ್ಪಿಸಿದೆ. ಭಾರತೀಯರೆಲ್ಲರೂ ಸಂವಿಧಾನ ನೀಡಿರುವ ಹಕ್ಕುಗಳ ಬಗ್ಗೆ ತಿಳಿಯುವುದರ, ಜೊತೆಗೆ ಪ್ರತಿಯೊಬ್ಬರೂ ತಮ್ಮ ಕರ್ತವ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ತಹಸೀಲ್ದಾರ್ ಆನಂದ್ ಕುಮಾರ್ ತಿಳಿಸಿದರು.

ನಗರದ ಮಿನಿ ವಿಧಾನಸೌಧದಲ್ಲಿ ಏರ್ಪಡಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಂವಿಧಾನವು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿಯಾಗಿದೆ. ಜಾತಿ, ಧರ್ಮ, ಭಾಷೆ ಹಾಗೂ ಪ್ರಾಂತ್ಯಗಳ ಭೇದವಿಲ್ಲದೆ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿರುವುದು ಸಂವಿಧಾನದ ವಿಶೇಷತೆಯಾಗಿದೆ. ಯುವಜನರು ಸಂವಿಧಾನದ ಮೌಲ್ಯಗಳು ಮತ್ತು ಆಶಯಗಳನ್ನು ಅರಿತುಕೊಂಡು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಹೇಳಿದರು.

ನಗರಸಭೆ ಅಧ್ಯಕ್ಷ ಜೀಷಾನ್ ಮೊಹಮದ್ ಮಾತನಾಡಿ ಸಂವಿಧಾನದ ಆಶಯಗಳನ್ನು ಗೌರವಿಸುವ ಮೂಲಕ ದೇಶದ ಏಕತೆ, ಅಖಂಡತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷ ಲಕ್ಷ್ಮೀಕಾಂತ್, ಸದಸ್ಯ ಅಜಯ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ವಿ.ಕೆ.ಬಡಿಗೇರ, ಪೌರಾಯುಕ್ತ ರುದ್ರೇಶ್.ಕೆ, ರಾಜ್ಯ ಶಾಸ್ತ್ರ ಉಪನ್ಯಾಸಕ ಬಸವರಾಜು, ಮಾಜಿ ಪುರಸಭಾ ಸದಸ್ಯ ಟಿ.ಲೋಕೇಶ್, ಮಾಜಿ ತಾ.ಪಂ. ಸದಸ್ಯ ಪಿ.ಬಿ.ನರಸಿಂಹಯ್ಯ, ಹಿರಿಯ ದಲಿತ ಮುಖಂಡ ಜೆ.ಎನ್.ರಾಜಸಿಂಹ, ದಸಂಸ ಅಧ್ಯಕ್ಷ ಶಿವಾಜಿನಗರ ತಿಪ್ಪೇಸ್ವಾಮಿ, ಮಾಗೋಡು ಯೋಗಾನಂದ್, ಗಜಮಾರನಹಳ್ಳಿ ನಾಗರಾಜು, ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ಹನುಮಂತರಾಜು ಸೇರಿದಂತೆ ಹಲವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯಾವುದೇ ಬೇಧವಿಲ್ಲದೆ ಸಮಾನತೆ ಸಾರುವ ಗ್ರಂಥವೇ ಸಂವಿಧಾನ: ನ್ಯಾ. ಸೌಭಾಗ್ಯ ಭೂಷೇರ್
ಸಂವಿಧಾನದ ಆಶಯಗಳನ್ನು ಈಡೇರಿಸುವುದು ಪ್ರತಿಯೊಬ್ಬರ ಕರ್ತವ್ಯ: ಸಚಿವ ಸಿ. ಪುಟ್ಟರಂಗಶೆಟ್ಟಿ