ಮತದಾನ ವೇಳೆ ನಿಯಮದಂತೆ ಕರ್ತವ್ಯ ನಿರ್ವಹಿಸಿ

KannadaprabhaNewsNetwork | Published : May 1, 2024 1:21 AM

ಸಾರಾಂಶ

ಮತದಾನದ ಸಂದರ್ಭ ಯಾವುದೇ ತೊಂದರೆ ಆಗದಂತೆ ನಿಯಮಾನುಸಾರ ಕರ್ತವ್ಯ ನಿರ್ವಹಿಸಿ ಎಂದು ಸಹಾಯಕ ಚುನಾವಣಾಧಿಕಾರಿ ಭಾವನಾ ಬಸವರಾಜ್ ಹರಿಹರದಲ್ಲಿ ಹೇಳಿದ್ದಾರೆ.

- ಮತಗಟ್ಟೆ ಅಧಿಕಾರಿಗಳ ತರಬೇತಿ ಶಿಬಿರದಲ್ಲಿ ಭಾವನಾ ಬಸವರಾಜ್ - - - ಕನ್ನಡಪ್ರಭ ವಾರ್ತೆ ಹರಿಹರ

ಮತದಾನದ ಸಂದರ್ಭ ಯಾವುದೇ ತೊಂದರೆ ಆಗದಂತೆ ನಿಯಮಾನುಸಾರ ಕರ್ತವ್ಯ ನಿರ್ವಹಿಸಿ ಎಂದು ಸಹಾಯಕ ಚುನಾವಣಾಧಿಕಾರಿ ಭಾವನಾ ಬಸವರಾಜ್ ಹೇಳಿದರು.

ನಗರದ ಸೆಂಟ್ ಮೇರಿಸ್ ಕಾನ್ವೆಂಟ್ ಶಾಲೆಯಲ್ಲಿ ಮಂಗಳವಾರ ನಡೆದ ಮತಗಟ್ಟೆ ಅಧಿಕಾರಿಗಳ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಚುನಾವಣೆ ಎನ್ನುವುದು ಒಂದು ಮಹತ್ತರವಾದ ಪಾತ್ರ ನಿರ್ವಹಿಸುತ್ತದೆ. ಇಂತಹ ಕಾರ್ಯದಲ್ಲಿ ತೊಡಗಿಸಿಕೊಂಡ ತಾವುಗಳು ತಮ್ಮ ಜವಾಬ್ದಾರಿ ಅರಿತು ಕೇಲಸ ನಿರ್ವಹಿಸಬೇಕು ಎಂದರು.

ಮತದಾನದ ಸಂದರ್ಭ ಮತಗಟ್ಟೆ ಅಧಿಕಾರಿಗಳು ಮತದಾರರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳುವುದು ಅತಿ ಮುಖ್ಯ. ಈ ಹಿನ್ನೆಲೆ ಎಲ್ಲ ಮತಗಟ್ಟೆಗಳ ಅಧಿಕಾರಿಗಳು ಉತ್ತಮವಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.

ಮಂಗಳವಾರ ನಡೆದ ಮತಗಟ್ಟೆ ಅಧಿಕಾರಿಗಳ ತರಬೇತಿ ಶಿಬಿರದಲ್ಲಿ ೧೨೦೦ ಅಧಿಕಾರಿಗಳು ಭಾಗವಹಿಸಿದ್ದು, ಇವಿಎಂ ಯಂತ್ರವನ್ನು ಯಾವ ರೀತಿಯಲ್ಲಿ ಮತದಾನಕ್ಕೆ ತಯಾರಿ ಮಾಡಬೇಕು ಎನ್ನುವುದನ್ನು ಪ್ರಾಯೋಗಿಕವಾಗಿ ತೋರಿಸಲಾಯಿತು.

ಮತದಾನದ ವೇಳೆ ತಾಂತ್ರಿಕ ದೋಷ ಉಂಟಾದ ಸಂದರ್ಭ ಯಾವ ರೀತಿಯಲ್ಲಿ ನಿರ್ವಹಣೆ ಮಾಡಬೇಕು ಎನ್ನುವುದನ್ನು ಸೆಕ್ಟರ್ ಅಧಿಕಾರಿಗಳು ಮತಗಟ್ಟೆ ಅಧಿಕಾರಿಗಳಿಗೆ ಪ್ರಾಯೋಗಿಕವಾಗಿ ತೋರಿಸಲು ೮ ಇವಿಎಂ ಯಂತ್ರಗಳನ್ನು ಬಳಕೆ ಮಾಡಿಕೊಳ್ಳಲಾಯಿತು.

ಪೋಸ್ಟಲ್ ಬ್ಯಾಲೆಟ್‌ಗಳ ಮೂಲಕ ಕರ್ತವ್ಯನಿರತ ಅಧಿಕಾರಿಗಳಿಗೆ ಮತದಾನ ಮಾಡುವ ವ್ಯವಸ್ಥೆ ಮಾಡಲಾಗಿತ್ತು. ತಹಸೀಲ್ದಾರ್ ಸೇರಿದಂತೆ ಒಟ್ಟು ೭೧ ಅಧಿಕಾರಿಗಳು ಮಂಗಳವಾರ ಮತದಾನ ಮಾಡಿದರು.

ಈ ವೇಳೆ ತಹಸೀಲ್ದಾರ್ ಕೆ.ಎಂ.ಬಸವರಾಜ್, ಪೌರಾಯುಕ್ತ ಐಗೂರು ಬಸವರಾಜ್, ಬಿಇಒ ಹನುಮಂತಪ್ಪ, ಸಿಡಿಪಿಒ ಪೂರ್ಣಿಮಾ, ಜಿಪಂ ಎಇಇ ಗಿರೀಶ್, ಪಿಡಬ್ಲ್ಯೂಡಿ ಎಇಇ ಶಿವಮೂರ್ತಿ, ಡಾ.ಸಿದ್ದೇಶ್, ತಾಪಂ ಪ್ರಭಾರ ಇಒ ರಾಮಕೃಷ್ಣಪ್ಪ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

- - - -೩೦ಎಚ್‌ಆರ್‌ಆರ್೪:

ಹರಿಹರ ನಗರದ ಸೆಂಟ್ ಮೇರಿಸ್ ಕಾನ್ವೆಂಟ್ ಶಾಲೆಯಲ್ಲಿ ಮಂಗಳವಾರ ನಡೆದ ಮತಗಟ್ಟೆ ಅಧಿಕಾರಿಗಳ ತರಬೇತಿ ಶಿಬಿರದಲ್ಲಿ ಅಧಿಕಾರಿಗಳು ಭಾಗವಹಿಸಿ, ಮಾಹಿತಿ ಪಡೆದುಕೊಂಡರು.

Share this article