ಎರಡು ವರ್ಷಗಳಲ್ಲಿ ಶಾಶ್ವತ ನೀರಾವರಿ ಯೋಜನೆ ಪೂರ್ಣಗೊಳಿಸಲಾಗುವುದು: ಎಚ್.ಡಿ. ತಮ್ಮಯ್ಯ

KannadaprabhaNewsNetwork |  
Published : Aug 18, 2025, 12:00 AM IST
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ದೇವನೂರು ಕೆರೆಗೆ ಶಾಸಕ ಎಚ್‌.ಡಿ. ತಮ್ಮಯ್ಯ ಅವರು ಭಾನುವಾರ ಬಾಗಿನ ಅರ್ಪಿಸಿದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ಭಾರತ ದೇಶದಲ್ಲಿ ವಿವಿಧ ಧರ್ಮಗಳನ್ನು ಆಚರಣೆ ಮಾಡಲಾಗುತ್ತದೆ. ನಾವೆಲ್ಲರೂ ಭಾರತೀಯರು, ನಮ್ಮದು ಜಾತ್ಯಾತೀತ ರಾಷ್ಟ್ರ ಎಂಬುದು ಹೆಮ್ಮೆಯ ವಿಷಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ತಿಳಿಸಿದರು.

ಕೆರೆಗಳನ್ನು ತುಂಬಿಸಿ ಗಂಗಾ ಪೂಜೆ ಮಾಡುವುದೇ ಒಂದು ದೊಡ್ಡ ಹಬ್ಬ । ದೇವನೂರು ಕೆರೆಗೆ ಬಾಗಿನ ಅರ್ಪಣೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಭಾರತ ದೇಶದಲ್ಲಿ ವಿವಿಧ ಧರ್ಮಗಳನ್ನು ಆಚರಣೆ ಮಾಡಲಾಗುತ್ತದೆ. ನಾವೆಲ್ಲರೂ ಭಾರತೀಯರು, ನಮ್ಮದು ಜಾತ್ಯಾತೀತ ರಾಷ್ಟ್ರ ಎಂಬುದು ಹೆಮ್ಮೆಯ ವಿಷಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ತಿಳಿಸಿದರು.

ಭಾನುವಾರ ದೇವನೂರು ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿ, ಹಿಂದೂ ಧರ್ಮದ ಆಚರಣೆಯಲ್ಲಿ ಆಷಾಡ ಮಾಸ ಕಳೆದ ನಂತರ ಶ್ರಾವಣ ಮಾಸ ಪ್ರಾರಂಭವಾಗುತ್ತದೆ. ಶುಭ ಕಾರ್ಯಗಳನ್ನು ನಡೆಸುವ ಈ ಮಾಸದಲ್ಲಿ ವಿವಿಧ ಪೂಜೆ, ಹಬ್ಬ ಮಾಡಲಾಗುತ್ತದೆ ಅಂತಹ ಹಬ್ಬಗಳಲ್ಲಿ ಬಯಲುಸೀಮೆ ಭಾಗದ ಕೆರೆಗಳನ್ನು ತುಂಬಿಸಿ, ಕೊಡಿ ಹರಿಸಿ, ಗಂಗಾ ಪೂಜೆ ಮಾಡುವುದೇ ಒಂದು ದೊಡ್ಡ ಹಬ್ಬ ಎಂದರು.

ನುಡಿದಂತೆ ನಡೆದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಶೀರ್ವಾದದಿಂದ ಎತ್ತಿನ ಹೊಳೆ ಭಾಗದಿಂದ ನೀರನ್ನು ಏತ ನೀರಾವರಿ ಮುಖಾಂತರ ಬೆಳವಾಡಿ, ದೇವನೂರು , ಮಾಚೇನಹಳ್ಳಿ ಕೆರೆ, ಕುರುಬರಹಳ್ಳಿ ಕೆರೆ ಗಳಿಗೆ ತುಂಬಿಸಲಾಗಿದ್ದು ಇಂತಹ ಬಡವರ, ದೀನ ದಲಿತರ, ಹಿಂದುಳಿದ ವರ್ಗ ಹಾಗೂ ಎಲ್ಲಾ ವರ್ಗದವರ ಬದುಕಿನ ಬಗ್ಗೆ ಯೋಚಿಸುವ ಸರ್ಕಾರಕ್ಕೆ ನೀವು ಅಭಿನಂದನೆ ಸಲ್ಲಿಸಿದರೆ ಅವರ ಜೊತೆಯಲ್ಲಿ ಕೆಲಸ ಮಾಡುವ ಅವಕಾಶ ಮಾಡಿಕೊಟ್ಟ ಕ್ಷೇತ್ರದ ಜನರಿಗೆ ನಾನು ಕೃತಜ್ಞತೆ ತಿಳಿಸುತ್ತೇನೆ ಎಂದರು.

ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ಕಡೂರು ತಂಗ್ಲಿಕೆರೆಯಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಉಪಸ್ಥಿತಿಯಲ್ಲಿ ಶಂಕುಸ್ಥಾಪನೆ ನೆರೆವೇರಿಸಲಾಗುವುದು. ನಂತರ ಎರಡು ವರ್ಷಗಳಲ್ಲಿ ಶಾಶ್ವತ ನೀರಾವರಿ ಯೋಜನೆ ಪೂರ್ಣಗೊಳಿಸಲಾಗುವುದು ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯಿತ್ರಿ ಶಾಂತೇಗೌಡ ಮಾತನಾಡಿ, ಜನರ ಕಣ್ಣೀರನ್ನು ಒರೆಸಲು ಕಾಂಗ್ರೆಸ್ ಸರ್ಕಾರ ಸಹಕಾರಿಯಾಗಿದ್ದು, ಗ್ರಾಮ ಪಂಚಾಯಿತಿಯಿಂದ ದೆಹಲಿವರೆಗೂ ಯಾವುದೇ ಒಳ್ಳೆಯ ಕೆಲಸವನ್ನು ಮಾಡಿದಾಗ ಅದನ್ನು ಗುರುತಿಸಿ ಪ್ರಶಂಸಿಸುವ ಕೆಲಸವನ್ನು ನಾವು ಮಾಡಬೇಕು ಎಂದರು.

ಸಖರಾಯಪಟ್ಟಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಡಿಮನೆ ಸತೀಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಬೆಳವಾಡಿ ಕೆರೆ ಮತ್ತು ದೇವನೂರು ಕೆರೆಗೆ ಇಂದು ಬಾಗಿನ ಬಿಡುವ ಸಂಭ್ರಮದ ದಿನವಾಗಿದ್ದು, 25 ವರ್ಷಗಳಿಂದ ಈ ಭಾಗದ ಕೆರೆಗಳನ್ನು ತುಂಬಿಸುವ ಹೋರಾಟ ನಡೆದುಕೊಂಡು ಬಂದಿದ್ದು, ನಿಮ್ಮೆಲ್ಲರ ಕಣ್ಣೀರಿನ ಹೋರಾಟಕ್ಕೆ ಇಂದು ಪ್ರತಿಫಲ ದೊರೆತಿದೆ ಎಂದರು.

ಈ ಸಂದರ್ಭದಲ್ಲಿ ಕಡೂರು ಶಾಸಕ ಆನಂದ್, ಚಿಕ್ಕಮಗಳೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಂಜೇಗೌಡ, ಗ್ಯಾರಂಟಿ ಪ್ರಾಧಿಕಾರ ಸಮಿತಿ ಅಧ್ಯಕ್ಷ ಶಿವಾನಂದಸ್ವಾಮಿ, ರಾಜ್ಯ ಪರಿಸರ ಮಾಲಿನ್ಯ ಮೌಲ್ಯಮಾಪನಾ ಸಮಿತಿ ಅಧ್ಯಕ್ಷ ಎ.ಎನ್. ಮಹೇಶ್, ಜಿಪಂ ಮಾಜಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ, ಸಣ್ಣ ನೀರಾವರಿ ಇಲಾಖೆ ದಕ್ಷಿಣಮೂರ್ತಿ, ಕಾಂಗ್ರೆಸ್‌ ಪಕ್ಷದ ಮುಖಂಡರಾದ ಬಸವರಾಜ್, ಚಂದ್ರಪ್ಪ, ಹೇಮಾವತಿ, ಬಾಬು ಷಡಾಕ್ಷರಿ, ಶಂಕರ್ ನಾಯಕ್, ಅಮೀರ್, ಹೊನ್ನಪ್ಪ, ಕೆಂಗೇಗೌಡ ಉಪಸ್ಥಿತರಿದ್ದರು, ಸಂತೋಷ್ ಸ್ವಾಗತಿಸಿ ವಂದಿಸಿದರು.17 ಕೆಸಿಕೆಎಂ 5ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ದೇವನೂರು ಕೆರೆಗೆ ಶಾಸಕ ಎಚ್‌.ಡಿ. ತಮ್ಮಯ್ಯ ಭಾನುವಾರ ಬಾಗಿನ ಅರ್ಪಿಸಿದರು.

--------------------------

PREV

Recommended Stories

ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌