ಕಾಡಾನೆ ಹಾವಳಿ ತಡೆಗಟ್ಟಲು ಶಾಶ್ವತ ಯೋಜನೆ: ಸಂಸದ ಯದುವೀರ್

KannadaprabhaNewsNetwork |  
Published : Jun 13, 2025, 03:32 AM IST
ಅವರು  | Kannada Prabha

ಸಾರಾಂಶ

ಕಾಡಾನೆಗಳ ಹಾವಳಿ ತಡೆಗಟ್ಟಲು ಶಾಶ್ವತ ಯೋಜನೆ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸುವುದಾಗಿ ಸಂಸದರು ತಿಳಿಸಿದರು.

ಕನ್ನಡಪ್ರಭ ವಾರ್ತೆ ಸಿದ್ದಾಪುರ

ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ಶಾಶ್ವತ ಯೋಜನೆ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸುವುದಾಗಿ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಿಳಿಸಿದರು.ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ಶುಕ್ರವಾರದಂದು ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿದ ಕುಕ್ಕುನೂರು ಪುರುಷೋತ್ತಮ ಅವರ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭ ಕುಕ್ಕನೂರು ಕುಟುಂಬಸ್ಥರು ಕರಡಿಗೋಡು ಗ್ರಾಮದಲ್ಲಿ ನಿರಂತರವಾಗಿ ಕಾಡಾನೆಗಳ ಹಾವಳಿ ಇದ್ದು ಕಾಫಿ ತೋಟಗಳಲ್ಲಿ ಕಾಡಾನೆಗಳು ಬೀಡು ಬಿಟ್ಟು ದಾಂದಲೆ ನಡೆಸುತ್ತಿದೆ. ಅಲ್ಲದೆ ಹಗಲಿನ ಸಮಯ ಕಾಡಾನೆಗಳು ಸಾರ್ವಜನಿಕ ರಸ್ತೆಯ ಮುಖಾಂತರ ಸಂಚರಿಸುತ್ತಿದೆ. ಗ್ರಾಮದಲ್ಲಿ ಆತಂಕ ಮನೆ ಮಾಡಿದೆ ಎಂದು ಸಂಸದರ ಬಳಿ ಅಳಲು ತೋಡಿಕೊಂಡರು. ಕಾಡಾನೆಗಳ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಶ್ವತ ಯೋಜನೆಯನ್ನು ರೂಪಿಸಬೇಕೆಂದು ಮನವಿ ಮಾಡಿಕೊಂಡರು. ಕಾಡಾನೆಗಳು ಕಾಫಿ ತೋಟದೊಳಗೆ ಹಾಗೂ ಗ್ರಾಮದೊಳಗೆ ಸಂಚರಿಸುವ ಸಂದರ್ಭದಲ್ಲಿ ಅವುಗಳ ಬರವಿಕೆಯನ್ನು ತಿಳಿಯಲು ಸೈರನ್ ಶಬ್ಧ ಅಳವಡಿಸಬೇಕೆಂದು ಸ್ಥಳೀಯರು ಮನವಿ ಮಾಡಿಕೊಂಡರು.

ರಾಜ್ಯ ಸರ್ಕಾರದೊಂದಿಗೆ ಸಹಕಾರ:

ಘಟನೆಯ ಬಗ್ಗೆ ಪುರುಷೋತ್ತಮ ಅವರ ಅಳಿಯ ಹಾಗೂ ಮಡಿಕೇರಿ ತಾಲೂಕು ತಹಸೀಲ್ದಾ ರ್ ಪ್ರವೀಣ್ ಅವರು ಘಟನೆಯ ಬಗ್ಗೆ ಸಂಸದರ ಬಳಿ ಮಾಹಿತಿ ನೀಡಿದರು. ಆಲಿಸಿದ ಸಂಸದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಕಾಡಾನೆಗಳ ಹಾವಳಿಯ ಬಗ್ಗೆ ಈಗಾಗಲೇ ತಮ್ಮ ಗಮನಕ್ಕೆ ಬಂದಿದ್ದು ಈಗಾಗಲೇ ಕಾಡಾನೆಗಳ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ 294 ಕಿಲೋ ಮೀಟರ್ ದೂರದವರೆಗೆ ರೈಲ್ವೆ ಬ್ಯಾರಿಕೇಡ್‌ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು. ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ರಾಜ್ಯ ಸರ್ಕಾರದೊಂದಿಗೆ ಸಹಕಾರ ನೀಡುವುದಾಗಿ ಭರವಸೆಯನ್ನು ನೀಡಿದರು. ಕಾಡಾನೆಗಳ ಹಾವಳಿಯ ಬಗ್ಗೆ ಸರ್ಕಾರದ ಗಮನಸೆಳೆಯುವುದಾಗಿ ಸಂಸದರು ತಿಳಿಸಿದರು.ಅವರೆಗುಂದಕ್ಕೆ ಭೇಟಿಕಳೆದ ಕೆಲವು ದಿನಗಳ ಹಿಂದೆ ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದ ಅವರೇಗುಂದ ಬಸವನಹಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಸುಳ್ಯ ಕೋಡಿ ಚಿಣ್ಣಪ್ಪ ಅವರ ನಿವಾಸಕ್ಕೆ ಸಂಸದರು ಭೇಟಿ ನೀಡಿ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮೃತರ ಪುತ್ರ ಗ್ರಾಮ ಪಂಚಾಯಿತಿ ಸದಸ್ಯ ಸುಳ್ಯ ಕೋಡಿ ಜಯಂತ್ ಮಾತನಾಡಿ, ಈ ಭಾಗದಲ್ಲಿ ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ಶಾಶ್ವತ ಯೋಜನೆಯನ್ನು ರೂಪಿಸಬೇಕು ಎಂದರು. ಅಲ್ಲದೆ ಅವರೆಗುಂದ ಬಸವನಹಳ್ಳಿ ಭಾಗದ ಅರಣ್ಯದಂಚಿನಲ್ಲಿ ತಲತಲಾಂತರ ಗಳಿಂದ ವಾಸ ಮಾಡಿಕೊಂಡಿರುವ ಇತರ ಜನಾಂಗಕ್ಕೆ ಈವರೆಗೂ ಹಕ್ಕುಪತ್ರಗಳು ಲಭಿಸಿರುವುದಿಲ್ಲ. ಕಳೆದ 75 ವರ್ಷಗಳಿಂದ ಇದೇ ಜಾಗದಲ್ಲಿ ವಾಸ ಮಾಡಿಕೊಂಡಿರುವ ಇತರ ಜನಾಂಗಕ್ಕೆ ಹಕ್ಕುಪತ್ರಗಳು ದೊರೆಯದ ಹಿನ್ನೆಲೆಯಲ್ಲಿ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದೇವೆ ಎಂದು ಸಂಸದರ ಬಳಿ ತಮ್ಮ ಬೇಡಿಕೆಗಳನ್ನು ಸಲ್ಲಿಸಿದರು. ಅಲ್ಲದೆ ಈ ಭಾಗದ ರಸ್ತೆಗಳು ತೀವ್ರವಾಗಿ ಹದಗೆಟ್ಟಿದೆ. ಕೇಂದ್ರ ಸರ್ಕಾರದ ಅನುದಾನದಿಂದ ರಸ್ತೆಯನ್ನು ಅಭಿವೃದ್ಧಿಪಡಿಸಲು ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡರು. ಇದಕ್ಕೆ ಪ್ರತಿಕ್ರಿಸಿದ ಸಂಸದರು ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಬಳಿ ಚರ್ಚಿಸುವುದಾಗಿ ತಿಳಿಸಿದರು.ಮಾಲ್ದಾರೆಗೆ ಭೇಟಿಕಳೆದ ಎರಡು ವಾರಗಳ ಹಿಂದೆ ಮಾಲ್ದಾರೆಯ ಬಾಡಗ ಬಾಣಂಗಾಲ ಗ್ರಾಮದಲ್ಲಿ ಗಾಳಿ ಮಳೆಗೆ ಮರ ಬಿದ್ದು ದುರ್ಮರಣ ಹೊಂದಿದ ಪೊನ್ನಚಂಡ ವಿಷ್ಣು ಬೆಳ್ಯಪ್ಪ ಅವರ ನಿವಾಸಕ್ಕೆ ಸಂಸದರು ಭೇಟಿ ನೀಡಿ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು. ಇದೇ ಸಂದರ್ಭದಲ್ಲಿ ಮಾಲ್ದಾರೆ ಗ್ರಾಮಸ್ಥರು ಈ ಭಾಗದ ರಸ್ತೆಗಳನ್ನು ಅಭಿವೃದ್ಧಿಪಡಿಸುವಂತೆ ಮನವಿ ಪತ್ರವನ್ನು ಸಲ್ಲಿಸಿದರು. ಸಂಸದರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಜಿಲ್ಲಾಪ್ರಧಾನ ಕಾರ್ಯದರ್ಶಿ ವಿ.ಕೆ. ಲೋಕೇಶ್, ಜಿಲ್ಲಾ ಹಿಂದುಳಿದ ಜಿಲ್ಲಾಧ್ಯಕ್ಷ ‌ಬಿ.ವ್ಯೆ. ಅಪ್ರು ರವೀಂದ್ರ, ವಿರಾಜಪೇಟೆ ಮಂಡಲ ಅಧ್ಯಕ್ಷ ಸುವೀನ ಗಣಪತಿ, ವಿರಾಜಪೇಟೆ ತಾಲೂಕು ಕಾರ್ಯದರ್ಶಿ ಕುಟ್ಟಂಡ ಅಜಿತ್ ಕರುಂಬಯ್ಯ, ಸಿದ್ದಾಪುರ ಗ್ರಾಮಪಂಚಾಯಿತಿ ಸದಸ್ಯರಾದ ರೀನಾ ತುಳಸಿ, ಎಂ.ಎ. ಆನಂದ, ಮಹೇಶ್ ಕುಮಾರ್, ರೇಖ ರೈ. ಸಿದ್ದಾಪುರ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ರೂಪೇಶ್, ಸಹ ಪ್ರಮುಖ್ ದಿಜಿತ್ , ಬಿಜೆಪಿ ತಾಲೂಕು ವಕ್ತಾರ ರಾಕೇಶ್ ದೇವಯ್ಯ, ಪ್ರಮುಖರಾದ ಬಿ.ಕೆ. ಅನಿಲ್ ಶೆಟ್ಟಿ, ವಿನೋದ್ ಪೂಜಾರಿ, ಇನ್ನಿತರರು ಹಾಗೂ ಗ್ರಾಮಸ್ಥರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ