ಸಭೆ ಸಮಾರಂಭಕ್ಕೆ ಸುವಿಧ ಆ್ಯಪ್‌ನಿಂದ ಅನುಮತಿ

KannadaprabhaNewsNetwork | Published : Mar 23, 2024 1:16 AM

ಸಾರಾಂಶ

ರಾಜಕೀಯ ವಿವಿಧ ಪಕ್ಷದ ಅಭ್ಯರ್ಥಿಗಳು ಹಾಗೂ ಮುಖಂಡರು ಸಭೆ ಸಮಾರಂಭಗಳಿಗೆ ಸುವಿಧ ಆ್ಯಪ್ ಬಳಕೆ ಮಾಡುವ ಮೂಲಕ ಅರ್ಜಿ ಸಲ್ಲಿಸಿದರೆ 48 ಗಂಟೆಯ ಒಳಗೆ ಅನುಮತಿ ಸಿಗಲಿದೆ ಎಂದು ಸಹಾಯಕ ಚುನಾವಣಾಧಿಕಾರಿ ಮಲ್ಲಿಕಾರ್ಜುನ್ ತಿಳಿಸಿದರು.

ಕನ್ನಡಪ್ರಭವಾರ್ತೆ ಹನೂರು

ರಾಜಕೀಯ ವಿವಿಧ ಪಕ್ಷದ ಅಭ್ಯರ್ಥಿಗಳು ಹಾಗೂ ಮುಖಂಡರು ಸಭೆ ಸಮಾರಂಭಗಳಿಗೆ ಸುವಿಧ ಆ್ಯಪ್ ಬಳಕೆ ಮಾಡುವ ಮೂಲಕ ಅರ್ಜಿ ಸಲ್ಲಿಸಿದರೆ 48 ಗಂಟೆಯ ಒಳಗೆ ಅನುಮತಿ ಸಿಗಲಿದೆ ಎಂದು ಸಹಾಯಕ ಚುನಾವಣಾಧಿಕಾರಿ ಮಲ್ಲಿಕಾರ್ಜುನ್ ತಿಳಿಸಿದರು.

ಪಟ್ಟಣದ ಪಶು ವೈದ್ಯಕೀಯ ಆಸ್ಪತ್ರೆ ಆವರಣದಲ್ಲಿ ತೆರೆಯಲಾಗಿರುವ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಚಾಮರಾಜನಗರ ಮೀಸಲು ಲೋಕಸಭಾ ಚುನಾವಣೆ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಿಂದ ಚುನಾವಣಾ ಆಯೋಗ ರಾಜಕೀಯ ಪಕ್ಷದವರಿಗೆ ಅಲೆದಾಟ ತಪ್ಪಿಸಲು ಸುವಿಧ ಆಪ್ ಮೂಲಕ ಪಕ್ಷದ ಕಾರ್ಯಕ್ರಮಗಳಿಗೆ ಅನುಮತಿ ಪಡೆಯಲು ಅನುಕೂಲ ಕಲ್ಪಿಸಿಕೊಟ್ಟಿದೆ ಎಂದರು.ರಾಜಕೀಯ ಪಕ್ಷದ ಅಭ್ಯರ್ಥಿಗಳು ಹಾಗೂ ಮುಖಂಡರು ತಮ್ಮ ಮೊಬೈಲ್ ಬಳಕೆ ಮಾಡಿಕೊಂಡು ಗೂಗಲ್ ನಲ್ಲಿ suvidha.eci.gov.in ಆಪ್ ನಲ್ಲಿ ತಮ್ಮ ಮೊಬೈಲ್ ನಂಬರ್ ನಮೂದಿಸಿದರೆ ಸಂಪೂರ್ಣ ಮಾಹಿತಿ ಸಿಗಲಿದೆ. ಆದ್ದರಿಂದ ರಾಜಕೀಯ ಮುಖಂಡರು ಚುನಾವಣಾ ಆಯೋಗ ಜಾರಿಗೆ ತಂದಿರುವ ಈ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ತಿಳಿಸಿದರು.

ತಹಸೀಲ್ದಾರ್ ಗುರುಪ್ರಸಾದ್ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಅಕ್ರಮ ತಡೆಗಟ್ಟಲು ಚುನಾವಣಾ ಆಯೋಗ cvijil ಎಂಬ ಪಬ್ಲಿಕ್ ಆ್ಯಪ್ ಬಿಡುಗಡೆ ಮಾಡಿದ್ದು ಸಾರ್ವಜನಿಕರು ಈ ಆ್ಯಪ್‌ಅನ್ನು ಡೌನ್ಲೋಡ್ ಮಾಡಿಕೊಂಡು ತಮ್ಮ ವ್ಯಾಪ್ತಿಯಲ್ಲಿ ಮತದಾರರಿಗೆ ಆಮಿಷ ಒಡ್ಡುವುದು, ಅಕ್ರಮ ಹಣ ಸಾಗಾಟ, ಪೋಸ್ಟರ್ ಅಂಟಿಸುವುದು ಸೇರಿದಂತೆ ಚುನಾವಣಾ ಅಕ್ರಮ ಸೇರಿದಂತೆ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದರೆ ಈ ಆಪ್ ಮೂಲಕ ದೂರು ಸಲ್ಲಿಸಿದರೆ ನೇರವಾಗಿ ಜಿಲ್ಲಾ ಚುನಾವಣಾ ಅಧಿಕಾರಿಗಳ ಕಚೇರಿಯ ಸಿಬ್ಬಂದಿ ಸಂಬಂಧಪಟ್ಟ ಚುನಾವಣಾ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಉಪತಹಸೀಲ್ದಾರ್ ರಂಜಿತ್ ಹಾಜರಿದ್ದರು.

Share this article