ಕೃಷಿಗೆ ಕೆರೆ ಮಣ್ಣು ಬಳಕೆಗೆ ಅನುಮತಿ ಕಡ್ಡಾಯ

KannadaprabhaNewsNetwork |  
Published : Feb 12, 2026, 02:30 AM IST
ಚಿತ್ರದುರ್ಗ ಪೋಟೋ ಸುದ್ದಿ22   | Kannada Prabha

ಸಾರಾಂಶ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಗಣಿ ಟಾಸ್ಕ್ ಪೋರ್ಸ್ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳ ಅಭಿವೃದ್ಧಿಗಾಗಿ ರೈತರು ಕೆರೆಯ ಹೂಳು ಅಥವಾ ಮಣ್ಣನ್ನು ಬಳಸಿಕೊಳ್ಳಲು ಸಂಬಂಧ ಪಟ್ಟವರಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಈ ಕುರಿತು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಜರುಗಿದ ಗಣಿಗಾರಿಕೆ ಸಂಬಂಧಿಸಿದ ಜಿಲ್ಲಾ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ಮಾತನಾಡಿದ ಅವರು, ರೈತರು ತಮ್ಮ ಜಮೀನಿನ ಕೃಷಿ ಉದ್ದೇಶಕ್ಕಾಗಿ ಮಣ್ಣು ಪಡೆಯುವ ಮೊದಲು ಕೆರೆಯ ಮಾಲೀಕತ್ವ ಹೊಂದಿರುವ ಸಣ್ಣ ನೀರಾವರಿ ಇಲಾಖೆ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಅಥವಾ ಗ್ರಾಮ ಪಂಚಾಯತಿಯಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು. ಅನುಮತಿ ಕೋರುವಾಗ ರೈತರು ತಮ್ಮ ಜಮೀನಿನ ಪಹಣಿ ಮತ್ತು ಕೃಷಿ ಚಟುವಟಿಕೆಯ ಉದ್ದೇಶವನ್ನು ಸ್ಪಷ್ಟವಾಗಿ ನಮೂದಿಸಬೇಕು. ಕೃಷಿ ಉದ್ದೇಶಕ್ಕಾಗಿ ಕೇವಲ ಟ್ರಾಕ್ಟರ್‌ಗಳ ಮೂಲಕ ಮಾತ್ರ ಮಣ್ಣು ಸಾಗಿಸಲು ಅವಕಾಶವಿದೆ. ಯಾವುದೇ ಕಾರಣಕ್ಕೂ ಟ್ರಕ್ ಅಥವಾ ಲಾರಿಗಳನ್ನು ಬಳಸುವಂತಿಲ್ಲ. ಮಣ್ಣು ತೆಗೆಯುವಾಗ ಕೆರೆಯ ಒಳಭಾಗದಲ್ಲಿ ಒಂದು ಮೀಟರ್‌ಗಿಂತ ಹೆಚ್ಚು ಆಳಕ್ಕೆ ಗುಂಡಿ ತೋಡುವಂತಿಲ್ಲ. ಕೆರೆಗಳ ಸಂರಕ್ಷಣೆ ದೃಷ್ಟಿಯಿಂದ ಇದು ಕೆರೆಯ ಮೂಲ ವಿನ್ಯಾಸಕ್ಕೆ ಧಕ್ಕೆ ತರದಂತೆ ಇರಬೇಕು ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

ಭೀಮ ಸಮುದ್ರ, ಬೊಮ್ಮೇನಹಳ್ಳಿ ಸೇರಿದಂತೆ ಗಣಿಲಾರಿಗಳು ಸಾಗುವ ಗ್ರಾಮಸ್ಥರು ಅಧಿರು ಸಾಗಟದಿಂದ ತೊಂದರೆಯಾಗುತ್ತಿದೆ ಎಂದು ದೂರಿದ್ದಾರೆ. ಗಣಿಲಾರಿಗಳು ನಿಗದಿತ ತೂಕಕ್ಕಿಂತ ಹೆಚ್ಚು ಅಧಿರು ಸಾಗಾಟ ಮಾಡುತ್ತಿವೆ. ಅದಿರನ ಮೇಲೆ ನೀರು ಸಿಂಪಡಿಸುವುದಿಲ್ಲ. ತಾಡಪಲ್ ಮುಚ್ಚುವುದಿಲ್ಲ. ಗಣಿ ಧೂಳು ಕೃಷಿ ಬೆಳೆಗಳ ಮೇಲೆ ಬಿದ್ದು ಬೆಳೆ ನಾಶವಾಗುತ್ತಿದೆ. ಇದಕ್ಕೆ ಕಡಿವಾಣ ಹಾಕುವಂತೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದಾರೆ. ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಹೆಚ್ಚುವರಿಯಾಗಿ ಗಣಿ ಅಧಿರು ಸಾಗಾಟ ಮಾಡುವ ಹಾಗೂ ನಿಯಮ ಪಾಲಿಸದ ಲಾರಿಗಳ ವಿರುದ್ದ ಕಾರ್ಯಾಚರಣೆ ನಡೆಸಬೇಕು. ಗಣಿ ಬಾಧಿತ ಪ್ರದೇಶದಲ್ಲಿ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಶಾಲೆ, ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆರ್‌ಓ ಘಟಕಗಳನ್ನು ಅಭಿವೃದ್ಧಿ ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ಜಿಪಂಸಿಇಓ ಡಾ.ಆಕಾಶ್,ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಮಹೇಶ್,ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿ ಕಾಳೆ ಸಿಂಘೇ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾನಗಲ್ಲದಲ್ಲಿ ಕುಡಿವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತೆ
ಚಿರತೆ ದಾಳಿಗೆ ಎರಡು ಕರುಗಳ ಬಲಿ