ಮಡಿಕೇರಿ: ಗುಂಡು ಹಾರಿಸಿಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಶುಕ್ರವಾರ ನಡೆದಿದೆ.
ಆರ್ಥಿಕ ಮುಗ್ಗಟ್ಟು ಹಾಗೂ ಮೈಕ್ರೋ ಫೈನಾನ್ಸ್‌ನವರ ಹಾವಳಿಯಿಂದ ಬೇಸತ್ತು ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್‌ನಲ್ಲಿ ಬರೆಯಲಾಗಿದೆ. ಘಟನಾ ಸ್ಥಳಕ್ಕೆ ಮಡಿಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.---------------------------
ಅಪರಿಚಿತ ವೃದ್ಧ ಸಾವುಗೋಣಿಕೊಪ್ಪ : ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಅಪರಿಚಿತ ವೃದ್ಧ ಶುಕ್ರವಾರ ಸಾವಿಗೀಡಾಗಿದ್ದು, ವಾರಸುದಾರರು ಗೋಣಿಕೊಪ್ಪ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ.ಸುಮಾರು 70 ವರ್ಷ ಇರಬಹುದು ಎಂದು ಅಂದಾಜಿಸಲಾಗಿದೆ. ಗೋಣಿಕೊಪ್ಪ ಶವಗಾರದಲ್ಲಿ ಇರಿಸಲಾಗಿದೆ.ಅತ್ತೂರು ಗ್ರಾಮದ ಕರ್ನಲ್ ಮುತ್ತಣ್ಣ ಅವರ ತೋಟದಲ್ಲಿ ನಿತ್ರಾಣಗೊಂಡು ಬಿದ್ದಿದ್ದ ಇವರನ್ನು ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿಲಾಗಿತ್ತು. ಮಾಹಿತಿ ಇರುವವರು ಗೋಣಿಕೊಪ್ಪ ಪೊಲೀಸ್ ಠಾಣೆಗೆ 08274247333 ಸಂಪರ್ಕಿಸಬಹುದಾಗಿದೆ.