ಬಳ್ಳಾರಿ: ಇಂದಿನ ತಂತ್ರಜ್ಞಾನ ಯುಗದಲ್ಲಿ ವೈಯಕ್ತಿಕ ಮಾಹಿತಿಯನ್ನು ಸಂರಕ್ಷಿಸಿಕೊಳ್ಳುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಇಂಗ್ಲೀಷ್ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ರಾಬರ್ಟ್ ಜೋಸ್ ಹೇಳಿದರು.
ಎಐ ತಂತ್ರಜ್ಞಾನದ ಮೂಲಕ ಅನೇಕ ತೊಂದರೆ ಅನುಭವಿಸುವ ಪರಿಸ್ಥಿತಿ ಮಾನವನಿಗೆ ಎದುರಾಗಿದೆ. ಸ್ತ್ರೀ ಸಮಾನತೆಯಿಂದ ಇಂದು ಮಹಿಳೆಯರು ಹಲವಾರು ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ. ಪ್ರಸ್ತುತವಾಗಿ ಪುರುಷ ಕ್ರಾಂತಿ ಆಗಬೇಕಿದೆ ಎಂದು ಅಭಿಪ್ರಾಯಪಟ್ಟರು.
ವಿವಿಯ ರಸಾಯನಶಾಸ್ತç ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ಅರುಣ್ ಕುಮಾರ ಲಗಶೆಟ್ಟಿ ಅವರು ಮಾತನಾಡಿ, ದೇಶದಲ್ಲಿ ಮಹಿಳಾ ಕಾನೂನುಗಳು ಬಲಿಷ್ಠವಾಗಿದ್ದು, ಸಮಾಜದಲ್ಲಿ ಮಹಿಳೆಯರನ್ನು ಗೌರವಿಸುವ ಮನೋಭಾವನೆ ಬೆಳೆಸಿಕೊಳ್ಳುವ ಅಗತ್ಯತೆ ಇದೆ ಎಂದು ಹೇಳಿದರು.ಕಾರ್ಯಕ್ರಮದ ಸಂಯೋಜಕರು ಮತ್ತು ಐಸಿಸಿ ನಿರ್ದೇಶಕರಾದ ಪ್ರೊ.ಗೌರಿ ಮಾಣಿಕ್ ಮಾನಸ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕುರಿತು ಪ್ರಮಾಣವಚನವನ್ನು ಪ್ರೊ.ಮೇಧಾವಿನಿ ಕಟ್ಟಿ ಅವರು ಬೋಧಿಸಿದರು.
ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯಲ್ಲಿ ಆಯೋಜಿಸಿದ್ದ ಚರ್ಚಾಸ್ಫರ್ಧೆ ಕಾರ್ಯಕ್ರಮವನ್ನು ಇಂಗ್ಲೀಷ್ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ರಾಬರ್ಟ್ ಜೋಸ್ ಉದ್ಘಾಟಿಸಿದರು.