ಕನ್ನಡಪ್ರಭ ವಾರ್ತೆ ನಾಲತವಾಡ
ಸ್ಥಳೀಯ ಶಾಸಕರ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ನಾಲತವಾಡ ಹೋಬಳಿ ಮಟ್ಟದ ಜನಸೇವಾ ಆಂದೋಲನ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ಗ್ರಾಮ ಪಂಚಾಯತಿಯಲ್ಲಿ ಯುವಕರ ಸಂಘ ರಚಿಸಿ ಯುವಜನರ ಪ್ರತಿಭೆ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಸರ್ಕಾರದಿಂದ ವರ್ಷಕ್ಕೆ ₹10 ಲಕ್ಷ ಅನುದಾನ ನೀಡುವ ಯೋಜನೆ ರೂಪಿಸಲಾಗಿದೆ. ಯುವಕರು ಈ ಅನುದಾನವನ್ನು ಬಳಸಿಕೊಂಡು ವಿವಿಧ ಕಾರ್ಯಕ್ರಮ ಹಾಗೂ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.ಸಮಸ್ಯೆ ಹೊತ್ತು ಕಚೇರಿಯಿಂದ ಕಚೇರಿಗೆ ಅಲೆದಾಡುವ ಬದಲು, ಜನರ ಬಳಿಗೆ ಸರ್ಕಾರವೇ ಬಂದು ಅಹವಾಲು ಸ್ವೀಕರಿಸಿ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜನಸೇವಾ ಆಂದೋಲನ ಕಾರ್ಯಕ್ರಮ ರೂಪಿಸಲಾಗಿದೆ. ಒಂದೇ ವೇದಿಕೆಯಲ್ಲಿ ಎಲ್ಲ ಇಲಾಖೆಗಳ ಅರ್ಜಿಗಳನ್ನು ಸ್ವೀಕರಿಸಿ ಪರಿಹಾರ ಕಲ್ಪಿಸಲಾಗುತ್ತಿದೆ. ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು ಎಂದರು.ಮುಖ್ಯಮಂತ್ರಿಗಳು ಪ್ರತಿ ಶನಿವಾರ ಜನಸೇವಾ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸೂಚಿಸಿದ್ದಾರೆ. ಹೋಬಳಿ ಮಟ್ಟದ ಕಾರ್ಯಕ್ರಮ ಪೂರ್ಣಗೊಂಡ ಬಳಿಕ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿಯೂ ಕಾರ್ಯಕ್ರಮ ನಡೆಸಿ, ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯ ಮಾಡಲಾಗುವುದು ಎಂದು ಭರವಸೆ ನೀಡಿದರು.ಗ್ಯಾರಂಟಿ ಯೋಜನೆ ಸ್ಥಗಿತಗೊಂಡವರಿಗೆ ಪರಿಹಾರ:
ಎಸ್‌ಐಆರ್ ಪರಿಷ್ಕರಣೆ ಸಂದರ್ಭದಲ್ಲಿ ಕೆಲ ಮತದಾರರ ಹೆಸರುಗಳು ಪಟ್ಟಿಯಿಂದ ಕೈಬಿಟ್ಟಿರುವುದರಿಂದ ಕೆಲವು ಕುಟುಂಬಗಳಿಗೆ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಂಡಿವೆ. ಅಂತಹವರು ನಮೂನೆ-7 ಸಲ್ಲಿಸಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಸಿಕೊಂಡರೇ ನಿಯಮಾನುಸಾರ ಸ್ಥಗಿತಗೊಂಡಿರುವ ಗ್ಯಾರಂಟಿ ಯೋಜನೆಗಳನ್ನು ಪುನಃ ಪಡೆಯಲು ಅವಕಾಶವಿದೆ ಎಂದರು.ಜನಸೇವಾ ಆಂದೋಲನದಲ್ಲಿ ಚಿಮ್ಮಲಗಿ ಏತ ನೀರಾವರಿ ಯೋಜನೆಯ ಕಾಲುವೆ ಸಮಸ್ಯೆ ರೈತರ ಆಕ್ರೋಶಕ್ಕೆ ಕಾರಣವಾಯಿತು. ಕಾಲುವೆ ನಿರ್ಮಾಣಕ್ಕಾಗಿ ಜಮೀನು ಅಗೆದರೂ 13 ವರ್ಷ ಕಳೆದರೂ ರೈತರಿಗೆ ಪರಿಹಾರ ನೀಡಿಲ್ಲ. ಕಾಲುವೆಗೆ ನೀರೂ ಹರಿಯುತ್ತಿಲ್ಲ ಎಂದು ರೈತರು ಶಾಸಕರ ಮುಂದೆ ಅಳಲು ತೋಡಿಕೊಂಡರು.ಸಮಸ್ಯೆ ಹಲವು ವರ್ಷಗಳಿಂದ ಬಾಕಿ ಉಳಿದಿರುವುದನ್ನು ಒಪ್ಪಿಕೊಂಡ ಶಾಸಕ ನಾಡಗೌಡರು, ಶೀಘ್ರದಲ್ಲೇ ವಿಶೇಷ ಸಭೆ ಕರೆಯುತ್ತೇನೆ. ಕೆಬಿಜೆಎನ್‌ಎಲ್‌ನ ಎಲ್ಲ ಸಂಬಂಧಿಸಿದ ಅಧಿಕಾರಿಗಳನ್ನು ಕರೆಸಿ ರೈತರ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.ಗುತ್ತಿಗೆದಾರನ ವಿರುದ್ಧ ಕ್ರಮಕ್ಕೆ ಸೂಚನೆ:
ತಹಸೀಲ್ದಾರ್ ಎ.ಡಿ.ಅಮರಾವದಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂ.ಎಂ.ಬೆಳಗಲ್ ನಿರೂಪಿಸಿದರು.ಈ ವೇಳೆ ವಿಜಯಪುರ ಉಪವಿಭಾಗಾಧಿಕಾರಿ ಜುಫಿಶಾನ್ ಹಕ್, ಪಟ್ಟಣ ಪಂಚಾಯತಿ ಅಧ್ಯಕ್ಷೆ ಲಲಿತಾ ಗೊರಬಾಳ, ಉಪಾಧ್ಯಕ್ಷ ಬಸವರಾಜ ಗಂಗನಗೌಡರ, ಸಿಪಿಐ ಫಸಿವುದ್ದಿನ್, ಮುಖಂಡರಾದ ನಾನಾಸಾಹೇಬ್ ದೇಶಮುಖ, ಶಂಕರರಾವ ದೇಶಮುಖ, ಗುರುಪ್ರಸಾದ ದೇಶಮುಖ, ಎ.ಜಿ.ಗಂಗನಗೌಡರ, ಶಿವಪ್ಪ ತಾತರೆಡ್ಡಿ, ಪಟ್ಟಣ ಪಂಚಾಯತಿ ಸದಸ್ಯರಾದ ಶರಣಬಸ್ಸು ಗಂಗನಗೌಡರ, ಅಮರೇಶ ಸೀರಿ, ರಮೇಶ ಆಲಕೊಪ್ಪರ, ಬಾಬು ಕ್ಷತ್ರಿ, ತಾಪಂ ಇಒ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.