ಯೋಗದಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಈರಯ್ಯ ದೂಂತೂರು

KannadaprabhaNewsNetwork |  
Published : Jun 30, 2026, 03:00 AM IST
ಫೋಟೋ: ೨೮ಪಿಟಿಆರ್-ಯೋಗಮುಕ್ಕೂರು ಶಾಲೆಯಲ್ಲಿ ನಡೆದ ಉಚಿತ ಯೋಗ ತರಬೇತಿ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. | Kannada Prabha

ಸಾರಾಂಶ

ಧ್ಯಾನವು ಮನಸ್ಸಿಗೆ, ಯೋಗವು ದೇಹಕ್ಕೆ ಸಂಬಂಧಿಸಿದ ವಿಚಾರವಾಗಿದ್ದು, ಮನಸ್ಸು ಮತ್ತು ದೇಹ ಎರಡೂ ಸಮತೋಲನದಲ್ಲಿ ಇದ್ದಾಗ ಮಾತ್ರ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ಬೆಳ್ಳಾರೆ ಠಾಣೆಯ ಪೊಲೀಸ್ ಉಪನಿರೀಕ್ಷಕ ಈರಯ್ಯ ದೂಂತೂರು ಹೇಳಿದರು.

ಪುತ್ತೂರು: ಧ್ಯಾನವು ಮನಸ್ಸಿಗೆ, ಯೋಗವು ದೇಹಕ್ಕೆ ಸಂಬಂಧಿಸಿದ ವಿಚಾರವಾಗಿದ್ದು, ಮನಸ್ಸು ಮತ್ತು ದೇಹ ಎರಡೂ ಸಮತೋಲನದಲ್ಲಿ ಇದ್ದಾಗ ಮಾತ್ರ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ಬೆಳ್ಳಾರೆ ಠಾಣೆಯ ಪೊಲೀಸ್ ಉಪನಿರೀಕ್ಷಕ ಈರಯ್ಯ ದೂಂತೂರು ಹೇಳಿದರು.

ಭಾನುವಾರ ಮುಕ್ಕೂರು ನೇಸರ ಯುವಕ ಮಂಡಲ ಹಾಗೂ ನೇಸರ ಯುವತಿ ಮಂಡಲ ಆಶ್ರಯದಲ್ಲಿ ಮುಕ್ಕೂರು ಶಾಲಾ ವಠಾರದಲ್ಲಿ ಒಂದು ವಾರ ಕಾಲ ನಡೆದ ಉಚಿತ ಯೋಗ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಬೆಳ್ಳಾರೆ ಪತಂಜಲಿ ಯೋಗ ಶಿಕ್ಷಣ ಕೇಂದ್ರದ ಯೋಗ ಶಿಕ್ಷಕ ಕೆ. ಗಣಪಯ್ಯ ವನಶ್ರೀ ಮಾತನಾಡಿ ಯೋಗವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಮಾನವರು ಮಾಧವರಾಗುತ್ತಾರೆ. ಯೋಗದಿಂದ ಜೀವನ ಪ್ರಕಾಶಮಾನವಾಗುತ್ತದೆ. ಪ್ರತಿಯೊಬ್ಬರೂ ನಿರಂತರವಾಗಿ ಯೋಗಾಭ್ಯಾಸ ನಡೆಸಬೇಕು ಎಂದರು.ಅಧ್ಯಕ್ಷತೆ ವಹಿಸಿದ್ದ ಮುಕ್ಕೂರು ನೇಸರ ದಶಪ್ರಣತಿ ಸಮಿತಿ-೨೦೨೬ರ ಅಧ್ಯಕ್ಷ ಡಾ. ನರಸಿಂಹ ಶರ್ಮ ಕಾನಾವು ಮಾತನಾಡಿ, ಯೋಗವು ದೇಹ ಮತ್ತು ಮನಸ್ಸನ್ನು ಸಮತೋಲನಗೊಳಿಸುವ ಜೀವನ ಪದ್ಧತಿಯಾಗಿದ್ದು, ಶಿಬಿರ ಮುಕ್ತಾಯಗೊಂಡರೂ ಇಲ್ಲಿ ಕಲಿತ ಯೋಗಾಸನ ಹಾಗೂ ಪ್ರಾಣಾಯಾಮವನ್ನು ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದ ಭಾಗವಾಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ನೇಸರ ಯುವಕ ಮಂಡಲದ ಗೌರವಾಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಹಾಗೂ ನೇಸರ ದಶಪ್ರಣತಿ ಸಮಿತಿ-೨೦೨೬ರ ಸಂಚಾಲಕ ಕುಂಬ್ರ ದಯಾಕರ ಆಳ್ವ ಮಾತನಾಡಿದರು.ಒಂದು ವಾರ ಕಾಲ ಶಿಬಿರಾರ್ಥಿಗಳಿಗೆ ಯೋಗ ತರಬೇತಿ ನೀಡಿದ ಯೋಗ ಶಿಕ್ಷಕ ಕೆ. ಗಣಪಯ್ಯ ವನಶ್ರೀ ಅವರನ್ನು ನೇಸರ ಸಂಸ್ಥೆಯ ವತಿಯಿಂದ ಸಮ್ಮಾನಿಸಲಾಯಿತು. ಶಿಬಿರಾರ್ಥಿಗಳಾದ ಶ್ರೀಧರ ಗೌಡ ಕೊಂಡೆಪ್ಪಾಡಿ ಹಾಗೂ ಜಯಂತ ಕುಂಡಡ್ಕ ಅನಿಸಿಕೆ ವ್ಯಕ್ತಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾನೂನು ವಿದ್ಯಾರ್ಥಿಗಳಿಗೆ ಅಣಕು ನ್ಯಾಯಾಲಯ ಪ್ರಾತ್ಯಕ್ಷಿಕೆ
ಕಾರಹುಣ್ಣಿವೆ ಪ್ರಯುಕ್ತ ಆಲದ ಮರಕ್ಕೆ ವಿಶೇಷ ಪೂಜೆ