ಸೌಲಭ್ಯಗಳ ಸದುಪಯೋಗಕ್ಕೆ ವಿಕಲಚೇತನರು ಮುಂದಾಗಲಿ: ಸಚಿವ ಕೆ.ಎಸ್.ಬಸವಂತಪ್ಪ

KannadaprabhaNewsNetwork |  
Published : Nov 09, 2026, 01:45 AM IST
ಕ್ಯಾಪ್ಷನ8ಕೆಡಿವಿಜಿ41 ಮಾಯಕೊಂಡ ವಿಧಾನಸಭಾ ಕ್ಷೇತ್ರದ  ಅರ್ಹ ವಿಕಲಚೇತನ ಫಲಾನುಭವಿಗಳಿಗೆ ಸಚಿವ ಕೆ.ಎಸ್‌.ಬಸವಂತಪ್ಪ ಯಂತ್ರಚಾಲಿತ ವಾಹನಗಳನ್ನು ವಿತರಿಸಿ ಮಾತನಾಡಿದರು. | Kannada Prabha

ಸಾರಾಂಶ

ಮಾಯಕೊಂಡ ಕ್ಷೇತ್ರದ ಅರ್ಹ ವಿಕಲಚೇತನ ಫಲಾನುಭವಿಗಳಿಗೆ ಸಚಿವ ಕೆ.ಎಸ್‌.ಬಸವಂತಪ್ಪ ಯಂತ್ರಚಾಲಿತ ವಾಹನಗಳನ್ನು ವಿತರಿಸಿದರು.

ದಾವಣಗೆರೆ: ವಿಕಲಚೇತನರ ಕಲ್ಯಾಣಕ್ಕಾಗಿ ಸರ್ಕಾರ ಹಲವು ಯೋಜನೆ ಹಾಗೂ ಸೌಲಭ್ಯಗಳನ್ನು ಜಾರಿಗೊಳಿಸಿದ್ದು, ಅರ್ಹ ಫಲಾನುಭವಿಗಳು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಸರ್ಕಾರ ನೀಡುವ ಸೌಲಭ್ಯಗಳನ್ನು ದುರುಪಯೋಗ ಮಾಡಿಕೊಳ್ಳದೇ, ಸದ್ಬಳಕೆಗೆ ಮುಂದಾಗಲಿ ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಹೇಳಿದರು.

ನಗರದ ಹಳೇ ಪ್ರವಾಸಿ ಮಂದಿರದಲ್ಲಿ ಭಾನುವಾರ 2024-25ನೇ ಸಾಲಿನ ಜಿಲ್ಲಾ ವಿಕಲಚೇತನರ ಕಲ್ಯಾಣ ಇಲಾಖೆಯ ವತಿಯಿಂದ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಆರು ಅರ್ಹ ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ವಾಹನಗಳನ್ನು ವಿತರಿಸಿ ಅವರು ಮಾತನಾಡಿದರು.

ವಿಕಲಚೇತನರು ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗುವಂತೆ ಸರ್ಕಾರ ವಿವಿಧ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಿದೆ. ವಿಶೇಷವಾಗಿ ಸಂಚಾರದ ಅನುಕೂಲ ಕಲ್ಪಿಸುವ ಉದ್ದೇಶದಿಂದ ಯಂತ್ರಚಾಲಿತ ವಾಹನಗಳನ್ನು ವಿತರಿಸಲಾಗುತ್ತಿದೆ. ಇಂತಹ ಸೌಲಭ್ಯಗಳು ವಿಕಲಚೇತನರ ದೈನಂದಿನ ಚಟುವಟಿಕೆಗಳಿಗೆ ನೆರವಾಗುವುದರ ಜತೆಗೆ ಶಿಕ್ಷಣ, ಉದ್ಯೋಗ ಹಾಗೂ ಸ್ವಾವಲಂಬಿ ಬದುಕಿಗೆ ಪ್ರೇರಣೆ ನೀಡಲಿವೆ ಎಂದರು.

ಸರ್ಕಾರದ ಸೌಲಭ್ಯಗಳು ನಿಜವಾದ ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಸಿಕ್ಕಿರುವ ಸೌಲಭ್ಯಗಳನ್ನು ವೈಯಕ್ತಿಕ ಅಭಿವೃದ್ಧಿ ಹಾಗೂ ಜೀವನಮಟ್ಟ ಸುಧಾರಣೆಗೆ ಬಳಸಿಕೊಳ್ಳಬೇಕು. ಅರ್ಹರು ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ಪಡೆಯಲು, ಸದ್ಬಳಕೆ ಮಾಡಿಕೊಳ್ಳಲು ಪ್ರಯತ್ನಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಲಕ್ಷ್ಮೀ, ದಾವಣಗೆರೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಭೋವಿ, ಚನ್ನಗಿರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಮಾಜಿ ಎಪಿಎಂಸಿ ಅಧ್ಯಕ್ಷ ಅಣಜಿ ಎಸ್.ಕೆ. ಚಂದ್ರಣ್ಣ, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟನ್ ಕಬ್ಬಿಗೆ ₹1,000 ಹೆಚ್ಚುವರಿ ದರ ನಿಗದಿಗೆ ಪಟ್ಟು
ಸಾಯಿಪ್ರಿಯಾ ಸಕ್ಕರೆ ಕಾರ್ಖಾನೆ ತಕ್ಷಣ ಆರಂಭಿಸಿ