ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿಂದು ಬೆಳೆ ವಿಮೆ ಯೋಜನೆ ಅನುಷ್ಠಾನ ಕುರಿತು ಜರುಗಿದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಳೆ ಸಾಲ ಪಡೆದ ರೈತರಿಗೆ ಬೆಳೆ ವಿಮೆ ಕಡ್ಡಾಯವಾಗಿರುವ ಹಿನ್ನಲೆಯಲ್ಲಿ ಯಾವುದೇ ಅರ್ಹ ರೈತರು ವಿಮೆಯಿಂದ ವಂಚಿತರಾಗದಂತೆ ಬ್ಯಾಂಕುಗಳು, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.
ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳು ನೀಡಿದ ಬೆಳೆಸಾಲ ಪಡೆದ ರೈತರನ್ನು ವಿಮೆ ವ್ಯಾಪ್ತಿಗೆ ಒಳಪಡಿಸುವ ಕಾರ್ಯವಾಗಬೇಕು. ಕಳೆದ ಸಾಲಿನ ಹಂಗಾಮಿನಲ್ಲಿ 22 ಸಾವಿರಕ್ಕೂ ಹೆಚ್ಚು ರೈತರು ಬೆಳೆ ವಿಮೆಗೆ ಒಳಪಡಿಸಿದ್ದರು. ಈ ಹಂಗಾಮಿನಲ್ಲಿ ಅದಕ್ಕೂ ಹೆಚ್ಚು ವಿಮೆಗೆ ನೋಂದಣಿಗೆ ಕ್ರಮವಹಿಸಲು ಸೂಕ್ತ ನಿರ್ದೇಶನ ನೀಡಿದರು. ಪ್ರತಿಯೊಂದು ಬ್ಯಾಂಕ್ಗಳು ಸಾಲ ಪಡೆದಿರುವ ರೈತರನ್ನು ಮನವೊಲಿಸಿ ಬೆಳೆವಿಮೆ ನೋಂದಣಿಗೆ ಕ್ರಮವಹಿಸಲು ತಿಳಿಸಿದರು. ಈ ಬಗ್ಗೆ ಪ್ರತಿದಿನ ಪ್ರಗತಿಯ ಬಗ್ಗೆ ಗಮನ ಹರಿಸಲಾಗುವುದೆಂದು ತಿಳಿಸಿದರು.ಕೃಷಿ ಜಂಟಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಮಾತನಾಡಿ, ಹೆಸರು, ಸೋಯಾ ಅವರೆ ಹಾಗೂ ಉದ್ದು ಬೆಳೆಗೆ ವಿಮೆ ಕಂತು ಪಾವತಿಗೆ ಜುಲೈ 15 ಕೊನೆಯ ದಿನವಾದರೆ, ಅರಿಶಿಣ, ಸೂರ್ಯಕಾಂತಿ, ಸಜ್ಜೆ, ಮುಸುಕಿನ ಜೋಳ, ಜೋಳ, ತೊಗರಿ, ಶೇಂಗಾ, ಎಳ್ಳು (ಮ.ಆ), ಕೆಂಪು ಮೆಣಸಿನಕಾಯಿ, ಮುಸುಕಿನ ಜೋಳ, ಸಜ್ಜೆ, ತೊಗರಿ, ಶೇಂಗಾ (ನೀರಾವರಿ) ಬೆಳೆಗಳಿಗೆ ಜುಲೈ 31 ಹಾಗೂ ಸೂರ್ಯಕಾಂತಿ, ಈರುಳ್ಳಿ (ನೀರಾವರಿ), ಈರುಳ್ಳಿ, ಕೆಂಪು ಮೆಣಸಿನಕಾಯಿ (ಮ.ಆ) ಬೆಳೆಗಳಿಗೆ ವಿಮೆ ಕಂತು ಪಾವತಿಗೆ ಆಗಸ್ಟ್ 14 ಆಗಿರುತ್ತದೆ ಎಂದರು.
-ಗಜಾನನ ಬಾಲೆ, ಜಿ.ಪಂ ಸಿಇಒ