ಮದ್ದೂರು: ಪಟ್ಟಣಕ್ಕೆ ಹೆಚ್ಚುವರಿ ಸತ್ರ ನ್ಯಾಯಾಲಯ ಮಂಜೂರು ಮಾಡುವಂತೆ ಹೈಕೋರ್ಟಿನ ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್ ಹಾಗೂ ಟಿ.ಜಿ. ಶಿವಶಂಕರೇಗೌಡ ಅವರನ್ನು ಮದ್ದೂರು ವಕೀಲರ ನಿಯೋಗ ಶನಿವಾರ ಭೇಟಿ ಮಾಡಿ ಮನವಿ ಸಲ್ಲಿಸಿತು. ಮದ್ದೂರಿನ ಜೆಎಂಎಫ್‌ಸಿ ನ್ಯಾಯಾಲಯದ ಸಂಕೀರ್ಣದಲ್ಲಿ ಹೆಚ್ಚುವರಿ ಸತ್ರ ನ್ಯಾಯಾಲಯ ಸ್ಥಾಪನೆ ಮಾಡುವುದರಿಂದ ಪ್ರಕರಣದ ವಿಚಾರಣೆಗಾಗಿ ಮಳವಳ್ಳಿ ಮತ್ತು ಮದ್ದೂರು ವಕೀಲರು ಹಾಗೂ ಸಾರ್ವಜನಿಕರು ಮಂಡ್ಯ ನ್ಯಾಯಾಲಯಕ್ಕೆ ಹೋಗಲು ಅನಾನುಕೂಲವಾಗುತ್ತಿದೆ. ಹೀಗಾಗಿ ಮದ್ದೂರಿನಲ್ಲಿ ಸತ್ರ ನ್ಯಾಯಾಲಯ ತೆರೆಯುವುದರಿಂದ ಹೆಚ್ಚಿನ ಅನುಕೂಲವಾಗುತ್ತದೆ ಎಂದು ವಕೀಲರ ನಿಯೋಗ ನ್ಯಾಯಮೂರ್ತಿಗಳಿಗೆ ಮನವರಿಕೆ ಮಾಡಿಕೊಟ್ಟಿತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ನ್ಯಾಯಮೂರ್ತಿಗಳು ಮಳವಳ್ಳಿ ಮತ್ತು ಸಂಘದೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಆಶ್ವಾಸನೆ ನೀಡಿದರು.
ಮದ್ದೂರು ಪಟ್ಟಣಕ್ಕೆ ಹೆಚ್ಚುವರಿ ಸತ್ರ ನ್ಯಾಯಾಲಯ ಮಂಜೂರು ಮಾಡುವಂತೆ ಹೈಕೋರ್ಟಿನ ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್ ಹಾಗೂ ಟಿ.ಜಿ. ಶಿವಶಂಕರೇಗೌಡ ಅವರನ್ನು ಮದ್ದೂರು ವಕೀಲರ ನಿಯೋಗ ಶನಿವಾರ ಭೇಟಿ ಮಾಡಿ ಮನವಿ ಸಲ್ಲಿಸಿತು.