ಕನ್ನಡಪ್ರಭ ವಾರ್ತೆ ಚಿಂಚೋಳಿ
ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಮುಖಂಡರು ತಮ್ಮ ಸಂಘದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮತ್ತು ೭ನೇ ವೇತನ ಆಯೋಗ ವರದಿ ಜಾರಿಗೆ ಒತ್ತಾಯಿಸಿ ಶಾಸಕ ಡಾ.ಅವಿನಾಶ ಜಾಧವ್‌ಗೆ ಮನವಿ ಸಲ್ಲಿಸಿದರು.ತಾಲೂಕು ಅಧ್ಯಕ್ಷ ದೇವೇಂದ್ರಪ್ಪ ಹೋಳ್ಕರ ಮಾತನಾಡಿ, ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯದ ಎಲ್ಲ ೩೦ ಕಂದಾಯ ಜಿಲ್ಲೆ, ೩ ಶೈಕ್ಷಣಿಕ ಜಿಲ್ಲೆ ಹಾಗೂ ೧೮೩ ತಾಲೂಕುಗಳಲ್ಲಿ ಸಂಘದ ಶಾಖೆಗಳನ್ನು ಹೊಂದಿದೆ. ಸಮಸ್ತ ೬ ಲಕ್ಷ ರಾಜ್ಯ ಸರ್ಕಾರಿ ನೌಕರರನ್ನು ಪ್ರತಿನಿಧಿಸುವ ಏಕೈಕ ಬೃಹತ್ ಸಂಘಟನೆ ಆಗಿದೆ ಎಂದರು. ಸಂಘದ ರಾಷ್ಟ್ರ ಹಾಗೂ ರಾಜ್ಯದಲ್ಲಿ ಸಂಭವಿಸುವ ಪ್ರಕೃತಿ ವಿಕೋಪ ಉತ್ತರ ಕರ್ನಾಟಕ ಪ್ರವಾಹ, ಕೋವಿಡ್ ಸಂಕಷ್ಟದಲ್ಲಿ ಸರ್ಕಾರಕ್ಕೆ ಆರ್ಥಿಕ ಸಹಕಾರ ನೀಡಿ ಸೇವಾ ಕಾರ್ಯ ನಿರ್ವಹಿಸುವ ಮೂಲಕ ದೇಶದಲ್ಲಿಯೇ ಮಾದರಿ ಸಂಘಟನೆಯಾಗಿದೆ. ಆದರೆ, ರಾಜ್ಯದಲ್ಲಿ ೨ ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಆಗಿದ್ದರೂ ಕೂಡ ಸರ್ಕಾರವು ಹುದ್ದೆ ಭರ್ತಿಗೆ ಮುಂದಅಗುತ್ತಿಲ್ಲ. ಸರ್ಕಾರ ಜಾರಿಗೊಳಸುವ ಯೋಜನೆಗಳನ್ನು ಶ್ರೀಸಾಮಾನ್ಯರಿಗೆ ತಲುಪಿಸುವ ಕಾರ್ಯದ ಜೊತೆಗೆ ರಾಜ್ಯದ ಅಭಿವೃದ್ಧಿ ಸೂಚ್ಯಂಕದ ಬೆಳವಣೆಗೆಯಲ್ಲಿ ಹಾಗೂ ಜಿಎಟಿ ತೆರಿಗೆ ಸಂಗ್ರಹಣೆಯಲ್ಲಿ ಇಡೀ ದೇಶಕ್ಕೆ ಮಾದರಿಯಾಗಲು ಸರ್ಕಾರಿ ನೌಕರರ ಪಾತ್ರ ಪ್ರಮುಖವಾಗಿದೆ. ಕಾರಣ ಸರ್ಕಾರವು ೭ನೇ ವೇತನ ಜಾರಿಗೊಳಿಸಬೇಕೆಂದು ಸರ್ಕಾರಕ್ಕೆ ಬೇಡಿಕೆಯ ಮನವಿ ಸಲ್ಲಿಸಿದರು.
ಮಲ್ಲಕಾರ್ಜುನ ಪಾಲಾಮೂರ ಮಾತನಾಡಿ, ಸರ್ಕಾರಿ ಪದ್ಧತಿಯಂತೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು, ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವುದು ಪ್ರಮುಖವಾದ ಬೇಡಿಕೆಗಳನ್ನು ಸರ್ಕಾರ ಜಾರಿಗೊಳಿಸಬೇಕೆಂದು ಮನವಿ ಮಾಡಿದರು.ಸಿದ್ಧಾರೂಢ ಹೊಕ್ಕುಂಡಿ, ಖುರ್ಷಿದಮಿಯಾ, ಸುರೇಶ ಕೊರವಿ, ನಿಲೂರಕರ ಕಿಶನ, ಶಾಂತುರೆಡ್ಡಿ, ಭಾಗಪ್ಪಗೌಡಪ್ಪ, ಶ್ರೀಕಾಂತ ಜಾಧವ್ ಇನ್ನಿತರ ಇಲಾಖೆ ನೌಕರರು ಇದ್ದರು.