ಪ್ರಾಥಮಿಕ ಶಾಲಾ ಶಿಕ್ಷಕರಿಗಾದ ಅನ್ಯಾಯ ಸರಿಪಡಿಸಲು ಆಗ್ರಹ

KannadaprabhaNewsNetwork |  
Published : Aug 06, 2024, 12:34 AM IST
ಫೋಟೋ : ೫ಎಚ್‌ಎನ್‌ಎಲ್೪ | Kannada Prabha

ಸಾರಾಂಶ

ಹೊಸ ವೃಂದ ನೇಮಕಾತಿಯಿಂದ ಪ್ರಾಥಮಿಕ ಶಾಲಾ ಶಿಕ್ಷಕರಿಗಾದ ಅನ್ಯಾಯ ಸರಿಪಡಿಸಬೇಕು, ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಠತೆ ಮೇಲೆ ಬಡ್ತಿ ನೀಡಬೇಕು, ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಅರ್ಹತೆ ಆಧಾರದ ಮೇಲೆ ಪ್ರೌಢಶಾಲೆಗೆ ಬಡ್ತಿ ನೀಡಬೇಕು ಎಂಬ ಬೇಡಿಕೆ ಈಡೇರಿಕೆಗಾಗಿ ಹಾನಗಲ್ಲ ತಹಸೀಲ್ದಾರ್‌ ಮೂಲಕ ಮುಖ್ಯ ಮಂತ್ರಿಗಳಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮನವಿ ಸಲ್ಲಿಸಿತು.

ಹಾನಗಲ್ಲ:ಹೊಸ ವೃಂದ ನೇಮಕಾತಿಯಿಂದ ಪ್ರಾಥಮಿಕ ಶಾಲಾ ಶಿಕ್ಷಕರಿಗಾದ ಅನ್ಯಾಯ ಸರಿಪಡಿಸಬೇಕು, ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಠತೆ ಮೇಲೆ ಬಡ್ತಿ ನೀಡಬೇಕು, ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಅರ್ಹತೆ ಆಧಾರದ ಮೇಲೆ ಪ್ರೌಢಶಾಲೆಗೆ ಬಡ್ತಿ ನೀಡಬೇಕು ಎಂಬ ಬೇಡಿಕೆ ಈಡೇರಿಕೆಗಾಗಿ ಹಾನಗಲ್ಲ ತಹಸೀಲ್ದಾರ್‌ ಮೂಲಕ ಮುಖ್ಯ ಮಂತ್ರಿಗಳಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮನವಿ ಸಲ್ಲಿಸಿತು.ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಅಧ್ಯಕ್ಷ ಸಿ.ಜಿ. ಪಾಟೀಲ, ೨೦೧೬ಕ್ಕಿಂತ ಮೊದಲು ನೇಮಕಾತಿಯಾದ ಶಿಕ್ಷಕರಿಗೆ ೧ರಿಂದ ೭ ತರಗತಿ ಪಾಠ ಮಾಡುವವರಿಗೆ ಅದೇ ನಿಯಮ ಮುಂದುವರೆಸಬೇಕು. ೨೦೧೭ರ ನಿಯಮ ಅನ್ವಯಿಸಬಾರದು. ಈ ಬಗ್ಗೆ ಹಲವಾರು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ ಸರ್ಕಾರ ಇದನ್ನು ಪರಿಗಣಿಸಿಲ್ಲ. ಆ ಕಾರಣಕ್ಕೆ ರಾಜ್ಯ ಮಟ್ಟದಲ್ಲಿ ಮೊದಲ ಹೋರಾಟವಾಗಿ ಈ ಮನವಿ ಸಲ್ಲಿಸಲಾಗುತ್ತಿದೆ. ಸರಕಾರ ಶೀಘ್ರ ನಮ್ಮ ಬೇಡಿಕೆ ಈಡೇರಿಸದಿದ್ದರೆ ಬೀದಿಗಿಳಿದು ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದರು.ಸಂಘದ ಜಿಲ್ಲಾ ಕಾರ್ಯದರ್ಶಿ ಬಿ.ಎಸ್. ಚಲ್ಲಾಳ, ಜಿಲ್ಲಾ ಉಪಾಧ್ಯಕ್ಷ ಎಂ.ಎಸ್. ಬಡಿಗೇರ, ತಾಲೂಕು ಕಾರ್ಯದರ್ಶಿ ಮಖಬೂಲ ಲಿಂಗದಹಳ್ಳಿ, ವಿಜೇಂದ್ರ ಯತ್ತಿನಹಳ್ಳಿ, ಎಂ.ಎ. ಜಾಗೀರದಾರ, ಅನಿತಾ ಕಿತ್ತೂರ, ಮಹಾಬಳೇಶ್ವರ, ಎಸ್.ಎಂ. ದೊಡ್ಡಮನಿ, ಎಸ್.ಟಿ. ಚಕ್ರಸಾಲಿ, ಸಂಧ್ಯಾ ಭಂಡಾರಿ, ನಿರ್ಮಲಾ ಮತ್ತೂರ, ಸಿರಿನ್ ಗೋಡಿಹಾಳ, ಹರೀಶ ಮಹೇಂದ್ರಕರ, ಜಿ.ಜಿ. ನೂಲ್ವಿ, ಎಂ.ಎ. ಲೋಹಾರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ