ಪ್ರಾಸಿಕ್ಯೂಷನ್ ಅನುಮತಿ ನೀಡದಂತೆ ಒತ್ತಾಯಿಸಿ ಮನವಿ

KannadaprabhaNewsNetwork |  
Published : Aug 04, 2024, 01:17 AM IST
02 ಎಸ್ವಿಆರ್ 2 | Kannada Prabha

ಸಾರಾಂಶ

Petition urging not to grant permission to prosecution

-ಅಹಿಂದ ಸಂಘಟನೆಯ ಪದಾಧಿಕಾರಿಗಳು ತಹಶೀಲ್ದಾರ್ ಭೀಮರಾಯ ಅವರಿಗೆ ಮನವಿ

------

ಕನ್ನಡಪ್ರಭ ವಾರ್ತೆ ಸಿರವಾರ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್‌ ಗೆ ಅನುಮತಿ ನೀಡದಂತೆ ಒತ್ತಾಯಿಸಿ ಅಹಿಂದ ಸಂಘಟನೆಯ ಪದಾಧಿಕಾರಿಗಳು ಗ್ರೇಡ್ -2 ತಹಶೀಲ್ದಾರ್ ಭೀಮರಾಯ ರಾಮಸಮುದ್ರ ಅವರಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ 40 ವರ್ಷಗಳ ಕಾಲ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಆಡಳಿತ ನಡೆಸಿದ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಷಡ್ಯಂತ್ರ ರೂಪಿಸಿವೆ. ಮುಡಾ ಹಗರಣ ಕುರಿತಂತೆ ಮುಖ್ಯಮಂತ್ರಿಗಳು ಸದನದಲ್ಲಿ ದಾಖಲೆಗಳೊಂದಿಗೆ ವಿವರಿಸಿದರು ಕೂಡ ವಿಪಕ್ಷಗಳು ಅವರ ಮೇಲೆ ಸುಳ್ಳು ಆರೋಪಗಳನ್ನು ಸೃಷ್ಟಿಸಿ ಸಿದ್ದರಾಮಯ್ಯನವರನ್ನು ತೆಜೋವಧೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಲ್ಲಿ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಒಗ್ಗಟ್ಟಾಗಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

ಸಂಘಟನೆಯ ತಾಲೂಕು ಘಟಕದ ಅಧ್ಯಕ್ಷ ಪ್ರಭಾಕರ ದೊಡ್ಡಮನೆ, ಬಸವರಾಜ ನವಲಕಲ್ಲು, ಶಾಂತಪ್ಪ ಪೀತಗಲ್, ಶರಣಪ್ಪ, ನಾಗರಾಜ ಬೊಮ್ಮನಾಲ, ಡಿಎಚ್ ಭೀಮಣ್ಣ, ಜೆ.ನಾಗರಾಜ, ಶರೀಪ್, ಸಗರಪ್ಪ, ಶಿವುಕುಮಾರ, ಹುಸೇನ ಬಾಷ ಇದ್ದರು.

----------------

ಫೋಟೊ: 02 ಎಸ್ವಿಆರ್ 2

ಸಿರವಾರದಲ್ಲಿ ಅಹಿಂದ ಸಂಘಟನೆಯ ಪದಾಧಿಕಾರಿಗಳು ಗ್ರೇಡ್ 2 ತಹಶೀಲ್ದಾರ್ ಭೀಮರಾಯ ರಾಮಸಮುದ್ರ ಅವರಿಗೆ ಮನವಿ ಸಲ್ಲಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!