ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ವಿಜ್ಞಾನ ವೇದಿಕೆ ಆಯೋಜಿಸಿದ್ದ ಫಿಲೋ- ನೆಕ್ಸಾ ೨೦೨೬ ವಿಜ್ಞಾನೋತ್ಸವವು ವಿವಿಧ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳ ಭಾಗವಹಿಸುವಿಕೆಯೊಂದಿಗೆ ನಡೆಯಿತು.
ಕನ್ನಡಪ್ರಭವಾರ್ತೆ ಪುತ್ತೂರು
ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ವಿಜ್ಞಾನ ವೇದಿಕೆ ಆಯೋಜಿಸಿದ್ದ ಫಿಲೋ- ನೆಕ್ಸಾ ೨೦೨೬ ವಿಜ್ಞಾನೋತ್ಸವವು ವಿವಿಧ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳ ಭಾಗವಹಿಸುವಿಕೆಯೊಂದಿಗೆ ನಡೆಯಿತು. ವಿದ್ಯಾರ್ಥಿಗಳು ತಮ್ಮ ವೈಜ್ಞಾನಿಕ ಜ್ಞಾನ, ಸೃಜನಶೀಲತೆ, ಸಂವಹನ ಕೌಶಲ ಹಾಗೂ ತಂಡದ ಕಾರ್ಯಕ್ಷಮತೆಯನ್ನು ಪ್ರದರ್ಶಿಸಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಅವರು ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಗುರುತಿಸಿಕೊಂಡು ಲಭಿಸುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಾಧನೆಯತ್ತ ಮುನ್ನಡೆಯಬೇಕು ಎಂದರು.
ಅತಿಥಿಯಾಗಿ ಭಾಗವಹಿಸಿದ್ದ ಮುಲ್ಕಿ ವಿಜಯ ಕಾಲೇಜ್‌ನ ನಿವೃತ್ತ ಪ್ರಾಂಶುಪಾಲ ಡಾ. ನಾರಾಯಣ ಪೂಜಾರಿ ಮಾತನಾಡಿದರು.
ಡಾ. ಎಡ್ವಿನ್ ಡಿಸೋಜಾ ಸ್ವಾಗತಿಸಿದರು. ಪ್ರೊ. ಚಂದ್ರಶೇಖರ್ ಅತಿಥಿ ಪರಿಚಯ ಮಾಡಿದರು. ಶ್ರೀರಕ್ಷಾ ಬಿ.ವಿ. ವಂದಿಸಿದರು. ನಿಶ್ಮಿತಾ ರೈ ನಿರೂಪಿಸಿದರು.
ಸಂಜೆ ಎಸ್‌ಜೆಎಂ ಸಭಾಂಗಣದಲ್ಲಿ ನಡೆದ ಸಮಾರೋಪದಲ್ಲಿ ಉಪ ಪ್ರಾಂಶುಪಾಲ ಡಾ. ವಿಜಯ್ ಕುಮಾರ್ ಮೊಳೆಯಾರ್ ಮಾತನಾಡಿದರು. ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜು ಸಮಗ್ರ ಚಾಂಪಿಯನ್‌ಶಿಪ್ ಹಾಗೂ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು ರನ್ನರ್ ಅಪ್ ಪಡೆದುಕೊಂಡಿತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.