ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವತಿಯಿಂದ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗಾಗಿ ಸಮಾಜಕಾರ್ಯದ ಕ್ಷೇತ್ರಗಳು ಕುರಿತು ಜ್ಞಾನ ಹಂಚಿಕೆ ಕಾರ್ಯಕ್ರಮ ಗುರುವಾರ ಕಾಲೇಜಿನ ಪಿಜಿ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವತಿಯಿಂದ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗಾಗಿ ಸಮಾಜಕಾರ್ಯದ ಕ್ಷೇತ್ರಗಳು ಕುರಿತು ಜ್ಞಾನ ಹಂಚಿಕೆ ಕಾರ್ಯಕ್ರಮ ಗುರುವಾರ ಕಾಲೇಜಿನ ಪಿಜಿ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು.
ಚೈಲ್ಡ್ ಪ್ರೊಟೆಕ್ಷನ್ ಏಂಡ್ ಡೆವಲಪ್‌ಮೆಂಟ್ ಪ್ರೊಫೆಷನಲ್ ಹಾಗೂ ಚೈಲ್ಡ್ ಫಂಡ್ ಇಂಡಿಯಾದ ಫೀಲ್ಡ್ ಆಫೀಸರ್ ಪ್ರೋಗ್ರಾಮ್ಸ್ ಸಿದ್ಧಾಂತ್ ಪಿ. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಮಕ್ಕಳ ರಕ್ಷಣೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಕಾನೂನು ಸೇವಾ ಪ್ರಾಧಿಕಾರಗಳ ನಡುವೆ ಸಮನ್ವಯ ಅಗತ್ಯವಿದೆ ಎಂದು ಸಿದ್ಧಾಂತ್ ಪಿ. ಹೇಳಿದರು. ಇದರೊಂದಿಗೆ ಕಾರ್ಯಕ್ರಮ ವಿನ್ಯಾಸ, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ, ಸಮುದಾಯ ಸಜ್ಜುಗೊಳಿಸುವಿಕೆ ಹಾಗೂ ಯುವಜನರ ತೊಡಗಿಸಿಕೊಳ್ಳುವಿಕೆ ಮುಂತಾದ ವೃತ್ತಿಪರ ಸಮಾಜಕಾರ್ಯದಲ್ಲಿ ಪ್ರಮುಖವಾಗಿರುವ ಪ್ರಾಯೋಗಿಕ ಅಂಶಗಳ ಕುರಿತು ವಿದ್ಯಾರ್ಥಿಗಳಿಗೆ ಪರಿಚಯ ಮಾಡಿಕೊಡಲಾಯಿತು.
ಎಂಎಸ್‌ಡಬ್ಲ್ಯು ವಿಭಾಗದ ಸಂಯೋಜಕಿ ಶ್ರೀಮಣಿ ಸ್ವಾಗತಿಸಿ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಪ್ರತಿಭಾ ವಂದಿಸಿದರು. ವಿಭಾಗದ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.