ಹುಬ್ಬಳ್ಳಿ:
ನಗರದ ಮೂರುಸಾವಿರ ಮಠದ ಸಭಾಭವನದಲ್ಲಿ ಹುಬ್ಬಳ್ಳಿ ಫೋಟೋ ಮತ್ತು ವಿಡಿಯೋಗ್ರಾಫರ್ ಸಂಘದ ವತಿಯಿಂದ ಆಯೋಜಿಸಿದ್ದ 187ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಉದ್ಯಮಿ ಡಾ. ವಿ.ಎಸ್.ವಿ. ಪ್ರಸಾದ್ ಮಾತನಾಡಿ, ಹುಬ್ಬಳ್ಳಿ ಫೋಟೋ ಮತ್ತು ವಿಡಿಯೋಗ್ರಾಫರ್ ಸಂಘವು ಛಾಯಾಗ್ರಹಣ ಕ್ಷೇತ್ರದ ಜತೆಗೆ ಕ್ರೀಡೆ ಸೇರಿದಂತೆ ವಿವಿಧ ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು.ಸಂಘದ ಸಂಸ್ಥಾಪಕ ಅಧ್ಯಕ್ಷ ಇಂದುಧರ ಸಾಲಿ, ಗೌರವಾಧ್ಯಕ್ಷ ಕಿರಣ್ ಬಾಕಳೆ, ಅಧ್ಯಕ್ಷ ದಿನೇಶ ದಾಬಡೆ, ರವೀಂದ್ರ ಕಾಟಿಗರ, ಅನಿಲ ತುರಮರಿ ಸೇರಿದಂತೆ ಪದಾಧಿಕಾರಿಗಳಿದ್ದರು. ಕಾರ್ಯಕ್ರಮದಲ್ಲಿ ಪ್ರತಿಭಾವಂತ ಬಾಲಕಿಯರಾದ ರಮ್ಯಾ ಹಾಗೂ ವೈಷ್ಣವಿ ಅವರ ಭರತನಾಟ್ಯ ಪ್ರದರ್ಶನ ಗಮನ ಸೆಳೆಯಿತು. ಇದೇ ಸಂದರ್ಭದಲ್ಲಿ ಛಾಯಾಗ್ರಹಣ ಕ್ಷೇತ್ರದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ 6 ಹಿರಿಯ ಛಾಯಾಗ್ರಾಹಕರನ್ನು ಸನ್ಮಾನಿಸಲಾಯಿತು. ರಾಕೇಶ ಪವಾರ ಹಾಗೂ ಅನುಜ್ ಪಾಠಕ ನಿರೂಪಿಸಿದರು.