ಗಂಗಾವತಿಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಛಾಯಾಚಿತ್ರ ಪ್ರದರ್ಶನ

KannadaprabhaNewsNetwork |  
Published : Feb 21, 2025, 12:46 AM IST
19ಕೆಪಿಎಲ್3:ಕೊಪ್ಪಳ ಜಿಲ್ಲೆಯ ಗಂಗಾವತಿಯ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಬಳ್ಳಾರಿಯ ಕೇಂದ್ರ ಸಂವಹನ ಇಲಾಖೆ ವತಿಯಿಂದ  ಕೇಂದ್ರ ಪುರಸ್ಕೃತ ಯೋಜನೆಗಳ ಛಾಯಾಚಿತ್ರ ಪ್ರದರ್ಶನ ಹಾಗೂ ಜನ ಜಾಗೃತಿ ಕಾರ್ಯಕ್ರಮ ಬುಧವಾರ ಜರುಗಿತು. | Kannada Prabha

ಸಾರಾಂಶ

ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳು ತಳಮಟ್ಟದ ಜನರಿಗೆ ಆರ್ಥಿಕ ಭದ್ರತೆ ಕಲ್ಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಅಟಲ್ ಪಿಂಚಣಿ ಯೋಜನೆ ವಯಸ್ಕರಿಗೆ ಹಣಕಾಸು ಭದ್ರತೆ ಒದಗಿಸುತ್ತದೆ. ಜನರ ಸುರಕ್ಷೆಯ ಹಿತಕ್ಕಾಗಿ ಕೇಂದ್ರ ಸರ್ಕಾರ ಸುರಕ್ಷಾ ವಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ ಪರಿಚಯಿಸಿದೆ.

ಕೊಪ್ಪಳ:

ಗಂಗಾವತಿಯ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಬಳ್ಳಾರಿಯ ಕೇಂದ್ರ ಸಂವಹನ ಇಲಾಖೆ ವತಿಯಿಂದ ಕೇಂದ್ರ ಪುರಸ್ಕೃತ ಯೋಜನೆಗಳ ಛಾಯಾಚಿತ್ರ ಪ್ರದರ್ಶನ ಹಾಗೂ ಜನ ಜಾಗೃತಿ ಕಾರ್ಯಕ್ರಮ ಬುಧವಾರ ಜರುಗಿತು.

ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿದ ನಗರಸಭೆ ಅಧ್ಯಕ್ಷ ಮೌಲಾಸಾಬ್‌ ದಾದೆಸಾಬ್‌, ಗ್ರಾಮೀಣ ಭಾಗಗಳ ಜನರಿಗೆ ಸರ್ಕಾರದ ಯೋಜನೆಗಳ ಮಾಹಿತಿ ತಲುಪಬೇಕು. ಇಂತಹ ಛಾಯಾಚಿತ್ರ ಪ್ರದರ್ಶನಗಳು ಈ ನಿಟ್ಟಿನಲ್ಲಿ ಮಾಹಿತಿ ಪೂರ್ಣವಾಗಿವೆ ಎಂದರು.

ಕೇಂದ್ರ ಸರ್ಕಾರದ ಪಿಂಚಣಿ ಹಾಗೂ ವಿಮಾ ಯೋಜನೆಗಳ ಕುರಿತು ಮಾಹಿತಿ ನೀಡಿದ ಎಸ್‌ಬಿಐ ಬ್ಯಾಂಕ್‌ನ ಆರ್ಥಿಕ ಸಲಹೆಗಾರ ಆಂಜನೇಯ, ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳು ತಳಮಟ್ಟದ ಜನರಿಗೆ ಆರ್ಥಿಕ ಭದ್ರತೆ ಕಲ್ಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಅಟಲ್ ಪಿಂಚಣಿ ಯೋಜನೆ ವಯಸ್ಕರಿಗೆ ಹಣಕಾಸು ಭದ್ರತೆ ಒದಗಿಸುತ್ತದೆ. ಜನರ ಸುರಕ್ಷೆಯ ಹಿತಕ್ಕಾಗಿ ಕೇಂದ್ರ ಸರ್ಕಾರ ಸುರಕ್ಷಾ ವಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ ಪರಿಚಯಿಸಿದೆ. ಅಟಲ್ ಪಿಂಚಣಿ ಯೋಜನೆ ಅಡಿ ವಯೋವೃದ್ಧರು ಆರ್ಥಿಕ ಭದ್ರತೆ ಪಡೆಯಬಹುದಾಗಿದೆ ಎಂದರು.

ಆಯುಷ್ಮಾನ್ ಭಾರತ ಹಾಗೂ ಕ್ಷಯ ಮುಕ್ತ ಭಾರತ ಕುರಿತು ಆರೋಗ್ಯ ಇಲಾಖೆಯ ಆಶಾ ಬೇಗಂ ಮಾತನಾಡಿದರು. ತಾಲೂಕು ಕಸಾಪ ಅಧ್ಯಕ್ಷ ರುದ್ರೇಶ ಅಧ್ಯಕ್ಷತೆ ವಹಿಸಿದ್ದರು. ಉಪ ತಹಸೀಲ್ದಾರ್ ರವಿಕುಮಾರ, ಶಿಕ್ಷಣ ಇಲಾಖೆಯ ಉಮಾದೇವಿ ಪಾಟೀಲ್, ಡಿ. ಆಂಜನೇಯ ಸ್ವಾಮಿ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಸನ್ನ, ಕೇಂದ್ರ ಸಂವಹನ ಇಲಾಖೆಯ ಕ್ಷೇತ್ರ ಪ್ರಚಾರ ಅಧಿಕಾರಿ ಅಕ್ಷತಾ ಸಿ.ಎಚ್., ಇಲಾಖೆಯ ಸಿಬ್ಬಂದಿ ರಾಮಕೃಷ್ಣಪ್ಪ ಹಾಗೂ ಲಕ್ಷ್ಮೀಕಾಂತ ಇತರರಿದ್ದರು. ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ