ಕನ್ನಡಪ್ರಭ ವಾರ್ತೆ ನಾಪೋಕ್ಲು
ಕ್ರೀಡೆ ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿ ಎಂದು ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.ಇಲ್ಲಿನ ಚೆರಿಯ ಪರಂಬುವಿನ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ನಾಪೋಕ್ಲು ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ 14 ಮತ್ತು 17ನೇ ವರ್ಷದ ಒಳಗಿನ ಬಾಲಕ, ಬಾಲಕಿಯರ ತಾಲೂಕುಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.ಕೊಡಗು ಎಂದರೆ ಕ್ರೀಡೆ. ಶಿಕ್ಷಣ ಇಲಾಖೆ ಆಯೋಜಿಸುವ ಕ್ರೀಡಾಕೂಟ ಶಿಸ್ತುಬದ್ಧವಾಗಿ ನಡೆಯುತ್ತದೆ. ಮಕ್ಕಳಲ್ಲಿ ಕ್ರೀಡೆಗೆ ಶಿಕ್ಷಣ ಇಲಾಖೆ ಹೆಚ್ಚಿನ ಪ್ರೋತ್ಸಾಹವನ್ನು ನೀಡುತ್ತಿದೆ. ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳು ಸೋಲು ಗೆಲುವು ಎಂದು ಯೋಚಿಸದೇ ಶಿಸ್ತು ಬದ್ಧವಾಗಿ ಪಾಲ್ಗೊಳ್ಳಬೇಕು ಎಂದರು.ಕ್ರೀಡಾಕೂಟದ ಅಂಗವಾಗಿ ಧ್ವಜಾರೋಹಣ, ಪಥಸಂಚಲನ, ಗೌರವ ವಂದನೆ, ಪ್ರಮಾಣ ವಚನ ಸ್ವೀಕಾರ ನಡೆಯಿತು. ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಅರ್ಹತಾ ಪತ್ರ ನೀಡಲಾಯಿತು. ಈ ಸಂದರ್ಭ ನಿವೃತ್ತಿ ಹೊಂದಿದ ದೈಹಿಕ ಶಿಕ್ಷಕಿಯರನ್ನು ಸನ್ಮಾನಿಸಲಾಯಿತು. ಇದಕ್ಕೂ ಮೊದಲು ಕನಕದಾಸ ಜಯಂತಿ ಪ್ರಯುಕ್ತ ಕನಕದಾಸ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಮಡಿಕೇರಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಂದ್ರಿರ ಮೋಹನ್ ದಾಸ್, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಅಧ್ಯಕ್ಷ ಅರುಣ್ ಕುಮಾರ್ ಎಂ.ಸಿ., ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘ ತಾಲೂಕು ಶಾಖೆ ಅಧ್ಯಕ್ಷ ಮೋಹನ್ ಪೆರಾಜೆ, ಮಡಿಕೇರಿ ತಾಲೂಕು ಸರ್ಕಾರಿ ಪ್ರೌಢಶಾಲಾ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಅಧ್ಯಕ್ಷ ಕಿರಣ್ ಪಿ.ಎಂ., ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಮಡಿಕೇರಿ ತಾಲೂಕು ನೌಕರರ ಸಂಘ ಶಾಖೆಯ ಅಧ್ಯಕ್ಷ ಶರತ್ ಕೆ.ಎಂ., ಮಡಿಕೇರಿ ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಕುಶಾಲಪ್ಪ ಎಸ್., ಕೆಡಿಪಿ ಸದಸ್ಯ ಬಾಚ ಮಂಡ ಲವ ನಾಣಯ್ಯ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಗ್ರಾಮ ಪಂಚಾಯಿತಿ ಸದಸ್ಯ ಮಾಚೆಟ್ಟಿರ ಕುಶುಕುಶಾಲಪ್ಪ, ಕುಲ್ಲೇಟಿರ ಅರುಣ್ ಬೇಬ, ತಿಮ್ಮಯ್ಯ, ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಆರ್.ಪಿ., ನಾಪೋಕ್ಲು ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಪ್ರಾಂಶುಪಾಲ ನೀತಾ ಕೆ.ಡಿ., ಅಂಬೇಡ್ಕರ್ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ಯಾಮಿಲಿ ಬಿ.ಬಿ., ವಿವಿಧ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು, ಸಿಬ್ಬಂದಿ, ಪೋಷಕರು ಪಾಲ್ಗೊಂಡಿದ್ದರು. ಅಶೋಕ ಕೆ.ಜಿ. ಹಾಗೂ ಶಿವಪ್ರಸಾದ್ ಕೆ. ಕ್ರೀಡಾಕೂಟವನ್ನು ನಿರೂಪಿಸಿ ಸಹಕರಿಸಿದರು. ಶಿಕ್ಷಣಾಧಿಕಾರಿ ಮಹೇಶ್ ಆರ್.ಪಿ. ಸ್ವಾಗತಿಸಿದರು. ರೂಪಾ ಎಂ.ಜಿ. ನಿರೂಪಿಸಿದರು. ಪ್ರಾಂಶುಪಾಲರಾದ ನೀತಾ ಕೆ.ಡಿ. ವಂದಿಸಿದರು.