ಕನ್ನಡಪ್ರಭ ವಾರ್ತೆ ವಿಜಯಪುರ
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯ ಸರ್ಕಾರ ಜಿಲ್ಲೆಯ ಜನರ ಬೇಡಿಕೆಯು ಸಾರ್ವಜನಿಕ ಹಿತಾಸಕ್ತಿಯ ಬೇಡಿಕೆಯಾಗಿದೆ. ಸಾರ್ವಜನಿಕರಿಗೆ ಶಿಕ್ಷಣ ಮತ್ತು ಆರೋಗ್ಯ ಸೇವೆ ನೀಡ ಬೇಕಾಗಿರುವುದು ಪ್ರಜಾಪ್ರಭುತ್ವ ಸರ್ಕಾರದ ಸಂವಿಧಾನಬದ್ದ ಕರ್ತವ್ಯವಾಗಿದೆ. ಸರ್ಕಾರ ತನ್ನ ಕರ್ತವ್ಯ ನಿರ್ವಹಿಸಲು ಸಂಪೂರ್ಣ ವಿಫಲವಾಗಿದೆ. ಶಾಸಕಾಂಗ ಮತ್ತು ಕಾರ್ಯಾಂಗಗಳು ವಿಫಲವಾಗಿರುವುದನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ನ್ಯಾಯಾಂಗದ ಗಮನಕ್ಕೆ ತರಲಾಗಿದೆ. ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ವಿಜಯಪುರ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಕಾನೂನು ಬದ್ದ ನೋಟಿಸ್ ನೀಡಿ ವಿಜಯಪುರ ಜಿಲ್ಲೆಗೆ ಉದ್ದೇಶಿತ ಪಿಪಿಪಿ ಮಾದರಿಯ ಖಾಸಗೀಕರಣ ಕೈಬಿಡಲು ಒತ್ತಾಯಿಸುತ್ತಿರುವ ಜನರ ಬೇಡಿಕೆ ಕುರಿತು ಸ್ಪಷ್ಟ ಅಭಿಪ್ರಾಯ ಕೇಳಲಾಗಿದೆ. ಜೊತೆಗೆ ರಾಜ್ಯ ಸರ್ಕಾರದಿಂದ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆ ಮಾಡುವ ಕುರಿತು ಹಾಗೂ ಕೇಂದ್ರ ಸರ್ಕಾರದಿಂದ ಏಮ್ಸ್ ಸ್ಥಾಪನೆ ಮಾಡುವ ಕುರಿತು ಲಿಖಿತ ಸ್ಪಷ್ಟನೆ ಕೇಳಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಉಚ್ಚ ನ್ಯಾಯಾಲಯದ ಮುಂದೆ ಲಿಖಿತ ಉತ್ತರ ನೀಡಬೇಕಾಗಿದೆ. ಕರ್ನಾಟಕ ಉಚ್ಚ ನ್ಯಾಯಾಲಯವು ಜಿಲ್ಲೆಯ ಜನರ ಬೇಡಿಕೆಗೆ ನ್ಯಾಯ ಒದಗಿಸುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.