ಪೈಪ್‌ಲೈನ್ ಒಡೆದು ಕುಡಿಯುವ ನೀರು ಪೋಲು: ಕ್ರಮಕ್ಕೆ ಒತ್ತಾಯ

KannadaprabhaNewsNetwork |  
Published : Jun 09, 2025, 04:49 AM IST
8ಸಿಎಚ್‌ಎನ್‌51ಹನೂರು ಪಟ್ಟಣದ ತಾಲೂಕು ದಂಡಾಧಿಕಾರಿ ಕಚೇರಿಗಳ ಬಳಿ ಕುಡಿಯುವ ನೀರಿನ ಪೈಪ್ ಲೈನ್ ಹೊಡೆದು ಕೆರೆಯ ಮಾದರಿ ನೀರು ನಿಂತಿರುವುದು. | Kannada Prabha

ಸಾರಾಂಶ

ಹನೂರು ಪಟ್ಟಣದ ತಹಸೀಲ್ದಾರ್‌ ಕಚೇರಿ ಬಳಿ ಕುಡಿಯುವ ನೀರಿನ ಪೈಪ್‌ಲೈನ್ ಒಡೆದು ನೀರು ಹರಿಯುತ್ತಿರುವುದು.

ಹನೂರು: ಪಟ್ಟಣದ ಓವರ್ ಟ್ಯಾಂಕ್‌ಗೆ ಸರಬರಾಜಾಗುವ ಕುಡಿಯುವ ನೀರಿನ ಪೈಪ್ ಲೈನ್ ಒಡೆದು ತಾಲೂಕು ದಂಡಾಧಿಕಾರಿ ಕಚೇರಿಗಳ ಮುಂಭಾಗ ಕೆರೆಯಂತೆ ನೀರು ನಿಂತಿದ್ದು ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಪಟ್ಟಣದ ತಾಲೂಕು ದಂಡಾಧಿಕಾರಿ ಕಚೇರಿಗಳ ಬಳಿ ಇರುವ ಓವರ್ ಹೆಡ್ ಟ್ಯಾಂಕ್‌ಗೆ ಸರಬರಾಜು ಆಗುವ ಕುಡಿಯುವ ನೀರಿನ ಪೈಪ್ ಲೈನ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗಿರುವುದು ಇಲ್ಲಿನ ಪಟ್ಟಣ ಪಂಚಾಯಿತಿ ಅಧಿಕಾರಿ, ಸಿಬ್ಬಂದಿ ನಿರ್ಲಕ್ಷ್ಯತನದಿಂದ ಎಂದು ಸಾರ್ವಜನಿಕರು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ತಾಲೂಕು ದಂಡಾಧಿಕಾರಿ ಕಚೇರಿಗಳ ಬಳಿ ಬರುವ ಜೋಡಿ ಟ್ಯಾಂಕ್ ಸರಬರಾಜುವ ಕುಡಿಯುವ ನೀರಿನ ಪೈಪ್ ಲೈನ್ ಮುಖ್ಯದ್ವಾರದ ಬಳಿ ಒಡೆದು ಅಪಾರ ಪ್ರಮಾಣದ ಕುಡಿಯುವ ನೀರು, ತಾಲೂಕು ಭೂಮಾಪನ ಹಾಗೂ ಪಡಸಾಲೆ ಮತ್ತು ತಾಲೂಕು ದಂಡಾಧಿಕಾರಿಗಳ ಕಚೇರಿ ಮುಂಭಾಗ ಕೆರೆಯ ಮಾದರಿ ನಿಂತು ನಿರ್ಲಕ್ಷ್ಯತನಕ್ಕೆ ಸಾಕ್ಷಿಯಾಗಿದೆ.

ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗೆ ಒತ್ತಾಯ:

ಪಟ್ಟಣದಲ್ಲಿ ಇಡೀ ರಾತ್ರಿ ಅಪಾರ ಪ್ರಮಾಣದ ನೀರು ಪೋಲಾಗುವ ಬಗ್ಗೆ ಇಲ್ಲಿನ ಪಪಂ ನೀರುಘಂಟಿ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಸಂಬಂಧಪಟ್ಟವರು ಮುಂದೆ ಈ ರೀತಿ ಜರುಗದಂತೆ ಕ್ರಮ ವಹಿಸಲು ಪಟ್ಟಣದ ನಾಗರಿಕರು ಆಗ್ರಹಿಸಿದ್ದಾರೆ.

ದೂರವಾಣಿ ಸಂಪರ್ಕಕ್ಕೆ ಸಿಗದ ಮುಖ್ಯ ಅಧಿಕಾರಿ:

ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು ಅಪಾರ ಪ್ರಮಾಣದ ನೀರು ಶನಿವಾರ ರಾತ್ರಿ ಪೋಲಾಗಿರುವ ಬಗ್ಗೆ ನಾಗರಿಕರು ಮುಖ್ಯ ಅಧಿಕಾರಿಗೆ ಮಾಹಿತಿ ನೀಡಲು ದೂರವಾಣಿ ಸಂಪರ್ಕ ಮಾಡಿದರೆ ಸಂಪರ್ಕಕ್ಕೆ ಸಿಕ್ಕಿಲ್ಲ. ಅಪಾರ ಪ್ರಮಾಣದ ನೀರು ಪೋಲಾಗಿರುವ ಬಗ್ಗೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಪೈಪ್ ಲೈನ್ ದುರಸ್ತಿ ಪಡಿಸಿ ನೀರು ಪೋಲಾಗದಂತೆ ಎಚ್ಚರಿಕೆ ವಹಿಸಲು ಇಲ್ಲಿನ ಅಧಿಕಾರಿಗಳು, ಸಿಬ್ಬಂದಿಗೆ ಸೂಚನೆ ನೀಡಬೇಕು ಎಂದು ನಿವಾಸಿಗಳು ಒತ್ತಾಯ ಮಾಡಿದ್ದಾರೆ.

PREV

Recommended Stories

ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ