ಕನ್ನಡಪ್ರಭ ವಾರ್ತೆ ಗುಳೇದಗುಡ್ಡ
ಅವರು ಸಮೀಪದ ಹಳದೂರು ಗ್ರಾಮದಲ್ಲಿ ನವೀಕರಣಗೊಂಡ ಪಿಕೆಪಿಎಸ್ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿ, ರೈತರ ಕಾಳಜಿ ಹೊಂದಿದ ಸಿಎಂ ಸಿದ್ದರಾಮಯ್ಯ ರೈತರ ಸಾಲ, ಬಡ್ಡಿ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದಾರೆ. ರೈತರು ಕೂಡಾ ಕೈಗಡವಾಗಿ ಹೆಚ್ಚಿನ ಬಡ್ಡಿ ಸಾಲ ಪಡೆದು ಕಷ್ಟ ಅನುಭವಿಸಬೇಡಿ. ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ಕಡಿಮೆ ಬಡ್ಡಿಯಲ್ಲಿ ಸಾಲ ಪಡೆದು ಆರ್ಥಿಕವಾಗಿ ಚೇತರಿಸಿಕೊಳ್ಳಬೇಕೆಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ರೈತರ ಏಳಿಗೆಯಲ್ಲಿ ಪಿಕೆಪಿಎಸ್ ಮಹತ್ವದ ಪಾತ್ರ ವಹಿಸುತ್ತದೆ. ರೈತರು ಸಾಲ ಪಡೆದು ಉತ್ತಮ ಬೆಳೆ ಬೆಳೆದು ಸಕಾಲದಲ್ಲಿ ಸಾಲ ಮರುಪಾವತಿಸಬೇಕೆಂದರು.ಮಾಜಿ ಶಾಸಕ ರಾಜಶೇಖರ ಶೀಲವಂತ, ಮೈಲಾರಲಿಂಗೇಶ್ವರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಮಹೇಶ ಹೊಸಗೌಡರ, ಎಸ್.ಎಸ್.ಮಠ ಮಾತನಾಡಿದರು. ಪಿಕೆಪಿಎಸ್ ಸಂಘದ ಅಧ್ಯಕ್ಷ ತಿಪ್ಪಣ್ಣ ಗೌಡರ ಅಧ್ಯಕ್ಷತೆ ವಹಿಸಿದ್ದರು. ಅಭಿನವ ಒಪ್ಪತ್ತೇಶ್ವರ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು.