ಪಟಾಕಿಗಳ ಮಾರಾಟ ವೇಳೆ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿ: ಉಪವಿಭಾಗಾಧಿಕಾರಿ

KannadaprabhaNewsNetwork |  
Published : Oct 29, 2026, 02:00 AM IST
ಕ್ಯಾಪ್ಷನ27ಕೆಡಿವಿಜಿ36 ಸಂತೋಷ್‌ ಕುಮಾರ | Kannada Prabha

ಸಾರಾಂಶ

ಪ್ರಸಕ್ತ ಸಾಲಿನ ದೀಪಾವಳಿ ಹಬ್ಬದ ಪ್ರಯುಕ್ತ ಸುರಕ್ಷಿತ ಕ್ರಮಗಳನ್ನು ಕೈಗೊಂಡು ಸಾರ್ವಜನಿಕರ ಮತ್ತು ಮಕ್ಕಳ ಆರೋಗ್ಯದ ಹಿತದೃಷ್ಠಿಯಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಉಪವಿಭಾಗಾಧಿಕಾರಿ ಸಂತೋಷ್‌ ಕುಮಾರ್‌ ಸೂಚನೆ ನೀಡಿದ್ದಾರೆ.

- ಮುಂಜಾಗ್ರತೆ ಕ್ರಮಗಳ ಕುರಿತು ವಿಡಿಯೋ ಸಂವಾದ-ಪೂರ್ವಭಾವಿ ಸಭೆ

- - -

ದಾವಣಗೆರೆ: ಪ್ರಸಕ್ತ ಸಾಲಿನ ದೀಪಾವಳಿ ಹಬ್ಬದ ಪ್ರಯುಕ್ತ ಸುರಕ್ಷಿತ ಕ್ರಮಗಳನ್ನು ಕೈಗೊಂಡು ಸಾರ್ವಜನಿಕರ ಮತ್ತು ಮಕ್ಕಳ ಆರೋಗ್ಯದ ಹಿತದೃಷ್ಠಿಯಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಉಪವಿಭಾಗಾಧಿಕಾರಿ ಸಂತೋಷ್‌ ಕುಮಾರ್‌ ಸೂಚನೆ ನೀಡಿದರು.

ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಇತ್ತೀಚೆಗೆ ದೀಪಾವಳಿ ಹಬ್ಬದ ಪ್ರಯುಕ್ತ ತಾತ್ಕಾಲಿಕ ಪಟಾಕಿ ಮಾರಾಟ ಮಳಿಗೆ ನಿರ್ಮಿಸುವ ಹಾಗೂ ಮುಂಜಾಗ್ರತೆ ಕ್ರಮಗಳ ಕುರಿತು ನಡೆದ ವಿಡಿಯೋ ಸಂವಾದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪೊಲೀಸ್‌ ಇಲಾಖೆ, ಅಗ್ನಿಶಾಮಕ ಇಲಾಖೆ, ಕಂದಾಯ ಇಲಾಖೆ, ಪಿ.ಡಬ್ಲ್ಯೂಡಿ ಇಲಾಖೆ, ಮಹಾನಗರ ಪಾಲಿಕೆ/ ಪುರಸಭೆ/ ನಗರಸಭೆ ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಯಾವುದೇ ರೀತಿಯ ಅವಘಡ ಸಂಭವಿಸದ ರೀತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಯಶಸ್ವಿಯಾಗಿ ನಿರ್ವಹಿಸಲು ಸೂಚಿಸಿದರು.

ನಗರದ ಹೈಸ್ಕೂಲ್‌ ಕ್ರೀಡಾಂಗಣದಲ್ಲಿ, ತಾಲೂಕು ಮಟ್ಟದಲ್ಲಿ ಹರಿಹರ, ಮಲೇಬೆನ್ನೂರು, ಜಗಳೂರು ತಾಲೂಕುಗಳಲ್ಲಿ ತನಿಖೆ ನಡೆಸಿ ಮಾರಾಟ ಮಳಿಗೆಗಳನ್ನು ತೆರೆಯಲು ಸೂಕ್ತವಾದ ಸ್ಥಳಗಳನ್ನು ಗುರುತಿಸಬೇಕು. ಪಟಾಕಿ ಮಾರಾಟದ ಪರವಾನಗಿಗಳನ್ನು ಪೊಲೀಸ್‌ ಇಲಾಖೆ ಮತ್ತ ಅಗ್ನಿಶಾಮಕ ಇಲಾಖೆ ಅಭಿಪ್ರಾಯದಂತೆ ನೀಡಲಾಗುವುದು ಯಾವುದೇ ಮಾರಾಟ ಪರವಾನಗಿ ಇಲ್ಲದೆ ಮಾರಾಟ ಮಾಡಿದಲ್ಲಿ ಕಾನೂನು ಕ್ರಮವಹಿಸಲಾಗುವುದು ಎಂದರು.

ಪಟಾಕಿ ವರ್ತಕರು ಸರ್ಕಾರದ ಎಲ್ಲ ಸುರಕ್ಷತಾ ಕ್ರಮಗಳನ್ನು ಪಾಲಿಸಿ ಯಾವುದೇ ಅವಘಡ ಆಗದಂತೆ ಮುನ್ನೆಚರಿಕೆ ಕ್ರಮಗಳನ್ನು ವಹಿಸಬೇಕು. ಪ್ರಸ್ತುತ 121ಕ್ಕೂ ಹೆಚ್ಚು ಪರವಾನಗಿ ಕೋರಿ ಅರ್ಜಿಗಳು ಸ್ವೀಕೃತವಾಗಿದೆ. ಇನ್ನು ಹೆಚ್ಚಿನ ಅರ್ಜಿಗಳು ಸ್ವೀಕೃತಗೊಳ್ಳಲಿವೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸುರಕ್ಷತೆಗೆ ಒತ್ತು ಕೊಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.

ಪೊಲೀಸ್‌ ಇಲಾಖೆ, ಅಗ್ನಿಶಾಮಕ ಇಲಾಖೆಯು ಪಟಾಕಿ ಪ್ರವರ್ತಕರಿಗೆ ತರಬೇತಿ ನೀಡುವ ಬಗ್ಗೆ ಕ್ರಮ ವಹಿಸಬೇಕು ಒಟ್ಟಾರೆಯಾಗಿ ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಯಾವುದೇ ರೀತಿಯ ಅವಘಡ ಸಂಭವಿಸದ ರೀತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

- - -

-27ಕೆಡಿವಿಜಿ36: ಸಂತೋಷ್‌ ಕುಮಾರ್‌

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಲ ನೀಡದ್ದಕ್ಕೆ ಬೇಕರಿ ಮಾಲೀಕರಿಗೆಧಮ್ಕಿ ಹಾಕಿ ದಾಂಧಲೆ: ಇಬ್ಬರ ಬಂಧನ
ಮೆಟ್ರೋದಲ್ಲಿ ಮಹಿಳೆಯ ವಿಡಿಯೋ ಮಾಡಿದ ಕಿಡಿಗೇಡಿ ವಿರುದ್ಧ ಕೇಸ್