ಮುಂದಿನ 10 ವರ್ಷ ಗ್ಯಾರಂಟಿ ಮುಂದುವರಿಕೆಗೆ ಯೋಜನೆ: ಹಿರಿಯ ವಕೀಲ ಎಲ್.ಪಿ.ಪ್ರಕಾಶ್‌ಗೌಡ

KannadaprabhaNewsNetwork | Published : Jun 29, 2024 12:33 AM

ಸಾರಾಂಶ

ಮುಂದಿನ 10 ವರ್ಷಗಳ ಕಾಲ ಯೋಜನೆಯನ್ನು ಸರ್ಕಾರ ಮುಂದುವರೆಸಲು ಯೋಜನೆಯನ್ನು ರೂಪಿಸುತ್ತಿದೆ ಎಂದು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ನೂತನ ಅಧ್ಯಕ್ಷ ಹಾಗೂ ಹಿರಿಯ ವಕೀಲ ಎಲ್.ಪಿ.ಪ್ರಕಾಶ್‌ಗೌಡ ಹೇಳಿದರು. ಚನ್ನರಾಯಪಟ್ಟಣದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಕಾರ್ಯಾಲಯವನ್ನು ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಉದ್ಘಾಟನೆ ಮಾಡಿ ಮಾತನಾಡಿದರು.

ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಸಮಿತಿ ಕಾರ್ಯಾಲಯ ಆರಂಭ

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂದು ಕೆಲ ಕಿಡಿಗೇಡಿಗಳು ಅಪ ಪ್ರಚಾರ ಮಾಡುತ್ತಿದ್ದು, ಇದಕ್ಕೆ ಜನ ಕಿವಿಕೊಡುವ ಅವಶ್ಯಕತೆ ಇಲ್ಲ. ಇನ್ನು ಮುಂದಿನ 10 ವರ್ಷಗಳ ಕಾಲ ಯೋಜನೆಯನ್ನು ಸರ್ಕಾರ ಮುಂದುವರೆಸಲು ಯೋಜನೆಯನ್ನು ರೂಪಿಸುತ್ತಿದೆ ಎಂದು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ನೂತನ ಅಧ್ಯಕ್ಷ ಹಾಗೂ ಹಿರಿಯ ವಕೀಲ ಎಲ್.ಪಿ.ಪ್ರಕಾಶ್‌ಗೌಡ

ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಕಾರ್ಯಾಲಯವನ್ನು ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಉದ್ಘಾಟನೆ ಮಾಡಿ ಮಾತನಾಡಿದರು.

ರಾಜ್ಯದಲ್ಲೇ ಒಂದು ಮಾದರಿ ಗ್ಯಾರಂಟಿ ಯೋಜನೆಯ ಸಮಿತಿಗೆ ಕಚೇರಿಯನ್ನು ತೆರೆದು ಸಾರ್ವಜನಿಕರಿಗೆ ಅನುಕುಲವಾಗುವಂತೆ ಕೆಲಸ ಮಾಡಲು ಮುಂದಾಗಿದ್ದು, ಪ್ರತಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಸಭೆಗಳನ್ನು ನಡೆಸಿ ಜನರಿಗೆ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿದೆಯೋ, ಇಲ್ಲವೋ, ತೊಂದರೆಯಾಗಿರುವ ಯೋಜನೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜತೆ ಸಮಾಲೋಚನೆ ಮಾಡಿ ಸ್ಥಳದಲ್ಲೇ ಬಗೆಹರಿಸುವ ನಿಟ್ಟಿನಲ್ಲಿ ಪ್ರಮಾಣಿಕವಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಯ ಕಚೇರಿಯಲ್ಲಿ ಪ್ರತಿನಿತ್ಯ ಜನರ ಸಮಸ್ಯೆಯನ್ನು ಆಲಿಸಿ ಬಗೆಹರಿಸುತ್ತೇವೆ. ಜನಪ್ರತಿನಿಧಿಗಳು ಇಲ್ಲದ ಸಂದರ್ಭದಲ್ಲಿ ಕಚೇರಿಯಲ್ಲಿ ಅಳವಡಿಸಿರುವ ದೂರು ಪೆಟ್ಟಿಗೆಯಲ್ಲಿ ಸಮಸ್ಯೆಯನ್ನು ಪತ್ರದ ಮೂಲಕ ಸಲ್ಲಿಸಿದರೆ ಅಂತಹ ಸಮಸ್ಯೆಯನ್ನು ಬಗೆಹರಿಸಲು ಕ್ರಮ ವಹಿಸಲಾಗುತ್ತದೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಹಾಗೂ 15 ಜನ ಸದಸ್ಯರನ್ನು ಆಯ್ಕೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ, ಲೋಕಸಭಾ ಸದಸ್ಯ ಶ್ರೇಯಸ್ ಪಟೇಲ್, ಮಾಜಿ ಶಾಸಕರಾದ ಸಿ.ಎಸ್.ಪುಟ್ಟೇಗೌಡ, ಎಂ.ಎ.ಗೋಪಾಲಸ್ವಾಮಿ ಹಾಗೂ ಇತರ ಮುಖಂಡರ ಸಹಕರಸಿದ್ದಾರೆ. ಮುಂದಿನ ದಿನಗಳಲ್ಲಿ ಪ್ರತಿ ಕ್ಷೇತ್ರದಲ್ಲೂ ಪ್ರವಾಸ ಮಾಡಿ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಸಂಘಟಿಸಲು ಪ್ರಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನಾ ಸಮಿತಿ ಸದಸ್ಯರಾದ ನವೀನ್‌ಕುಮಾರ್, ಜನಾರ್ಧನ್, ಎ.ಆರ್.ನಾಗೇಶ್, ನಾಗೇಶ್, ಪ್ರಕಾಶ್, ನಿಶ್ಚಲ್ ಐಸ್ಪಾಕ್ಬಿನ್, ಗಣೇಶ್, ಬಿ. ಆರ್. ಕೆಂಪೇಗೌಡ, ಮಂಜುನಾಥ, ರಂಗಸ್ವಾಮಿ, ಎ.ಪಿ.ರಂಗಸ್ವಾಮಿ, ಸುರೇಶ್ ಹಾಜರಿದ್ದರು.

ಮುಖ್ಯಕಾರ್ಯನಿರ್ವಹಣಾಧಿಕಾರಿ ಹರೀಶ್, ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ಎಂ.ಶಂಕರ್, ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಎಚ್. ಎಸ್.ವಿಜಯ್‌ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಎ.ಮಂಜಣ್ಣ, ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಯುವರಾಜ್, ಮುಖಂಡರಾದ ಮಧು ಸಾಣೇನಹಳ್ಳಿ, ಮಖಾನ್ ವಿನೋದ್, ಎಚ್.ಸಿ.ಶಂಕರಲಿಂಗೇಗೌಡ, ಶಿವರಾಜ್‌ ಬಾಗೂರು, ರೈತ ಸಂಘದ ತಾಲೂಕು ಅಧ್ಯಕ್ಷ ಸಿ.ಜಿ.ರವಿ, ಜಿಲ್ಲಾ ರೈತ ಸಂಘದ ಮುಖಂಡ ಮಾಳೇನಹಳ್ಳಿ ಹರೀಶ್, ವಕೀಲರಾದ ಜಲೇಂದ್ರಕುಮಾರ್, ಎ.ಡಿ.ಕುಮಾರ್, ವಾಸು, ಬಿ.ವಿ.ವಿಜಯ್, ರಾಘವೇಂದ್ರ, ಬಸವರಾಜ್, ಕಾಂತರಾಜ್‌ ಕರಿಕ್ಯಾತನಹಳ್ಳಿ, ಪಿ.ದಿನೇಶ್, ಜೀನತ್‌ಫರ್‌ ಜಾನ್ ಇದ್ದರು.

Share this article