224 ಕ್ಷೇತ್ರಗಳ ಅಂತರ್ಜಲ ಹೆಚ್ಚಳಕ್ಕೆ ಯೋಜನೆ: ಡಾ.ಅಜಯ್‌ ಧರಂಸಿಂಗ್‌

KannadaprabhaNewsNetwork |  
Published : Aug 24, 2026, 01:15 AM IST
ಫೋಟೋ- ಅಜಯ್‌ 1 ಮತ್ತು ಅಜಯ್‌ 2 | Kannada Prabha

ಸಾರಾಂಶ

ರಾಜ್ಯದಲ್ಲಿ ಕೆರೆ ತುಂಬಿಸುವ ಯೋಜನೆ, ಏತ ನೀರಾವರಿ ಯೋಜನೆ, ಬ್ರಿಡ್ಜ್ ಕಮ್ ಬ್ಯಾರೇಜ್, ಸರಣಿ ಚೆಕ್ ಡ್ಯಾಂ, ಗೋಕಟ್ಟಾ ನಿರ್ಮಾಣ ಹೀಗೆ ಮಹಾರಾಷ್ಟ್ರದ ಶಿರಪೂರ ಮಾದರಿಯಲ್ಲಿ ಅಂತರ್ಜಲ ಹೆಚ್ಚಳಕ್ಕೆ ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲು ಹೆಚ್ಚಿನ ಒತ್ತು ನೀಡಲಾಗುವುದು ಎಂದು ರಾಜ್ಯದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಅಜಯ್ ಧರಂಸಿಂಗ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಕಲಬುರಗಿರಾಜ್ಯದಲ್ಲಿ ಕೆರೆ ತುಂಬಿಸುವ ಯೋಜನೆ, ಏತ ನೀರಾವರಿ ಯೋಜನೆ, ಬ್ರಿಡ್ಜ್ ಕಮ್ ಬ್ಯಾರೇಜ್, ಸರಣಿ ಚೆಕ್ ಡ್ಯಾಂ, ಗೋಕಟ್ಟಾ ನಿರ್ಮಾಣ ಹೀಗೆ ಮಹಾರಾಷ್ಟ್ರದ ಶಿರಪೂರ ಮಾದರಿಯಲ್ಲಿ ಅಂತರ್ಜಲ ಹೆಚ್ಚಳಕ್ಕೆ ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲು ಹೆಚ್ಚಿನ ಒತ್ತು ನೀಡಲಾಗುವುದು ಎಂದು ರಾಜ್ಯದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಅಜಯ್ ಧರಂಸಿಂಗ್‌ ಹೇಳಿದರು.ಕೆ.ಕೆ.ಆರ್.ಡಿ.ಬಿ ಮಂಡಳಿ ಸಭಾಂಗಣದಲ್ಲಿ ಸಚಿವರಾದ ನಂತರ ಮೊದಲ ಬಾರಿಗೆ ಜಿಲ್ಲೆಗೆ ಭಾನುವಾರ ಆಗಮಿಸಿದ ಅವರು, ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿನ ಅಂತರ್ಜಲ ಹೆಚ್ಚಳಕ್ಕೆ ಏನೆಲ್ಲ ಯೋಜನೆ ತೆಗೆದುಕೊಳ್ಳಲಾಗುತ್ತದೆ ಎಂಬುದನ್ನು ಪ್ರತಿಬಿಂಬಿಸುವ ಡ್ಯಾಶ್ ಬೋರ್ಡ್ ತೆರೆಯಲಾಗುತ್ತದೆ ಎಂದರು.3,333 ಕೋಟಿ ರು.ಅನುದಾನ: ಸಣ್ಣ ನೀರಾವರಿ ಇಲಾಖೆಗೆ ಪ್ರಸಕ್ತ 2026-27ನೇ ಸಾಲಿಗೆ ಒಟ್ಟು 3,333 ಕೋಟಿ ರೂ. ಅನುದಾನ ನೀಡಲಾಗಿದೆ. ರಾಜ್ಯದಾದ್ಯಂತ ಸಣ್ಣ ನೀರಾವರಿ ಇಲಾಖೆ ಅಧೀನದ 3,810 ಕೆರೆಗಳ ಪೈಕಿ 925 ಕೆರೆಗಳನ್ನು ನೀರು ತುಂಬಿಸುವ ಯೋಜನೆ ಹಾಕಿಕೊಂಡಿದ್ದೇವೆ. ಕಳೆದ 2024-25 ಮತ್ತು 2025-26ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆಯಡಿ 9,829 ಮತ್ತು ಗಿರಿಜನ ಉಪ ಯೋಜನೆಯಡಿ 6,165 ರೈತರಿಗೆ ಕೊಳವೆ ಬಾವಿ ಕೊರೆದು ವಿದ್ಯುತ್ ಸಂಪರ್ಕ ಒದಗಿಸಿ ನೀರಾವರಿ ಸೌಲಭ್ಯ ಕಲ್ಪಿಸಿದೆ ಎಂದು ಅಜಯ್ ಸಿಂಗ್ ತಿಳಿಸಿದರು.ಪ್ರಸಕ್ತ 2026-27ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ 1,811 ಕೋಟಿ ರೂ. ಅಂದಾಜು ಮೊತ್ತದಲ್ಲಿ 8 ಏತ ನೀರಾವರಿ ಯೋಜನೆಗಳ ಮೂಲಕ ಸುಮಾರು 88 ಕೆರೆ ತುಂಬಿಸುವ ಕಾಮಗಾರಿ ಪ್ರಗತಿಯಲ್ಲಿದೆ. ಪ್ರದೇಶದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಲು ಕಳೆದ 2025-26ನೇ ಸಾಲಿನಲ್ಲಿ ಮಂಡಳಿ ಮತ್ತು ಸಣ್ಣ ನೀರಾವರಿ ಇಲಾಖೆ ಶೇ.50-50 ಸುಮಾರು 200 ಕೋಟಿ ರೂ. ಅನುದಾನದಲ್ಲಿ ಶಿರಪೂರ ಮಾದರಿಯ ಸರಣಿ ಚೆಕ್ ಡ್ಯಾಂ ಮತ್ತು ಕೆರೆ ಅಭಿವೃದಿಯ್ದ 13 ಕಾಮಗಾರಿ ಕೈಗೆತ್ತಿಕೊಂಡಿದೆ ಎಂದರು.ಕಲಬುರಗಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 343 ಕೋಟಿ ರೂ. ವೆಚ್ಚದಲ್ಲಿ ಜಿಲ್ಲೆಯಲ್ಲಿ ಒಟ್ಟು 3 ಏತ ನೀರಾವರಿ ಯೋಜನೆ ಮೂಲಕ ಸುಮಾರು 19 ಕರೆ ತುಂಬಿಸುವ ಯೋಜನೆ ಪ್ರಗತಿಯಲ್ಲಿದೆ. ಸೇಡಂ ತಾಲೂಕಿನ ಬರ ಪೀಡಿತ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ 89.30 ಕೋಟಿ ರೂ. ವೆಚ್ಚದ ಬೀರನಳ್ಳಿ ಏತ ನೀರಾವರಿ ಯೋಜನೆ ಮತ್ತು 82.50 ಕೋಟಿ ರೂ. ವೆಚ್ಚದ ಕಾಚೂರ ಹತ್ತಿರ ಏತ ನೀರಾವರಿ ಯೋಜನೆ ಸೇರಿವೆ. ಇದಲ್ಲದೆ 197.71 ಕೋಟಿ ರೂ. ಮೊತ್ತದ ಕಲಬುರಗಿ ದಕ್ಷಿಣ ಕ್ಷೇತ್ರದಲ್ಲಿ 9 ಕೆರೆಗಳಿಗೆ ಕುಡಿಯುವ ನೀರು ಮತ್ತು ಅಂತರ್ಜಲ ಅಭಿವೃದ್ದಿಗೆ ಬೆಣ್ಣೆತೋರಾ ಜಲಾಶಯದ ಮೇಲ್ಭಾಗದಿಂದ ಏತ ನೀರಾವರಿ ಮೂಲಕ ನೀರು ತುಂಬಿಸುವ ಯೋಜನೆ ಮತ್ತು ಚಿತ್ತಾಪುರ ತಾಲೂಕಿನಲ್ಲಿ 135 ಕೋಟಿ ರೂ. ಮೊತ್ತದಲ್ಲಿ 9 ಕೆರೆ ತುಂಬಿಸುವ ಯೋಜನೆ ಸಹ ಪ್ರಗತಿಯಲ್ಲಿವೆ.130 ಕೋಟಿ ರೂ. ವೆಚ್ಚದಲ್ಲಿ ಜೇವರ್ಗಿ ತಾಲೂಕಿನ ಹರವಾಳ ಬ್ರಿಡ್ಜ್-ಕಂ-ಬ್ಯಾರೇಜ್ ನಿರ್ಮಾಣ ಸಹ ಮಾಡಲಾಗುತ್ತಿದೆ ಎಂದರು.

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ಈಗಾಗಲೆ ಮೊದಲನೇ ಸುತ್ತಿನ ಸಭೆ ನಡೆಸಿದ್ದು, ಪ್ರದೇಶದಲ್ಲಿ ಪ್ಲಾನೇಟರಿಯಂ, ಸೈನ್ಸ್ ಸೆಂಟರ್, ಸೈನ್ಸ್ ಸಿಟಿ ಸ್ಥಾಪಿಸಲು ಯೋಜನೆ ರೂಪಿಸಲಾಗುವುದು. ಜಿಲ್ಲೆಯವರೆಯಾದ ಸಚಿವ ಪ್ರಿಯಾಂಕ್ ಖರ್ಗೆ ಅವರು ಐ.ಟಿ.-ಬಿ.ಟಿ. ಸಚಿವರಾಗಿರುವುದರಿಂದ ಅವರೊಂದಿಗೆ ಚರ್ಚಿಸಿ ಮುಂದಿನ ದಿನದಲ್ಲಿ ಈ ಯೋಜನೆಗಳ ನೀಲಿ ನಕ್ಷೆ ಸಿದ್ದಪಡಿಸಲಾಗುವದು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾಗಿರುವ ಡಾ. ಅಜಯ್ ಸಿಂಗ್ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ, ಅಫಜಲಪೂರ ಶಾಸಕ ಎಂ.ವೈ.ಪಾಟೀಲ, ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ, ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಶರಣಕುಮಾರ ಮೋದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಲಬುರಗಿಯಲ್ಲಿ ಉದ್ಯಮಿ ಪಾಟೀಲ್‌ ಪುಣ್ಯಸ್ಮರಣೆ
ಕಲಬುರಗಿ: ಲೋಕಕಲ್ಯಾಣಾರ್ಥ ಲಕ್ಷ ಗಾಯತ್ರಿ ಜಪ