ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಸೋದ್ಯಮ ದೃಷ್ಟಿಯಲ್ಲಿ ಮೈಸೂರಿಗೆ ಸಾಕಷ್ಟು ಯೋಜನೆ ರೂಪಿಸಬೇಕಿದೆ. ಅಂತೆಯೇ ಸಂಸದರಾಗಿದ್ದ ಪ್ರತಾಪ ಸಿಂಹ ಅವರ ಅವಧಿಯಲ್ಲಿ ಕೈಗೊಂಡಿದ್ದ ಕೆಲಸಗಳ ಪ್ರಗತಿ ಪರಿಶೀಲನೆಗೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅಧಿಕಾರಿಗಳ ಸಮಯ ನೋಡಿಕೊಂಡು ಪರಿಶೀಲಿಸಲಾಗುವುದು ಎಂದರು.
ಚಾಮುಂಡಿ ಬೆಟ್ಟ ಒಂದು ಧಾರ್ಮಿಕ ಕ್ಷೇತ್ರ. ಅಲ್ಲಿಗೆ ರೋಪ್ ವೇ ಅಗತ್ಯವಿಲ್ಲ. ಇನ್ನು ವಿಮಾನ ನಿಲ್ದಾಣ ವಿಸ್ತರಣೆ, ಹೆಚ್ಚು ವಿಮಾನಗಳ ಹಾರಾಟ ವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಮೈಸೂರಿನಲ್ಲಿರುವ ಪ್ರವಾಸಿ ತಾಣಗಳಿಗೆ ಸೂಕ್ತ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳ ಜತೆ ಮಾತನಾಡಿ ಕ್ರಮ ಕೈಗೊಳ್ಳುತ್ತೇನೆ. ಅಭಿವೃದ್ಧಿಯ ದೃಷ್ಟಿಯಿಂದ ಅಗತ್ಯಬಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಭೇಟಿ ಆಗುತ್ತೇನೆ ಎಂದರು.ಇಂದಿನಿಂದ ನರಸಿಂಹರಾಜ ಕ್ಷೇತ್ರದಲ್ಲಿ ಪ್ರವಾಸ ಆರಂಭಿಸಿದ್ದೇನೆ. ಆ ಭಾಗದಲ್ಲಿ ಪಾದಯಾತ್ರೆ ನಡೆಸಿ ಜನರ ಸಮಸ್ಯೆ ಆಲಿಸುತ್ತೇನೆ. ಮೈಸೂರು- ಕೊಡಗು ಕ್ಷೇತ್ರ ದೊಡ್ಡ ಕ್ಷೇತ್ರ. ಇಲ್ಲಿ ಜನರನ್ನು ಭೇಟಿಯಾಗುವುದೇ ಸವಾಲು. ಆದರೆ, ಸಮಯ ತೆಗೆದುಕೊಂಡು ಜನರನ್ನು ಭೇಟಿ ಆಗುತ್ತೇನೆ. ಭ್ರಷ್ಟಮುಕ್ತ ಕೆಲಸದ ತತ್ವದೊಡನೆ ನಾನು ಮುಂದುವರೆಯುತ್ತೇನೆ ಎಂದರು.
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಯಿಂದಲೇ ಅವರು ಅಧಿಕಾರಕ್ಕೆ ಬಂದಿದ್ದಾರೆ. ಈ ಸಂಬಂಧ ಸಾರ್ವಜನಿಕರ ಅಭಿಪ್ರಾಯ ಗಮನಿಸಿದರೆ ಈ ಯೋಜನೆ ಇರಲಿ. ಆದರೆ, ಮುಂದುವರೆಸುವುದು ಬಿಡುವುದು ಸರ್ಕಾರದ ಇಚ್ಛೆ. ನಾನು ಚುನಾವಣೆಗೂ ಕುವೆಂಪುನಗರದಲ್ಲಿ ಕಚೇರಿ ಆರಂಭಿಸಿದ್ದೆ. ಸರ್ಕಾರದ ಅಧಿಕೃತ ಕಚೇರಿ ಆರಂಭ ಆಗುವವರಗೂ ಅಲ್ಲಿಯೇ ಸಿಗುತ್ತೇನೆ ಎಂದರು.
ಕರ್ನಾಟಕದಿಂದ ಐವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ದೊರಕಿದೆ. ಈ ಹಿನ್ನೆಲೆಯಲ್ಲಿ ಸಮಸ್ಥ ಕನ್ನಡಿಗರ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಗುರುವಾರ ಸುದ್ದಿಗಾರರೊಡನೆ ಮಾತನಾಡಿದ ಅವರು, ಅವುಗಳನ್ನೇ ಮತ್ತೆ ಪುನರ್ ನವೀಕರಿಸಬಹುದು. ಅವುಗಳನ್ನು ಕೆಡವಿ ನಿರ್ಮಿಸುವ ಅಗತ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.