ದೊಡ್ಡಬಳ್ಳಾಪುರ: ಕರ್ನಾಟಕ ಜಾನಪದ ಪರಿಷತ್ತು ಮತ್ತು ದೊಡ್ಡಬಳ್ಳಾಪುರ ಗಾಳಿಪಟ ಕಲಾ ಸಂಘದ ವತಿಯಿಂದ ನಗರದ ಭುವನೇಶ್ವರಿ ನಗರದ ಮುನಿನಂಜಪ್ಪನವರ ಜಮೀನಲ್ಲಿ 2025ನೇ ಸಾಲಿನ ರಾಜ್ಯ ಮಟ್ಟದ ಗಾಳಿಪಟ ಉತ್ಸವ ಸಮಾರೋಪ ಸಮಾರಂಭ ನಡೆಯಿತು.
ಚಿಂತಕ ಪ್ರೊ.ಎಂ.ಜಿ.ಚಂದ್ರಶೇಖರಯ್ಯ ಮಾತನಾಡಿ, ಜಾಗತೀಕರಣದ ಇಂದಿನ ದಿನಗಳಲ್ಲಿ ಗ್ರಾಮೀಣ ಕ್ರೀಡೆಗಳು, ಪರಂಪರೆಗಳು ಮರೆಯಾಗುತ್ತಿವೆ. ನಮ್ಮ ಜಾನಪದ ಸಂಸ್ಕೃತಿಯಲ್ಲಿ ಜನರ ಬಾವೈಕ್ಯತೆಗೆ ಪೂರಕವಾದ, ಗ್ರಾಮೀಣ ಕ್ರೀಡೆಗಳು, ಉತ್ಸವಗಳು ಹಿಂದಿನಿಂದಲೂ ಆಚರಣೆ ಮಾಡುತ್ತಿದ್ದು ಜನರ ಸಾಮೂಹಿಕ ಭಾಗವಹಿಸುವಿಕೆಗೆ ಇಂಬು ನೀಡುತ್ತವೆ. ಆದರೆ, ಇತ್ತೀಚೆಗೆ ಕಬ್ಬಡಿ, ಖೋಖೋ ಮೊದಲಾದ ಗ್ರಾಮೀಣ ಕ್ರೀಡೆಗಳು ಕಾರ್ಪೊರೇಟ್ ವ್ಯವಸ್ಥೆಗೆ ಸಿಕ್ಕಿ ಹಣ ಮಾಡಲು ಬಳಸಿಕೊಳ್ಳಲಾಗುತ್ತಿದೆ. ಈ ದಿಸೆಯಲ್ಲಿ ಜಾನಪದ ಕಲೆಗಳನ್ನು ಉಳಿಸಿ, ಬೆಳೆಸಬೇಕಾದರೆ ಜನರ ಭಾಗವಹಿಸುವಿಕೆ ಮುಖ್ಯವಾಗಿದೆ. ಗಾಳಿಪಟದಂತಹ ಕಲೆಗಳು ಮುಂದಿನ ಪೀಳಿಗೆಗೂ ಕೊಂಡೊಯ್ಯಬೇಕಿದೆ ಎಂದು ಹೇಳಿದರು.
ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಪ್ರೊ.ಹಿ.ಚಿ.ಬೋರಲಿಂಗಯ್ಯ ಮಾತನಾಡಿ, ಜಾನಪದ ತಜ್ಞ, ಎಚ್.ಎಲ್ ನಾಗೇಗೌಡರ ಪರಿಶ್ರಮದಿಂದಾಗಿ ರೂಪುಗೊಂಡಿರುವ ಕರ್ನಾಟಕ ಜಾನಪದ ಪರಿಷತ್ತು ಹಲವು ರಚನಾತ್ಮಕ ಕಾಠ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ನಮ್ಮ ಪಾರಂಪರಿಕ ಕಲೆಯಾದ ಗಾಳಿಪಟದ ಬಗ್ಗೆ ಪ್ರಚುರಪಡಿಸಲು, ಗಾಳಿಪಟ ಉತ್ಸವ ಸ್ಪರ್ಧೆಗಳನ್ನು ದೊಡ್ಡಬಳ್ಳಾಪುರದಲ್ಲಿ ಏರ್ಪಡಿಸಲಾಗಿದೆ. ಉತ್ಸವ ಪರಿಪತ್ತಿನ ಕಾಠ್ಯಕ್ರಮಗಳಿಗೆ ಎಲ್ಲರ ಸಹಕಾರ ದೊರೆತರೆ ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸಲು ಸಾಧ್ಯವಾಗಲಿದೆ. ಎಂದು ತಿಳಿಸಿದರು.ದೊಡ್ಡಬಳ್ಳಾಪುರ ಗಾಳಿಪಟ ಕಲಾಸಂಘದ ಅಧ್ಯಕ್ಷ ಎಲ್.ಎನ್.ಶ್ರೀನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರಾದ ವೆಂಕಟರಾಜು(ನಾದಸ್ವರ ವಾದಕರು), ಕೆ.ಪಿ.ಪ್ರಕಾಶ್ (ನಾಟಕ ಆಕಾಡೆಮಿ ಪ್ರಶಸ್ತಿ ಪುರಸ್ಕೃತರು), ಎನ್.ಎಂ.ನಟರಾಜ್ (ಪತ್ರಿಕೋದ್ಯಮ), ಗಂಗಾಧರ (ಯಕ್ಷಗಾನ ಭಾಗವತರು), ಪೈಲ್ವಾನ್ ಒಳಪ್ಪ (ಕ್ರೀಡೆ) ಅವರನ್ನು ಸನ್ಮಾನಿಸಲಾಯಿತು.
ಕರ್ನಾಟಕ ಜಾನಪದ ಮಷತ್ತಿನ ಮ್ಯಾನೇಜಿಂಗ್ ಟ್ರಸ್ಟಿ ಅದಿತ್ಯ ನಂಜರಾಜ್, ನಗರಸಭೆ ಸದಸ್ಯ ಆರ್. ಲಕ್ಷ್ಮೀಪತಿ, ನಗರಸಭೆ ಮಾಜಿ ಅಧ್ಯಕ್ಷ ಕೆ.ಬಿ.ಮುದ್ದಪ್ಪ ದೊಡ್ಡಬಳ್ಳಾಪುರ ಗಾಳಿಪಟ ಕಲಾಸಂಘದ ಕಾರ್ಯದರ್ಶಿ ಪ್ರಕಾಶ್, ಖಜಾಂಚಿ ವಿಶ್ವನಾಥ್, ಸಹಕಾರ್ಯದರ್ಶಿ ಜೆ.ವಿ.ಸುಬ್ರಹ್ಮಣ್ಯ ಸೇರಿದಂತೆ ಸಂಘದ ಸದಸ್ಯರು ಭಾಗವಹಿಸಿದ್ದರು.ಫೋಟೋ-14ಕೆಡಿಬಿಪಿ2-
ದೊಡ್ಡಬಳ್ಳಾಪುರ ಗಾಳಿಪಟ ಕಲಾಸಂಘದ ವತಿಯಿಂದ ನಡೆದ ಗಾಳಿಪಟ ಉತ್ಸವದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಶಾಸಕ ಧೀರಜ್ ಮುನಿರಾಜು ಸನ್ಮಾನಿಸಿದರು.