ಮಹಿಳೆಯರ ಸ್ವಾವಲಂಬನೆಗೆ ಯೋಜನೆ ಶಕ್ತಿ: ಅರುಣಕುಮಾರ

KannadaprabhaNewsNetwork |  
Published : Jul 19, 2025, 02:00 AM IST
ಅಫಜಲ್ಪುರ ಪಟ್ಟಣದಲ್ಲಿ ಶಕ್ತಿ ಯೋಜನೆ ಯಶಸ್ಸಿನ ಕಾರ್ಯಕ್ರಮ ನಡೆಯಿತು.  | Kannada Prabha

ಸಾರಾಂಶ

ರಾಜ್ಯದ ಸಾರಿಗೆ ಬಸ್‌ಗಳಲ್ಲಿ ಉಚಿತ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಶಕ್ತಿ ಯೋಜನೆಯಿಂದ ಮಹಿಳೆಯರ ಸ್ವಾವಲಂಬಿ ಬದುಕಿಗೆ ಅನುಕೂಲವಾಗಿದೆ ಎಂದು ಕೆಪಿಸಿಸಿ ಸದಸ್ಯ ಅರುಣಕುಮಾರ ಎಂ.ವೈ ಪಾಟೀಲ್ ಹೇಳಿದರು.

ಚವಡಾಪುರ: ರಾಜ್ಯದ ಸಾರಿಗೆ ಬಸ್‌ಗಳಲ್ಲಿ ಉಚಿತ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಶಕ್ತಿ ಯೋಜನೆಯಿಂದ ಮಹಿಳೆಯರ ಸ್ವಾವಲಂಬಿ ಬದುಕಿಗೆ ಅನುಕೂಲವಾಗಿದೆ ಎಂದು ಕೆಪಿಸಿಸಿ ಸದಸ್ಯ ಅರುಣಕುಮಾರ ಎಂ.ವೈ ಪಾಟೀಲ್ ಹೇಳಿದರು.

ಶಕ್ತಿ ಯೋಜನೆಯಡಿ ರಾಜ್ಯದಾದ್ಯಂತ 500 ಕೋಟಿ ಸಲ ಮಹಿಳೆಯರು ಪ್ರಯಾಣ ಮಾಡಿದ ಹಿನ್ನೆಲೆ ರಾಜ್ಯವ್ಯಾಪಿ ನಡೆದ ಸಂಭ್ರಮಾಚರಣೆಯ ಭಾಗವಾಗಿ ಅಫಜಲ್ಪುರ ಪಟ್ಟಣದ ಬಸ್ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರೊಂದಿಗೆ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳು ಜನರ ಬದುಕಿಗೆ ಆಸರೆಯಾಗಿವೆ. ಸರ್ಕಾರ ರೂಪಿಸುವ ಯೋಜನೆ ಜನರಿಗೆ ತಲುಪಿ ಅವರ ಬದುಕಲ್ಲಿ ಮಹತ್ತರ ಬದಲಾವಣೆ ತರುವುದು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮಾತ್ರ. ಹೀಗಾಗಿ ರಾಜ್ಯದ ಜನ ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಇಟ್ಟಿದ್ದಾರೆ ಎಂದು ಹೇಳಿದರು.

ಉಚಿತ ಬಸ್ ಪ್ರಯಾಣಿದಿಂದಾಗಿ ಬೇರೆ ಬೇರೆ ಕಡೆ ಕೆಲಸ ಮಾಡುತ್ತಿರುವ ನಮಗೆ ಶಕ್ತಿ ಯೋಜನೆಯಿಂದ ಸಾಕಷ್ಟು ಅನುಕೂಲವಾಗಿದೆ ಎಂದು ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯನ್ನು ಕೊಂಡಾಡಿದರು.

ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಪ್ರಕಾಶ ಜಮಾದಾರ, ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಜೆ.ಎಂ ಕೊರಬು, ಕೆಪಿಸಿಸಿ ಸದಸ್ಯ ಅಫ್ತಾಬ್ ಪಟೇಲ್, ಯುವ ಕಾಂಗ್ರೆಸ್ ಅಧ್ಯಕ್ಷ ಅಣವೀರಯ್ಯ ಮಠಪತಿ, ಪ್ರವೀಣ ಕಲ್ಲೂರ, ಪ್ರಮುಖರಾದ ಸಿದ್ಧಾರ್ಥ ಬಸರಿಗಿಡ, ಮತೀನ್ ಪಟೇಲ್, ಅನಸೂಯ ಸುಲೇಕರ, ಬಿಸ್ಮಿಲ್ಲಾ, ತಹಸೀಲ್ದಾರ ಸಂಜೀವಕುಮಾರ ದಾಸರ್, ತಾ.ಪಂ ಇಒ ವೀರಣ್ಣ ಕವಲಗಿ, ಘಟಕ ವ್ಯವಸ್ಥಾಪಕ ಎ.ಎ ಭೋವಿ, ರವಿ ನಾಟಿಕಾರ ಅನೇಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿವೈಆರ್‌
ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಎಲ್ಲರ ಸಹಕಾರ ಅಗತ್ಯ: ಡಾ.ನೂರಲ್ ಹುದಾ ಕರೆ