ಉಡುಪಿ: ಅಂಗಡಿ ಬಾಡಿಗೆದಾರರೊಂದಿಗೆ ಯಶ್ಪಾಲ್‌ ಸಭೆ

KannadaprabhaNewsNetwork |  
Published : Jan 14, 2024, 01:32 AM IST
ಬಾಡಿಗೆ ಅಂಗಡಿದಾರರೊಂದಿಗೆ ಶಾಸಕ ಯಶಪಾಲ್ ಸುವರ್ಣ ಸಭೆ | Kannada Prabha

ಸಾರಾಂಶ

ಉಡುಪಿ ಸರ್ವೀಸ್‌ ಮತ್ತು ಸಿಟಿ ಬಸ್‌ ನಿಲ್ದಾಣವನ್ನು ಆಧುನಿಕ ರೀತಿಯಲ್ಲಿ ನಿರ್ಮಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಶಾಸಕ ಯಶ್‌ಪಾಲ್‌ ಸುವರ್ಣ ಹೇಳಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ನಗರಸಭೆಯ ಸಿಟಿ ಬಸ್ ನಿಲ್ದಾಣ, ಸರ್ವೀಸ್ ಬಸ್ ನಿಲ್ದಾಣ, ವಿಶ್ವೇಶ್ವರಯ್ಯ ಮಾರುಕಟ್ಟೆ ಕಟ್ಟಡದ ವಾಣಿಜ್ಯ ಕಟ್ಟಡದ ಅಂಗಡಿ ಬಾಡಿಗೆದಾರ ರೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಸಭೆ ನಡೆಸಿದರು.

ಉಡುಪಿ ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಉಡುಪಿ ನಗರ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ನಗರದ ವಾಹನ ದಟ್ಟಣೆ, ಪಾರ್ಕಿಂಗ್ ಕೊರತೆಯಿಂದ ಜನಸಾಮಾನ್ಯರಿಗೆ ತೀವ್ರ ಸಮಸ್ಯೆ ಉಂಟಾಗುತ್ತಿದೆ. ಈಗಾಗಲೇ ನಗರಸಭೆ ವತಿಯಿಂದ ವೈಜ್ಞಾನಿಕ ರೀತಿಯಲ್ಲಿ ಸಿಟಿ ಬಸ್ ನಿಲ್ದಾಣ, ಸರ್ವೀಸ್ ಬಸ್ ನಿಲ್ದಾಣವನ್ನು ಆಧುನಿಕ ಶೈಲಿಯಲ್ಲಿ ವೈಜ್ಞಾನಿಕ ರೀತಿಯಲ್ಲಿ ನಿರ್ಮಿಸಲು ಯೋಜನೆ ರೂಪಿಸುತ್ತಿದೆ.

ಶೀಘ್ರದಲ್ಲೇ ಪರಿಣಿತರ ಮೂಲಕ ಈ ಬಗ್ಗೆ ನೀಲನಕ್ಷೆ ತಯಾರಿಸಿ ನೆಲ ಅಂತಸ್ತು ಸಹಿತ ಮಲ್ಟಿ ಲೆವೆಲ್ ಪಾರ್ಕಿಂಗ್ ವ್ಯವಸ್ಥೆ, ವಾಣಿಜ್ಯ ಅಂಗಡಿಗಳು ಹಾಗೂ ಸುಸಜ್ಜಿತ ಬಸ್ ನಿಲ್ದಾಣದ ನಿರ್ಮಾಣದ ಬಗ್ಗೆ ಕಾರ್ಯಪ್ರವೃತ್ತವಾಗಿದ್ದು ಇದಕ್ಕೆ ಅಂಗಡಿ ಬಾಡಿಗೆದಾರರ ಸಲಹೆ ಸಹಕಾರ ಕೋರಿದರು.ಸಭೆಯಲ್ಲಿ ಉಪಸ್ಥಿತರಿದ್ದ ಅಂಗಡಿ ಬಾಡಿಗೆದಾರರು ನಗರದ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರದ ಆಶಯ ವ್ಯಕ್ತಪಡಿಸಿದರು. ಸಭೆಯಲ್ಲಿ ನಗರಸಭೆ ಪೌರಾಯುಕ್ತರಾದ ರಾಯಪ್ಪ, ನಗರ ಸಭೆ ಸದಸ್ಯರಾದ ಪ್ರಭಾಕರ ಪೂಜಾರಿ, ಬಾಲಕೃಷ್ಣ ಶೆಟ್ಟಿ, ಅಧಿಕಾರಿಗಳು ಉಪಸ್ಥಿತರಿದ್ದರು.ಪ್ಲಾಟ್ ಮನೆ ಹಸ್ತಾಂತರಕ್ಕೆ ಸಿದ್ಧ

ನಗರಸಭೆ ವತಿಯಿಂದ ಹೆರ್ಗ ಗ್ರಾಮದ ಸರಳಬೆಟ್ಟುವಿನಲ್ಲಿ ಮನೆ ಇಲ್ಲದ ಬಡವರಿಗಾಗಿ ನಿರ್ಮಿಸಲಾಗಿರುವ ಪ್ಲಾಟ್ ಮಾದರಿಯ ವಸತಿ ಸಮುಚ್ಚಯದ ಕಾಮಗಾರಿ ಸಂಪೂರ್ಣಗೊಂಡಿದ್ದು, ಇದೀಗ ಫಲಾನುಭವಿಗಳಿಗೆ ಹಸ್ತಾಂತರಿಸಲು ಸಿದ್ಧವಾಗಿದೆ ಎಂದು ಶಾಸಕರು ತಿಳಿಸಿದ್ದಾರೆ.

ನಗರಸಭೆ ಹಾಗೂ ಕೊಳಗೇರಿ ಅಭಿವೃದ್ದಿ ಮಂಡಳಿ ಜಂಟಿಯಾಗಿ ನಿರ್ಮಿಸಿದ ಈ ಯೋಜನೆಯಲ್ಲಿ 240 ಫಲಾನುಭವಿಗಳ ಮನೆಗಳನ್ನು ನಿರ್ಮಿಸಲಾಗಿದೆ. 29 ಫಲಾನುಭವಿಗಳು ದಾಖಲೆಗಳ ಸಮಸ್ಯೆಯಿಂದ ಬ್ಯಾಂಕ್ ಸಾಲ ಪ್ರಕ್ರಿಯೆ ಬಾಕಿ ಇದ್ದು, ಈ ಬಗ್ಗೆ ಮುತುವರ್ಜಿವಹಿಸಿ ಸಾಲ ಮಂಜೂರಾತಿಗೆ ಸಹಕರಿಸುವಂತೆ ಬ್ಯಾಂಕ್ ಅಧಿಕಾರಿಗಳಿಗೆ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

15 ದಿನದ ಹಿಂದೆ ಮದುವೆ ಆಗಿದ್ದ ಜೋಡಿ ಭೀಕರ ಅಪಘಾತಕ್ಕೆ ಬಲಿ
ಶ್ರೀಮಂತರು ಗ್ಯಾರಂಟಿಯಿಂದ ದೂರ ಇರಲಿ: ಎಂ.ಬಿ.ಪಾಟೀಲ್‌