76ನೇ ಗಣರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಕನ್ನಡಪ್ರಭ ವಾರ್ತೆ, ಬೀರೂರುಪುರಸಭಾ ಕಚೇರಿ ಆವರಣದಲ್ಲಿ ನಡೆದ 76ನೇ ಗಣರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಜಯದೇವಪ್ಪ ಮಾಹಿತಿ ನೀಡಿ ಪ್ರಧಾನ ಸಮಾರಂಭ ಕೆ.ಎಲ್.ಕೆ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ನಾಗರಿಕರ ಪರವಾಗಿ ಸೋಮಶೇಖರ್ ಮಾತನಾಡಿ, ಮಕ್ಕಳಿಗೆ ಗಣರಾಜ್ಯೋತ್ಸವ ಹಾಗೂ ರಾಷ್ಟ್ರೀಯ ಹಬ್ಬಗಳ ಬಗ್ಗೆ ಅರಿವು ಮೂಡಿಸುವಲ್ಲಿ ಸಂಜೆ ವೇದಿಕೆ ಕಾರ್ಯಕ್ರಮ ಆಯೋಜಿಸುವಂತೆ ಶಿಕ್ಷಣ ಇಲಾಖೆ ಹಾಗೂ ವಿವಿಧ ಸಂಘಗಳಿಗೆ ತಿಳಿಸುವಂತೆ ಪುರಸಭೆಗೆ ಮನವಿ ಮಾಡಿದರು.ಪುರಸಭೆ ಅಧ್ಯಕ್ಷೆ ವನಿತಾ ಮಧು ಬಾವಿಮನೆ ಮಾತನಾಡಿ, ಗಣರಾಜ್ಯೋತ್ಸವ ದೇಶದ ಸಂಭ್ರಮದ ಹಬ್ಬ. ಎಲ್ಲರ ಸಹಭಾಗಿತ್ವದಿಂದ ಹಬ್ಬಕ್ಕೆ ಮೆರಗು ನೀಡಲು ಸಾಧ್ಯ. ನಿಮ್ಮಿಂದ ಬಂದಿರುವ ಸಲಹೆ ಸೂಚನೆಗಳನ್ನು ಪರಿಗಣಿಸಿ ಉತ್ತಮ ರೀತಿಯಲ್ಲಿ ಹಬ್ಬಆಚರಿಸುವುದಾಗಿ ತಿಳಿಸಿದರು. ಮಕ್ಕಳಿಗೆ ಸಿಹಿ ವಿತರಿಸಲು ಪುರಸಭೆ ಕ್ರಮವಹಿಸಲಿದೆ ಎಂದರು.ಸಭೆಯಲ್ಲಿ ಪೊಲೀಸ್ ಠಾಣೆ ಪಿಎಸ್ಐ ಸಜಿತ್ ಕುಮಾರ್, ಪುರಸಭೆ ಉಪಾಧ್ಯಕ್ಷ ಎನ್.ಎಂ.ನಾಗರಾಜ್, ಮುಖ್ಯಾಧಿಕಾರಿ ಜಿ. ಪ್ರಕಾಶ್, ಪುರಸಭೆ ಸದಸ್ಯರಾದ ಬಿ.ಆರ್. ಮೋಹನ್ ಕುಮಾರ್, ಮಾನಿಕ್ ಬಾಷಾ, ಲೋಕೇಶಪ್ಪ, ಸಹನಾ, ಭಾಗ್ಯಲಕ್ಷ್ತ್ರ್ಮಿ ಹಾಗೂ ವಿವಿಧ ಶಾಲಾ ಕಾಲೇಜುಗಳ ಶಿಕ್ಷಕರು, ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಇದ್ದರು.13 ಬೀರೂರು 1aಪುರಸಭೆ ಸಭಾಂಗಣದಲ್ಲಿ 76ನೇ ಗಣರಾಜ್ಯೋತ್ಸವ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷೆ ವನಿತಾ ಮಧು ಬಾವಿಮನೆ, ಉಪಾಧ್ಯಕ್ಷ ಎನ್.ಎಂ.ನಾಗರಾಜ್, ಮುಖ್ಯಾಧಿಕಾರಿ ಜಿ.ಪ್ರಕಾಶ್ಇ ದ್ದರು.