ಕೆಜಿಎಫ್‌ಗೆ ಬೆಂಗಳೂರಿಗಿಂತ ಉತ್ತಮ ಸೌಲಭ್ಯ ಕಲ್ಪಿಸಲು ಯೋಜನೆ

KannadaprabhaNewsNetwork |  
Published : Jun 28, 2025, 12:18 AM IST
27ಕೆಜಿಎಫ್‌1 | Kannada Prabha

ಸಾರಾಂಶ

ಕೆಂಪೇಗೌಡರು ದೂರದೃಷ್ಟಿಯನ್ನು ಹೊಂದಿದ್ದ ಮಹಾನ್ ವ್ಯಕ್ತಿ. ಕೇವಲ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ. ಸಮಾಜದಲ್ಲಿನ ಎಲ್ಲ ಸಮುದಾಯಗಳ ಏಳಿಗೆಗಾಗಿ ಯೋಚಿಸಿ ಬೆಂಗಳೂರಿನಲ್ಲಿ ಪ್ರತಿಯೊಂದು ಸಮುದಾಯದವರಿಗೆ ಒಂದೊಂದು ಬೀದಿಗಳನ್ನು ನಿರ್ಮಿಸಿದ್ದರು. ಮಹನೀಯರ ಜಯಂತಿಗಳನ್ನು ಆಚರಿಸುವ ಸಂದರ್ಭದಲ್ಲಿ ಅವರ ಜೀವನ ಚರಿತ್ರೆಯನ್ನು ಅರಿತುಕೊಳ್ಳಬೇಕು

ಕನ್ನಡಪ್ರಭ ವಾರ್ತೆ ಕೆಜಿಎಫ್ಬೆಂಗಳೂರಿಗಿಂತಲೂ ಉತ್ತಮವಾಗಿ ತಾಲೂಕಿನಲ್ಲಿ ಗುಣಮಟ್ಟದ ರಸ್ತೆಗಳು, ಸುಂದರವಾದ ಉದ್ಯಾನ, ಬೀದಿದೀಪ, ಕುಡಿಯುವ ನೀರಿನ ಸೌಲಭ್ಯ ಸೇರಿದಂತೆ ಸಕಲ ರೀತಿಯ ಸೌಕರ್ಯಗಳನ್ನು ಒದಗಿಸಲು ಯೋಜನೆ ಹಾಕಿಕೊಂಡಿರುವುದಾಗಿ ಶಾಸಕಿ ರೂಪಕಲಾ ಶಶಿಧರ್ ಹೇಳಿದರು. ನಗರಸಭೆ ಸಂಭಾಗಂಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೫೧೬ನೇ ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ಕೆಂಪೇಗೌಡರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು, ಪ್ರತಿ ಸಮುದಾಯಕ್ಕೊಂದು ಬೀದಿ

ತಾಲೂಕು ಒಕ್ಕಲಿಗ ಸಂಘದ ಅಧ್ಯಕ್ಷ ರಾಜಗೋಪಾಲಗೌಡ ಮಾತನಾಡಿ, ಕೆಂಪೇಗೌಡರು ದೂರದೃಷ್ಟಿಯನ್ನು ಹೊಂದಿದ್ದ ಮಹಾನ್ ವ್ಯಕ್ತಿ. ಕೇವಲ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ. ಸಮಾಜದಲ್ಲಿನ ಎಲ್ಲ ಸಮುದಾಯಗಳ ಏಳಿಗೆಗಾಗಿ ಯೋಚಿಸಿ ಬೆಂಗಳೂರಿನಲ್ಲಿ ಪ್ರತಿಯೊಂದು ಸಮುದಾಯದವರಿಗೆ ಒಂದೊಂದು ಬೀದಿಗಳನ್ನು ನಿರ್ಮಿಸಿದ್ದರು ಎಂದರು. ಸಂಪನ್ನಮೂಲವ್ಯಕಿ ನಾಗನಂದ ಕೆಂಪರಾಜ್ ಮಾತನಾಡಿ, ಮಹನೀಯರ ಜಯಂತಿಗಳನ್ನು ಆಚರಿಸುವ ಸಂದರ್ಭದಲ್ಲಿ ಅವರ ಜೀವನ ಚರಿತ್ರೆಯ ಪುಸ್ತಕಗಳನ್ನು ನೀಡಿದಲ್ಲಿ ಅವರ ಸಾಧನೆಗಳ ಬಗ್ಗೆ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು. ಸ್ತಬ್ಧಚಿತ್ರ ಮೆರವಣಿಗೆ

ಕೆಂಪೇಗೌಡರ ಸ್ತಬ್ಧ ಚಿತ್ರಗಳು ನಗರಸಭೆ ಕಚೇರಿಯಿಂದ ಹೊರಟು, ಸೂರಜ್‌ಮಲ್ ವೃತ್ತ, ಗಾಂಧಿ ವೃತ್ತದಲ್ಲಿ ಕೆಂಪೇಗೌಡರ ಪ್ರತಿಮೆಗೆ ಪೂಜೆ ಸಲ್ಲಿಸಿ ನಂತರ ನಗರಸಭೆ ಮೈದಾನಕ್ಕೆ ಹಿಂತಿರುಗಿದವು. ಇದೇ ಸಂದರ್ಭದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ೨೫ ರೈತರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ನಾಗವೇಣಿ, ತಾಪಂ ಇಒ ವೆಂಕಟೇಶಪ್ಪ, ಪೌರಾಯುಕ್ತ ಮಂಜುನಾಥ್, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರಾದ ಧರ್ಮೇಂದ್ರ, ಬಿಇಒ ಅನಿತಾ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ನರಸಿಂಹಮೂರ್ತಿ, ಸಿಪಿಐ ನವೀನ್, ನಗರಸಭೆ ಅಧ್ಯಕ್ಷೆ ಇಂದಿರಾಗಾಂಧಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಲ್ಲಳ್ ಮುನಿಸ್ವಾಮಿ, ಸದಸ್ಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ